ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಕರ್ತರ ದಿನಾಚರಣೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರು ತಮ್ಮ ಜೀವದ ಅಂಗು ತೊರೆದು ಸಾಮಾಜಿಕ ಕಳಕಳಿಯಿಂದ ವರದಿಗಾರಿಕೆ ಮಾಡಿ ಸಮಾಜ ತಿದ್ದುವ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ, ಎಐ ಸಹ ದೊಡ್ಡ ಸವಾಲಾಗಿದೆ ಎಂದರು.ಪತ್ರಕರ್ತರ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಪತ್ರಕರ್ತರಿಗೆ ನಿವೇಶನಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ. ಪಟ್ಟಣದಲ್ಲಿ ಹಲವು ನಿವೇಶನಗಳನ್ನು ಪರಿಶೀಲನೆ ಮಾಡಲಾಗಿದೆ. ಭವನ ನಿರ್ಮಾಣಕ್ಕೆ ನಿವೇಶನ ಗುರುತಿಸುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮನುಷ್ಯ ನಡೆಯುವಾಗ ಕಾಲು ಎಡವುದು ಸಹಜ. ಅದನ್ನು ಸರಿಪಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು. ಮಾಧ್ಯಮಗಳು ಇಲ್ಲದಿದ್ದರೆ ಸಮಾಜ ಅಧೋಗತಿಗೆ ತಲುಪುತ್ತಿತ್ತು. ಸಮಾಜವನ್ನು ತಿದ್ದಿ ಸರಿದಾರಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ಪತ್ರಿಕೋದ್ಯಮ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಸಮಾರಂಭದಲ್ಲಿ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಚನ್ನಮಾದೇಗೌಡ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತೀಕೆರೆ ಜಯರಾಮು, ಜಿಲ್ಲಾಧ್ಯಕ್ಷ ರಾಘವೇಂದ್ರ, ಉಪಾಧ್ಯಕ್ಷರಾದ ಕೆ.ಸಿ.ಮಂಜುನಾಥ್, ಸಿ.ಎ.ಲೋಕೇಶ್, ರವಿ ಸಾವಂದಿಪುರ, ಪ್ರಧಾನ ಕಾರ್ಯದರ್ಶಿ ಶಿಶಧರ್ ಕಾಡುಕೊತ್ತನಹಳ್ಳಿ, ಕಾರ್ಯದರ್ಶಿಗಳಾದ ನಾಗೇಗೌಡ, ಶಿವರಾಜು, ನಿರ್ದೇಶಕ ಕುಮಾರಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ವಿ.ಅನಿಲ್, ಉಪಾಧ್ಯಕ್ಷ ಎಸ್.ನಾಗಸುಂದರ್, ಖಜಾಂಚಿ ಮಂಜುನಾಥ್, ಕಾರ್ಯದರ್ಶಿ ಎಸ್.ರವಿಕುಮಾರ್ ಸೇರಿದಂತೆ ಸದಸ್ಯರು ಇದ್ದರು.