ಪಾಂಡವಪುರ- ತುಮಕೂರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೃಷಿ ಸಚಿವರ ಮನವಿ

KannadaprabhaNewsNetwork |  
Published : Sep 18, 2024, 01:48 AM IST
ಕೃಷಿ ಸಚಿವರ ಮನವಿ | Kannada Prabha

ಸಾರಾಂಶ

ಮೈಸೂರಿನಿಂದ ಪಾಂಡವಪುರದವರೆಗೆ ಈಗಾಗಲೇ ದಿನನಿತ್ಯ ಹಲವು ರೈಲುಗಳು ಸಂಚಾರಿಸುತ್ತಿದ್ದು ಅಲ್ಲಿಂದ ಮೇಲುಕೋಟೆ, ನಾಗಮಂಗಲ, ಬಿ.ಜಿ.ನಗರ ಮಾರ್ಗವಾಗಿ ತುಮಕೂರಿಗೆ ಸುಮಾರು 120 ಕಿಮೀ ಹೊಸ ರೈಲು ಮಾರ್ಗಕ್ಕೆ ಅವಕಾಶ ಮಾಡಿಕೊಂಡವಂತೆ ಕೃಷಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮೈಸೂರಿನಿಂದ ಪಾಂಡವಪುರ ಮೂಲಕ ತುಮಕೂರಿಗೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.

ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ಪತ್ರ ಬರೆದಿರುವ ಸಚಿವ ಚಲುವರಾಯಸ್ವಾಮಿ ಅವರು ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಕೋರಿದ್ದಾರೆ.

ಮೈಸೂರಿನಿಂದ ಪಾಂಡವಪುರದವರೆಗೆ ಈಗಾಗಲೇ ದಿನನಿತ್ಯ ಹಲವು ರೈಲುಗಳು ಸಂಚಾರಿಸುತ್ತಿದ್ದು ಅಲ್ಲಿಂದ ಮೇಲುಕೋಟೆ, ನಾಗಮಂಗಲ, ಬಿ.ಜಿ.ನಗರ ಮಾರ್ಗವಾಗಿ ತುಮಕೂರಿಗೆ ಸುಮಾರು 120 ಕಿಮೀ ಹೊಸ ರೈಲು ಮಾರ್ಗಕ್ಕೆ ಅವಕಾಶ ಮಾಡಿಕೊಂಡವಂತೆ ಕೃಷಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.

ಪಾಂಡವಪುರ ಹಾಗೂ ತುಮಕೂರು ಮಾರ್ಗವಾಗಿ ಮೇಲುಕೋಟೆ ಹಾಗೂ ಬಿ.ಜಿ.ನಗರದಂತೆ ಧಾರ್ಮಿಕ ಸ್ಥಳಗಳು ಬರುವುದರಿಂದ ಸಾವಿರಾರು ಭಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಈ ಹೊಸ ಮಾರ್ಗದಿಂದ ಅನುಕೂಲವಾಗಲಿದೆ.

ನಾಲ್ಕು ಪ್ರಮುಖ ತಾಲೂಕುಗಳು ಈ ಮಾರ್ಗದಲ್ಲಿ ಬರುವುದರಿಂದ ಈ ಭಾಗದ ತಾಲೂಕಿನ ಸಾರ್ವಜನಿಕರಿಗೆ ಹೊಸ ರೈಲು ಮಾರ್ಗದ ಪ್ರಯೋಜನ ಸಿಗಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ: ಕೆ.ಎಂ.ಉದಯ್

ಮದ್ದೂರು:ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಚೆಲುವರಾಜು ಹಾಗೂ ಅಣ್ಣೂರು ರಾಜೀವ್ ಅವರ ಪದಗ್ರಹಣ ಕಾರ್ಯಕ್ರಮ ಪಟ್ಟಣದಲ್ಲಿ ಸೆ.18ರ ಬುಧವಾರ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.

ಪಟ್ಟಣದ ಶಿವಪುರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಂಸದ ಡಿ.ಕೆ.ಸುರೇಶ್ ಉದ್ಘಾಟಿಸಲಿದ್ದಾರೆ ಎಂದು ಎಂದರು.ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ನಿಡಘಟ್ಟ ಗ್ರಾಮದಿಂದ ಶಿವಪುರದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದವರೆಗೆ ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಮತ್ತು ತಾಪಂ ಮಾಜಿ ಸದಸ್ಯರು, ಪುರಸಭೆಯ ಜನಪ್ರತಿನಿಧಿಗಳು, ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು. ಪಕ್ಷದ ಹಿರಿಯ ಮುಖಂಡರು ಮುಂಚೂಣಿ ಘಟಕಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''