ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಅವರು ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಅವರಲ್ಲಿರುವ ಅಪಾರ ಶಕ್ತಿ-ಸಾಮರ್ಥ್ಯ ಹಾಗೂ ಪ್ರತಿಭೆಯನ್ನು ಗುರು-ಹಿರಿಯರ ಸಕಾಲಿಕ ಮಾರ್ಗದರ್ಶನದಲ್ಲಿ ಕೃಷಿಗೆ ಬಳಸಬೇಕು. ಕೃಷಿಯಲ್ಲಿ ಭತ್ತದ ಬೀಜ ಬಿತ್ತುವುದು, ನೇಜಿನಾಟಿ, ಅದು ಬೆಳೆದು ಪೈರಾದಾಗ ಕಟಾವು ಮಾಡುವುದು, ಭತ್ತ ತೆಗೆದು ಅಕ್ಕಿ ಪಡೆಯುವುದು ಮೊದಲಾದ ವಿವಿಧ ಹಂತಗಳಲ್ಲಿ ನಾವು ಪಡೆಯುವ ಸಂತೋಷ, ತೃಪ್ತಿ, ನೆಮ್ಮದಿ ಅನುಭವಿಸಿದಾಗ ಮಾತ್ರ ಅದರ ಸೊಗಡನ್ನು ತಿಳಿಯಬಹುದು ಎಂದರು.ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ನೇಜಿನಾಟಿ ತಯಾರಿ ಬಗ್ಗೆ ಮಾಹಿತಿ ನೀಡಿದರು.
ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹನಾಯಕ್ ನೇಜಿ ನಾಟಿಯಲ್ಲಿ ಭಾಗವಹಿಸಿದರು.ಎಸ್.ಡಿ.ಎಂ. ಕಾಲೇಜಿನ ೭೫೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ನೇಜಿನಾಟಿಯಲ್ಲಿ ಪಾಲ್ಗೊಂಡರು. ನಾಲ್ಕು ಗದ್ದೆಗಳಲ್ಲಿ ನಾಲ್ಕು ಪ್ರತ್ಯೇಕ ತಂಡಗಳಲ್ಲಿ ನೇಜಿನಾಟಿ ಮಾಡಲಾಯಿತು. ಉಜಿರೆಯ ಸಂತೋಷ್ ಮತ್ತು ಶ್ರೀಕಾಂತರ ಅಲಂಕರಿಸಿದ ಕೋಣಗಳ ಜೋಡಿಯನ್ನು ಗದ್ದೆಗೆ ಇಳಿಸಿ, ಪ್ರಸಾದ ಹಾಕಿ ನೇಜಿನಾಟಿಗೆ ಚಾಲನೆ ನೀಡಲಾಯಿತು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಭತ್ತದತಳಿ ತಜ್ಞ, ಕೃಷಿಋಷಿ ಬಿ.ಕೆ. ದೇವರಾವ್ ಅವರನ್ನು ಗೌರವಿಸಲಾಯಿತು.