ಕನ್ನಡಪ್ರಭ ವಾರ್ತೆ ಯಲಹಂಕ
ಯಲಹಂಕ ಉಪನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಏರ್ಪಡಿಸಿದ್ದ ''''''''ಮಾನವ ಸಂಪನ್ಮೂಲ ಸಮಾವೇಶ''''''''ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ಯಲ್ಲಿ ತಾಂತ್ರಿಕ ಅಂಶಗಳನ್ನು ಗಳಿಸಿಕೊಳ್ಳಬಹುದೇ ಹೊರತು ನಮ್ಮ ಸಂಸ್ಕೃತಿ, ಸಂಸ್ಕಾರದಿಂದ ಬರುವ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
ಟಿವಿಎಸ್ ಮೋಟಾರ್ಸ್ ಹಿರಿಯ ಉಪಾಧ್ಯಕ್ಷ ಡಾ.ದೇವರಾಜನ್ ಮಾತನಾಡಿ, ಭವಿಷ್ಯದಲ್ಲಿ ಭಾರತದ ಅಭಿವೃದ್ಧಿಯಲ್ಲಿ ಉತ್ಪಾದನಾ ಕ್ಷೇತ್ರ ಪ್ರಮುಖ ಪಾತ್ರ ವಹಿಸಲಿದೆ ಎಂದರು.ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಜಂಟಿ ಕಾರ್ಯದರ್ಶಿ ಎಸ್.ಶೇಷನಾರಾಯಣ, ಐಎಎಂನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಆರ್.ರವಿಕುಮಾರ್, ಜೆ.ಪಿ.ಮಾರ್ಗನ್, ವಿನೋದ್ ರಾಜ್ ಇದ್ದರು.