ಕನ್ನಡಪ್ರಭ ವಾರ್ತೆ ನಾಗಮಂಗಲ
ದೇವಸ್ಥಾನಕ್ಕೆ ಆಗಮಿಸಿದ ಸಚಿವರನ್ನು ಪ್ರಧಾನ ಅರ್ಚಕ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು ಅತ್ಮೀಯವಾಗಿ ಬರಮಾಡಿಕೊಂಡರು. ನಂತರ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು ದೇವಿಗೆ ಭಕ್ತಿ ನಮನ ಸಲ್ಲಿಸಿ ಆಶೀರ್ವಾದ ಪಡೆದುಕೊಂಡ ಬಳಿಕ ಕ್ಷೇತ್ರದ ಶ್ರೀ ಕೋಟೆಮಾರಮ್ಮದೇವಿ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಸಚಿವರು, ತಾಲೂಕು, ಜಿಲ್ಲೆ ಸೇರಿದಂತೆ ನಾಡಿಗೆ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಬೇಕು. ಜನರ ಕಷ್ಟ ಕಾರ್ಪಣ್ಯಗಳು ದೂರವಾಗಿ ಶಾಂತಿ ನೆಮ್ಮದಿಯ ಬದುಕು ನಡೆಸುವಂತಾಗಲೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳದೆ ದೇವಿಗೆ ಪೂಜೆಯೊಂದಿಗೆ ತಮ್ಮ ಭಕ್ತಿ ಭಾವ ಸಲ್ಲಿಸಿ ಆಶೀರ್ವಾದ ಪಡೆದು ಸುರಕ್ಷಿತವಾಗಿ ತೆರಳಬೇಕು ಎಂದು ತಿಳಿಸಿದರು. ನಂತರ ನೆರೆದಿದ್ದ ಭಕ್ತರಿಗೆ ಸಚಿವರು ಪ್ರಸಾದ ವಿತರಿಸಿದರು.