ಹವಾಮಾನ ವೈಪರಿತ್ಯ ನಿರ್ವಹಣೆಗೆ ಎಐ ತಂತ್ರಜ್ಞಾನ ಬಳಕೆ ಸಾಧ್ಯ: ಎಡಿಸಿ ಅಬೀದ್ ಗದ್ಯಾಳ

KannadaprabhaNewsNetwork |  
Published : Jun 01, 2025, 02:17 AM IST
31ಅಬೀದ್ | Kannada Prabha

ಸಾರಾಂಶ

ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಹವಾಮಾನ ಬದಲಾವಣೆಯಿಂದ ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಚಂಡಮಾರುತ, ಪ್ರವಾಹ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾರ್ವಜನಿಕರ ಜೀವನೋಪಾಯ ಮತ್ತು ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ನೈಸರ್ಗಿಕ ಪರಿಸರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಲಿದ್ದು, ಕೃತಕ ಬುದ್ಧಿಮತ್ತೆ ಸೇರಿದಂತೆ ಮತ್ತಿತರ ತಂತ್ರಜ್ಞಾನಗಳ ಮೂಲಕ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಅವರು ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹವಾಮಾನ ಬದಲಾವಣೆಯಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು, ನಿಯಂತ್ರಿಸಲು ಹಾಗೂ ಭವಿಷ್ಯದ ಹವಾಮಾನ ಬದಲಾವಣೆಯ ತೀವ್ರತೆಯನ್ನು ಕಡಿಮೆ ಮಾಡಲು ಇರುವ ಮೂಲಭೂತ ಜ್ಞಾನ ಹಾಗೂ ಮಾರ್ಪಾಡು ಪದ್ಧತಿಯನ್ನು ಸಮರ್ಪಕವಾಗಿ ಅಳವಡಿಸಿಕೊಂಡು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.ಜಿಪಂ ಮುಖ್ಯ ಯೋಜನಾ ಅಧಿಕಾರಿ ಡಾ.ಉದಯ್ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಹವಾಮಾನ ವೈಪರಿತ್ಯದಿಂದ ಉಂಟಾಗುವ ಸಮಸ್ಯೆಗಳನ್ನು ಬಗೆಹರಿಸಲು, ಇದರ ಬದಲಾವಣೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಇದು ಸೂಕ್ತ ಸಮಯವಾಗಿದೆ. ದೇಶ, ರಾಜ್ಯ, ಜಿಲ್ಲೆ ಹಾಗೂ ಗ್ರಾಮ ಮಟ್ಟದಲ್ಲಿಯೂ ಸಹ ಪರಿಣಾಮಕಾರಿ ಅನುಷ್ಠಾನಕ್ಕೆ ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದರು.ಎಂಪ್ರಿ ಸಂಸ್ಥೆಯ ನಿರ್ದೇಶಕ ಡಾ.ಪ್ರಮೋದ್ ಕಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಕೆ.ಎಸ್.ಸಿ.ಎಸ್.ಟಿ ಯ ಎನ್.ಆರ್.ಡಿ.ಎಂ.ಎಸ್ ಅಧಿಕಾರಿ ವಿಕ್ರಮ್ ಆರ್., ಎಂಪ್ರಿ ಸಂಸ್ಥೆಯ ರಾಘವೇಂದ್ರ ಎನ್., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎಂಪ್ರಿ ಸಂಸ್ಥೆಯ ತರಬೇತಿ ಅಸೋಸಿಯೇಟ್ ರುಚಿತಾಶ್ರೀ ಎ.ಎಂ. ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ