ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ

KannadaprabhaNewsNetwork |  
Published : Jun 02, 2025, 12:15 AM IST
1ಕೆಎಂಎನ್ ಡಿ12 | Kannada Prabha

ಸಾರಾಂಶ

ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಚರಣೆ ಮಾಡಿದ್ದೇವೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಅಭಿಮಾನಿ ಬಳಗದಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ನಾಯಕರ ಹುಟ್ಟುಹಬ್ಬದವನ್ನು ಆಚರಣೆ ಮಾಡುವ ಮೂಲಕ ಶುಭ ಹಾರೈಸಿದರು.

ಟಿಎಪಿಸಿಎಂಎಸ್ ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಆಚರಣೆ ಮಾಡಿದ್ದೇವೆ ಎಂದರು.

ಸಚಿವ ಎನ್.ಚಲುವರಾಯಸ್ವಾಮಿ ಅವರು ಕೃಷಿ ಸಚಿವರಾಗಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಜನಮೆಚ್ಚು ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೂ ಸಾಕಷ್ಟು ಅನುದಾನ ಕೊಟ್ಟು ಮಾದರಿಯಾಗಿ ಅಭಿವೃದ್ಧಿ ಪಡಿಸುತ್ತಿದ್ದಾರೆ. ಎನ್.ಚಲುವರಾಯಸ್ವಾಮಿ ಅವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯಕೊಟ್ಟು ಕಾಪಾಡಲೆಂದು ಹಾರೈಸುತ್ತೇನೆ ಎಂದರು.

ಈ ವೇಳೆ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷರಾದ ಚಂದ್ರಶೇಖರ್, ಭರತ್‌ಪಟೇಲ್, ಮುಖಂಡರಾದ ಮನೋರಂಜನ್, ಮಹಮದ್ ಹನೀಫ್ (ಪಾಪು), ಎಂಜಿನಿಯರ್ ಯೋಗೇಶ್, ಪುರಸಭೆ ಸದಸ್ಯ ಉಮಾಶಂಕರ್, ಗಂಗಾಧರ್, ಹೇಮಾದ್ರಿ, ಅಂಕಯ್ಯ, ಸೇರಿದಂತೆ ಮುಖಂಡರು ಹಾಜರಿದ್ದರು.

ಸೇವಕಿರಣ ವೃದ್ಧಾಶ್ರಮದಲ್ಲಿ ಬೆಡ್ ಶೀಟ್ ವಿತರಣೆ

ಕನ್ನಡಪ್ರಭ ವಾರ್ತೆ ಮಂಡ್ಯ

ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟು ಹಬ್ಬದ ಅಂಗವಾಗಿ ನಗರದ ಸೇವಕಿರಣ ವೃದ್ಧಾಶ್ರಮದಲ್ಲಿ ಹಿಂದುಳಿದ ವರ್ಗಗಳ ಕಾಂಗ್ರೆಸ್ ಉಸ್ತುವಾರಿ ಅಳುವಾಡಿ ವೆಂಕಟೇಶ್ ಅವರು ವೃದ್ಧರಿಗೆ ಬೆಡ್ ಶೀಟ್ ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಕ್ರಿಯಾಶೀಲ ರಾಜಕೀಯ ನಾಯಕರಾಗಿದ್ದು ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷೆಯನ್ನು ಬರೆದಿದ್ದಾರೆ. ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾನಿಲಯವನ್ನು ಕೊಡುಗೆಯಾಗಿ ನೀಡಿರುವುದಲ್ಲದೆ, ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನ ಗೊಳಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ. ಹಾಲಿ ಕಾರ್ಖಾನೆ ಸರ್ಕಾರದ ಆರ್ಥಿಕ ನೆರವಿಲ್ಲದೆ ಕಳೆದ ವರ್ಷ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದು ಈ ಬಾರಿಯೂ ಉತ್ತಮವಾಗಿ ಚಾಲನೆಗೊಳ್ಳುವ ವಿಶ್ವಾಸವಿದೆ ಎಂದರು.

ಈ ಹಿಂದೆ ಆರೋಗ್ಯ ಮತ್ತು ಸಾರಿಗೆ ಸಚಿವರಾಗಿಯೂ ಹಲವು ಮಹತ್ವದ ಬದಲಾವಣೆಗಳನ್ನು ತಂದಿದ್ದರು. ಅಭಿವೃದ್ಧಿಯ ಹಲವು ಕನಸುಗಳನ್ನು ಹೊತ್ತಿರುವ ಅವರಿಗೆ ರಾಜಕೀಯದಲ್ಲಿ ಇನ್ನೂ ಹೆಚ್ಚಿನ ಅವಕಾಶಗಳು ಲಭಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ