ಎಐ ತಂತ್ರಜ್ಞಾನದಿಂದ ಪ್ರವಾಸೋದ್ಯಮಕ್ಕೆ ಹೊಸ ಸ್ಪರ್ಶ: ಮಂಗಳಾಗೌರಿ ಭಟ್

KannadaprabhaNewsNetwork |  
Published : Sep 29, 2026, 02:30 AM IST
ಕಾರ್ಯಕ್ರಮದಲ್ಲಿ ಮಂಗಳಗೌರಿ ಭಟ್ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯು ಅಪಾರ ನೈಸರ್ಗಿಕ, ಸಾಂಸ್ಕೃತಿಕ ಹಾಗೂ ಸಾಹಸ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಹೊಂದಿದೆ.

ಕಾರವಾರ: ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಜಿಲ್ಲೆಯ ಪ್ರವಾಸೋದ್ಯಮವನ್ನು ಮತ್ತಷ್ಟು ಸುಸ್ಥಿರ, ಪ್ರವಾಸಿಗ ಸ್ನೇಹಿ ಹಾಗೂ ಆಕರ್ಷಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಮಂಗಳಾಗೌರಿ ವಿ. ಭಟ್ ಹೇಳಿದರು.ಭಾನುವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ- 2026ರ ಅಂಗವಾಗಿ ಹೊನ್ನಾವರದ ಕಾಸರಕೋಡು ಇಕೋ ಬೀಚ್‌ನಲ್ಲಿ ಆಯೋಜಿಸಿದ್ದ ವಿವಿಧ ಜಾಗೃತಿ ಕಾರ್ಯಕ್ರಮಗಳು ಹಾಗೂ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು.ಜಿಲ್ಲೆಯು ಅಪಾರ ನೈಸರ್ಗಿಕ, ಸಾಂಸ್ಕೃತಿಕ ಹಾಗೂ ಸಾಹಸ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಹೊಂದಿದೆ. ಜಿಲ್ಲೆಯ ಕಡಲತೀರಗಳು, ಜಲಪಾತಗಳು, ವನ್ಯಜೀವಿ ತಾಣಗಳು, ಕೋಟೆಗಳು ಹಾಗೂ ಸ್ಥಳೀಯ ಆಹಾರ ಮತ್ತು ಕರಕುಶಲ ಉತ್ಪನ್ನಗಳನ್ನು ದೇಶ- ವಿದೇಶದ ಪ್ರವಾಸಿಗರಿಗೆ ತಲುಪಿಸಲು ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದರು.ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಗಣೇಶ ನಾಯ್ಕ ಅವರು, ಡಿಜಿಟಲ್ ತಂತ್ರಜ್ಞಾನ ಮತ್ತು ಎಐ ಸದ್ಬಳಕೆ ಹಾಗೂ ಸುಸ್ಥಿರ ಪ್ರವಾಸೋದ್ಯಮ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.‘ಸ್ವಚ್ಛ ಪ್ರವಾಸಿ ತಾಣ- ಸುಸ್ಥಿರ ಪ್ರವಾಸೋದ್ಯಮ’ ಪರಿಕಲ್ಪನೆಯಡಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ, ಗೋಕರ್ಣ ಮುಖ್ಯ ಕಡಲತೀರ, ಮುರುಡೇಶ್ವರ ಕಡಲತೀರ, ಸಹಸ್ರಲಿಂಗ ಹಾಗೂ ಬನವಾಸಿಯ ಮಧುಕೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನದ ಮೂಲಕ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ತೆರವುಗೊಳಿಸಿ, ತ್ಯಾಜ್ಯ ವಿಂಗಡಣೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಪ್ರವಾಸಿಗರು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಕಿರಣ ಕುಮಾರ ಎಂ.ಜೆ., ಎಸ್ಡಿಎಂ ಕಾಲೇಜಿನ ಉಪನ್ಯಾಸಕ ರಮೇಶ ಮೇಸ್ತಾ, ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ, ಸ್ಥಳೀಯ ಸಾರ್ವಜನಿಕರು ಹಾಗೂ ಪ್ರವಾಸೋದ್ಯಮ ಉದ್ಯಮದ ಪಾಲುದಾರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ ಅಗತ್ಯ: ರಮಿತಾ
ಮೂಡ್ಲಕಟ್ಟೆ ನರ್ಸಿಂಗ್‌ ಕಾಲೇಜಿನಿಂದ ಆತ್ಮಹತ್ಯೆ ತಡೆ ಮಾಸಾಚರಣೆ