ಕೃಷಿ ಇಲಾಖೆ ಮಂಗಳೂರು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಆಶ್ರಯದಲ್ಲಿ ಮೂಲ್ಕಿ ತಾಲೂಕು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ, ಬೀಜೋಪಚಾರ ಆಂದೋಲನ, ಮಣ್ಣು ಪರೀಕ್ಷೆಯ ಅವಶ್ಯಕತೆ ಮತ್ತು ಮಣ್ಣು ಆರೋಗ್ಯ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಕೃಷಿ ಇಲಾಖೆ ಮಂಗಳೂರು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಆಶ್ರಯದಲ್ಲಿ ಮೂಲ್ಕಿ ತಾಲೂಕು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ, ಬೀಜೋಪಚಾರ ಆಂದೋಲನ, ಮಣ್ಣು ಪರೀಕ್ಷೆಯ ಅವಶ್ಯಕತೆ ಮತ್ತು ಮಣ್ಣು ಆರೋಗ್ಯ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು.
ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ.ಹರೀಶ್ ಶೆಣೈ, ಉಪ್ಪುನೀರಿನ ದ್ರಾವಣದಲ್ಲಿ ಭತ್ತದಲ್ಲಿ ದಡ್ಡು ಭತ್ತ ಬೇರ್ಪಡಿಸಿ ಉತ್ತಮ ಭತ್ತದ ಬೀಜದ ಆಯ್ಕೆ ಮತ್ತು ಭತ್ತಕ್ಕೆ ರೋಗ ಬರದಂತೆ ತಡೆಯಲು ಕಾರ್ಬೆಂಡೆಜಿಮ್ ಬಳಸಿ ಭತ್ತ ಬೀಜೋಪಚಾರ ಮಾಡುವುದನ್ನು ಸಂಪೂರ್ಣವಾಗಿ ತಿಳಿಸಿದರು ಹಾಗೂ ಸುರಕ್ಷಿತವಾಗಿ ಕೀಟನಾಶಕವನ್ನು ಯಾವ ರೀತಿಯಾಗಿ ಬೆಳೆಗಳಿಗೆ ಸಿಂಪರಣೆ ಮಾಡಬೇಕು ಎಂಬುದನ್ನು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಮಣ್ಣು ಪರೀಕ್ಷೆ ವಿಜ್ಞಾನಿ ಡಾ. ಮಲ್ಲಿಕಾರ್ಜುನ, ಮಣ್ಣು ಪರೀಕ್ಷೆಯ ಪ್ರಾಮುಖ್ಯತೆ ಮತ್ತು ಮಹತ್ವ, ಮಣ್ಣು ಮಾದರಿ ತೆಗೆಯುವ ವಿಧಾನ, ಮಣ್ಣು ಆರೋಗ್ಯ ಚೀಟಿಯಲ್ಲಿನ ಪೋಷಕಾಂಶಗಳ ಕೊರತೆ ಮತ್ತು ಅದಕ್ಕೆ ಸರಿಯಾದ ಪೋಷಕಾಂಶಗಳ ಪೂರೈಕೆ ಬಗ್ಗೆ ಮಾಹಿತಿ ನೀಡಿದರು.
ಪಂಚಾಯಿತಿ ಉಪಾಧ್ಯಕ್ಷ ಮನೋಹರ್ ಕೋಟ್ಯಾನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲಜಾ, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್., ಮೂಲ್ಕಿ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಷಣ್ಮುಖ ಕೆ.ಟಿ., ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮತ್ತು ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ರೈತರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಿಮಂತೂರು ಗ್ರಾಮದ ಮಣ್ಣು ಆರೋಗ್ಯ ಚೀಟಿ ವಿತರಣೆ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.