- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ದಿನಾಚರಣೆ
ಕನ್ನಡಪ್ರಭ ವಾರ್ತೆ, ತರೀಕೆರೆಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಏಡ್ಸ್ ತಡೆಗಟ್ಟಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜೆ.ಚಂದ್ರಶೇಖರ್ ಹೇಳಿದರು.ಸೋಮವಾರ ಸಾರ್ವಜನಿಕ ಆಸ್ಪತ್ರೆ, ಕಾನೂನು ಸೇವಾ ಸಮಿತಿ, ವಕೀಲರ ಸಂಘ, ರೆಡ್ ಕ್ರಾಸ್ ಸಂಸ್ಥೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಏಡ್ಸ್ ದಿನಾಚರಣೆಯಲ್ಲಿ ಮಾತನಾಡಿ, ಏಡ್ಸ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನಜಾಗೃತಿ ಮೂಡಿಸುತ್ತಿದೆ. ಏಡ್ಸ್ ನ್ನು ಮುಖ್ಯವಾಗಿ ಸುರಕ್ಷಿತ ಲೈಂಗಿಕ ಕ್ರಿಯೆ ಯಿಂದ ಏಡ್ಸ್ ತಡೆಗಟ್ಟಬಹುದು. ರೋಗಿ ಜೊತೆ ಊಟ ಮಾಡಬಹುದು, ಕೈ ಕುಲುಕುವುದರಿಂದ ಏಡ್ಸ್ ಬರುವುದಿಲ್ಲ ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಬಿ.ಶೇಖರ್ ನಾಯ್ಕ ಮಾತನಾಡಿ ಎಲ್ಲರಿಗೂ ಜೀವಿಸುವ ಹಕ್ಕು, ಆರೋಗ್ಯದ ಹಕ್ಕು ಇದೆ, ಸಂವಿಧಾನದಲ್ಲಿ ಅನೇಕ ಕಲಂಗಳು ಇದಕ್ಕೆ ಸಾಕ್ಷಿಯಾಗಿದೆ ಎಂದರು.ಮುಖ್ಯ ಅತಿಥಿಗಳಾಗಿದ್ದ ವಕೀಲ ಎಸ್.ಸುರೇಶ್ ಚಂದ್ರ ಮಾತನಾಡಿ ಏಡ್ಸ್ ರೋಗಿಗಳನ್ನು ಹೀಯಾಳಿಸಿದರೆ ಕಾನೂನಿನಲ್ಲಿ ಶಿಕ್ಷೆ ಇದೆ, ಸಮಾಜದಲ್ಲಿ ಜಾಗೃತಿ ಮೂಡಬೇಕು ಎಂದು ಹೇಳಿದರು.
ಪ್ರಾಂಶಪಾಲರಾದ ಸಬಿತಾ ಬನ್ನಾಡಿ ಮಾತನಾಡಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ ಮುಂದೆ ಒಳ್ಳೆಯ ಜೀವನ ನಡೆಸಲು ಸಾಧ್ಯ ಎಂದರು.ಆರೋಗ್ಯ ಇಲಾಖೆ ಓಂಕಾರಮೂರ್ತಿ, ಶಿವಪ್ಪ , ರೆಡ್ ಕ್ರಾಸ್ ಸಂಸ್ಥೆಯವರು, ಐಸಿಟಿಸಿ ಚೇತನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.2ಕೆಟಿಆರ್.ಕೆ.1ಃ
ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಏಡ್ಸ್ ದಿನಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜೆ.ಚಂದ್ರಶೇಖರ್, ವಕೀಲರ ಸಂಘದ ಅಧ್ಯಕ್ಷ ಬಿ.ಶೇಖರ್ ನಾಯ್ಕ, ವಕೀಲ ಎಸ್. ಸುರೇಶ್ ಚಂದ್ರ, ಪ್ರಾಂಶುಪಾಲರಾದ ಸಬಿತಾ ಬನ್ನಾಡಿ ಮತ್ತಿತರರು ಭಾಗವಹಿಸಿದ್ದರು.