ಕೃಷಿ ಕೇವಲ ಉದ್ಯೋಗವಲ್ಲ, ಅದೊಂದು ಸಂಸ್ಕಾರ: ಭೀಮಣ್ಣ ನಾಯ್ಕ

KannadaprabhaNewsNetwork |  
Published : Apr 30, 2026, 02:00 AM IST
ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದಲ್ಲಿ ಬುಧವಾರ 18ನೇ ಕೃಷಿ ಜಯಂತಿ ಕಾರ್ಯಕ್ರಮವನ್ನು ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಉದ್ಘಾಟಿಸಿದರು. | Kannada Prabha

ಸಾರಾಂಶ

ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದಲ್ಲಿ ಬುಧವಾರ 18ನೇ ಕೃಷಿ ಜಯಂತಿ ನಡೆಯಿತು. ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಉದ್ಘಾಟಿಸಿದರು.

ಶಿರಸಿ: ಭಾರತೀಯ ಪರಂಪರೆಯಲ್ಲಿ ಕೃಷಿ ಕೇವಲ ಉದ್ಯೋಗವಲ್ಲ, ಅದೊಂದು ಸಂಸ್ಕಾರ. ಇಂದಿನ ಯುವ ಪೀಳಿಗೆ ಕೃಷಿಯಿಂದ ದೂರ ಸರಿಯುತ್ತಿರುವ ಕಾಲಘಟ್ಟದಲ್ಲಿ, ಮಠ-ಮಾನ್ಯಗಳು ಕೃಷಿ ಜಯಂತಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಸಂತೋಷದ ಸಂಗತಿ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು.

ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದಲ್ಲಿ ಬುಧವಾರ ಆಯೋಜಿಸಿದ್ದ 18ನೇ ಕೃಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಶ್ರೀಗಳವರ ದೂರದೃಷ್ಟಿಯನ್ನು ಶಾಸಕರು ಸ್ಮರಿಸಿದರು.

ರೈತ ದೇಶದ ಬೆನ್ನೆಲುಬು ಎಂಬ ಮಾತು ಕೇವಲ ಘೋಷಣೆಯಾಗಬಾರದು. ರೈತರಿಗೆ ಆರ್ಥಿಕ ಭದ್ರತೆ ನೀಡುವ ಜತೆಗೆ ಅವರಿಗೆ ಸಮಾಜದಲ್ಲಿ ಗೌರವಯುತ ಸ್ಥಾನಮಾನ ಸಿಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಧಾರ್ಮಿಕ ಸಂಸ್ಥೆಗಳು ಕೈಜೋಡಿಸಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಕೃಷಿ ಕ್ಷೇತ್ರವು ಸವಾಲುಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನವು ರೈತ ಸಮುದಾಯಕ್ಕೆ ಹೊಸ ಚೇತನ್ಯ ನೀಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು 18ನೇ ಕೃಷಿ ಜಯಂತಿಯನ್ನು ಉದ್ಘಾಟಿಸಿದರು. ಜೀವನದಲ್ಲಿ ನೈತಿಕತೆ ಮತ್ತು ತಾಳ್ಮೆಯ ಮಹತ್ವದ ಬಗ್ಗೆ ಆಶೀರ್ವಚನದಲ್ಲಿ ನುಡಿದರು.

ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೃಷಿ ತಜ್ಞರು, ಮಠದ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಗಾರಿಕಾ ವಸ್ತು ಪ್ರದರ್ಶನ ಇನ್‌ಕಾಮೆಕ್ಸ್‌ಗೆ ತೆರೆ
ನಗರಸಭೆ ರಾಜಕೀಯ ಹೈಡ್ರಾಮಾ: ಬಿಜೆಪಿಯ ಮೂವರು ಸದಸ್ಯರ ಅನರ್ಹತೆ ರದ್ದು