ಕನ್ನಡಪ್ರಭ ವಾರ್ತೆ ಹುಕ್ಕೇರಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದಲ್ಲಿ ಶಿವದೀಕ್ಷೆ ಪಡೆದ ವಟುಗಳು ಭಿಕ್ಷೆ ಬೇಡಿ ಹಣವನ್ನುಸಂಗ್ರಹಿಸಿ ಧನಸಹಾಯವಾಗಿ ನೀಡಿದ್ದಾರೆ. ಜೋಳಿಗೆಯಲ್ಲಿ ಬಂದ ಹಣ ಹಾಗೂ ಹುಕ್ಕೇರಿ ಹಿರೇಮಠದ ಶ್ರೀ ಷ.ಬ್ರ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ನೀಡಿದ ಹಣ ಒಟ್ಟು ₹50 ಸಾವಿರ ನೀಡಲು ಮುಂದಾಗಿದ್ದಾರೆ.
ಈ ವೇಳೆ ಮಾತನಾಡಿದ ಶ್ರೀಗಳು ವೀರಶೈವ ಮಠಗಳು ಕೇವಲ ಪೂಜೆ ಪುನಸ್ಕಾರಗಳನ್ನು ಮಾಡಲು ಸೀಮಿತವಾಗದೆ. ಕಷ್ಟದಲ್ಲಿ ನೊಂದ ಕುಟುಂಬಕ್ಕೆ ನೆರವಾಗುವ ಕೆಲಸವನ್ನು ಮಾಡುತ್ತಿವೆ. ಇಂದು ಹುಕ್ಕೇರಿ ಹಿರೇಮಠದಲ್ಲಿ ನಡೆದ ಶಿವದೀಕ್ಷೆಯಲ್ಲಿ ವಟುಗಳ ಜೋಳಿಗೆಯಲ್ಲಿ ಬಂದಂತಹ ಹಣವನ್ನು ಮೃತ ಅಂಜಲಿ ಅಂಬಿಗೇರ ಕುಟುಂಬಕ್ಕೆ ನೀಡಿದ್ದೆವೆ. ಸರ್ಕಾರ ಕೂಡಲೇ ನೇಹಾ ಹಿರೇಮಠ ಹಂತಕ ಹಾಗು ಅಂಜಲಿ ಅಂಬಿಗೇರ ಕೊಲೆ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.