-ಆರೋಗ್ಯ ಅವಿಷ್ಕಾರ ಯೋಜನೆ, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ : ಶಾಸಕ ತುನ್ನೂರು
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಆರೋಗ್ಯ ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯಲ್ಲಿ ಜೂ. 14ರಂದು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ 440. 68 ಕೋಟಿ ರು.ಗಳ ವೆಚ್ಚದ ಆರೋಗ್ಯ ಅವಿಷ್ಕಾರ ಯೋಜನೆಯಡಿ ಕೆರೆ ಭಾಗದ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್, ಸಚಿವರಾದ ದಿನೇಶ ಗುಂಡುರಾವ ಸೇರಿದಂತೆಯೇ ಏಳು ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಆಗಮಿಸಲಿದ್ದಾರೆಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಯಾದಗಿರಿ ಮತಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ಮಹತ್ವದ ಬೇಡಿಕೆಗಳ ಕುರಿತು ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ಹೇಳಿದರು. ವಡಗೇರಾದಲ್ಲಿ ಮೂರು ಎಕರೆ ಜಾಗದಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣ, ನಗರಕ್ಕೆ ಹೊಂದಿಕೊಂಡಿರುವ ಭೀಮಾ ಸೇತುವೆ ಹಳೆಯದಾಗಿದ್ದು, ಹೊಸ ಸೇತುವೆಗಾಗಿ ಮತ್ತು ನಗರದಲ್ಲಿ ಯುಜಿಡಿ ಕಾಮಗಾರಿಗಾಗಿ ಮಂಜೂರಾದ 350 ಕೋಟಿ ರೂ. ಈಗ 55 ಕೋಟಿ ರೂ. ಬಂದಿದ್ದು, ಉಳಿದ ಅನುದಾನ ಬಿಡುಗಡೆ ಸೇರಿದಂತೆಯೇ ಇತರೇ ಬೇಡಿಕೆಗಳಿಗೆ ಒತ್ತಾಯಿಸಲಾಗುವುದೆಂದರು.------
12ವೈಡಿಆರ್10 : ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಎಂ ಕಾರ್ಯಕ್ರಮಕ್ಕೆಂದು ನಡೆದಿರುವ ಸಿದ್ಧತೆಗಳನ್ನು ಶಾಸಕ ಚೆನ್ನಾರೆಡ್ಡಿ ತುನ್ನೂರು ಪರಿಶೀಲಿಸಿದರು.