ಮುಖ್ಯಮಂತ್ರಿ ತೇಜೋವಧೆ ಖಂಡಿಸಿ ನಾಳೆ ಕುಶಾಲನಗರದಲ್ಲಿ ಅಹಿಂದ ನೇತೃತ್ವ ಪ್ರತಿಭಟನೆ

KannadaprabhaNewsNetwork |  
Published : Aug 07, 2024, 01:00 AM IST
 ಸಿಎಂ ತೇಜೋವಧೆಗೆ ಷಡ್ಯಂತ್ರ ರೂಪಿಸಲಾಗುತ್ತಿದೆ : ಅಹಿಂದ ಒಕ್ಕೂಟ ಆರೋಪ | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆಪಾದನೆ ಹೊರೆಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಗುರುವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆಪಾದನೆ ಹೊರೆಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಗುರುವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಪ್ರತಿಭಟನೆ ನಡೆಸುವ ಮೂಲಕ ಅವರನ್ನು ತೇಜೋವಧೆ ಮಾಡಲು ಹೋರಟಿರುವ ಪ್ರತಿಪಕ್ಷಗಳ ಕುತಂತ್ರವನ್ನು ಜನರಿಗೆ ಮನವರಿಕೆ ಮಾಡಲಾಗುವುದು. ಜಿಲ್ಲಾ ಅಹಿಂದ ಒಕ್ಕೂಟ, ಕುರುಬ ಸಮಾಜ ಹಾಗೂ ಪ್ರಗತಿಪರ ಸಂಘಟನೆಗಳಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಾಮಾಜಿಕ ನ್ಯಾಯದ ತತ್ವವನ್ನು ಆಡಳಿತದಲ್ಲಿ ಅಳವಡಿಸಿಕೊಂಡು ಮುನ್ನಡೆದು ಎಲ್ಲ ವರ್ಗಗಳ ಪ್ರಗತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ. ಇದನ್ನ ಸಹಿಸಿದ ಪ್ರತಿಪಕ್ಷಗಳು ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿರು.

ಶೋಷಿತ ಧ್ವನಿಯನ್ನು ಅಡಗಿಸುವ ಕೆಲಸ ಸಮುದಾಯದ ಮಾಡಬಾರದು, ಸಮಾಜದ ರಕ್ಷಣೆ ಮಾಡಬೇಕು ಎಂದರು.

ಅಹಿಂದ ಒಕ್ಕೂಟದ ಜಿಲ್ಲಾ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಿ ಹತ್ತು ಹಲವು ಕಾರ್ಯಕ್ರಮಗಳನ್ನು ನೀಡುವ ಮೂಲಕ ಶೋಷಿತ ಸಮುದಾಯಕ್ಕೆ, ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಮೂಡ ಹಗಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುವವರೆಗೆ ಮೌನ ವಹಿಸಿರುವುದನ್ನು ವಿರೋಧ ಪಕ್ಷಗಳು ದುರುಪಯೋಗ ಪಡಿಸಿಕೊಂಡು ನೀಡುತ್ತಿರುವ ಹೇಳಿಕೆ ಖಂಡನೀಯ ಎಂದರು.

ಅರಸು ಜನ್ಮದಿನಾಚರಣೆ :

ಸಾಮಾಜಿಕ ನ್ಯಾಯದ ಹರಿಕಾರ ದಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯ ಹಿನ್ನೆಲೆ 20 ರಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಪಕ್ಷತೀತವಾಗಿ, ರಾಜಕೀಯ ರಹಿತವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕುರುಬ ಸಮಾಜದ ರಾಜ್ಯ ನಿರ್ದೇಶಕರಾದ ಹೇಮಲತಾ ಮಂಜುನಾಥ್, ಜಿಲ್ಲಾ ಪ್ರಧಾನ

ಕಾರ್ಯದರ್ಶಿ ಗಂಗಾಧರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್, ನಗರಸಭಾ ಮಾಜಿ ಸದಸ್ಯ ಕೆ.ಜಿ.ಪೀಟರ್ ಸುದ್ದಿಗೋಷ್ಠಿಯಲ್ಲಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...