ನೀಟ್, ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮಗ್ರ ನ್ಯಾಯಾಂಗ ತನಿಖೆಗೆ ಎಐಡಿಎಸ್ಒ ಆಗ್ರಹ

KannadaprabhaNewsNetwork |  
Published : Jun 21, 2024, 01:06 AM IST
39 | Kannada Prabha

ಸಾರಾಂಶ

ಮೊನ್ನೆ ನೀಟ್ ಆದರೆ ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಮಿಲಿಯಾಂತರ ವಿದ್ಯಾರ್ಥಿಗಳು ವರ್ಷಗಟ್ಟಲೆ ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್‌ ಟಿಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ.

ಕನ್ನಡಪ್ರಭ ವಾರ್ತೆ ಮೈಸೂರು

ನೀಟ್ ಯುಜಿಯಲ್ಲಿನ ಭ್ರಷ್ಟಾಚಾರವು ಹೊರ ಬಿದ್ದಿರುವ ಬೆನ್ನಲ್ಲೇ, ಎನ್‌ಟಿಎಯಿಂದ ಆಯೋಜಿಸಲ್ಪಟ್ಟ ನೆಟ್ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯವು ರದ್ದುಗೊಳಿಸಿದೆ. ಪರೀಕ್ಷೆ ನಡೆದ ಮರು ದಿನವೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ, ನೀಟ್ ಮತ್ತು ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮರೋಪಾದಿಯಲ್ಲಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಆಗ್ರಹಿಸಿದ್ದಾರೆ.

ಮೊನ್ನೆ ನೀಟ್ ಆದರೆ ಇಂದು ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಕೇಳಿ ಬಂದಿದೆ. ಮಿಲಿಯಾಂತರ ವಿದ್ಯಾರ್ಥಿಗಳು ವರ್ಷಗಟ್ಟಲೆ ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ನೀಟ್ ಪರೀಕ್ಷೆಯಲ್ಲಿ ನಡೆದ ಗಂಭೀರ ಪ್ರಮಾಣದ ಅವ್ಯವಹಾರವನ್ನು ಚಿಕ್ಕದೆಂದು ಬಿಂಬಿಸಲು ಶಿಕ್ಷಣ ಸಚಿವಾಲಯ ಮತ್ತು ಎನ್‌ ಟಿಎ ಪ್ರಯತ್ನಿಸುತ್ತಲೇ ಇವೆ. ನೆಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರಗಳು ಈ ಪ್ರಕರಣದ ತೀವ್ರತೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ದೂರಿದ್ದಾರೆ.

ಅಷ್ಟೇ ಅಲ್ಲದೆ, ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಪವಿತ್ರತೆಯನ್ನು ಕಾಪಾಡಲು ಪರೀಕ್ಷೆ ನಡೆದ ಮರು ದಿನವೇ ಅದನ್ನು ರದ್ದುಪಡಿಸಿ ಸಿಬಿಐಗೆ ಒಪ್ಪಿಸಲಾಗಿದೆ. ಈ ನಡೆಯು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಪರೀಕ್ಷಾ ಕೇಂದ್ರಗಳಿಗೆ ತಲುಪಲು ದೂರದ ಪ್ರಯಾಣ, ವಸತಿ, ಅಧಿಕ ಪ್ರಮಾಣದ ಪರೀಕ್ಷಾ ಶುಲ್ಕ ಸೇರಿದಂತೆ ಮಿಲಿಯಾಂತರ ಅಭ್ಯರ್ಥಿಗಳ ವೆಚ್ಚಕ್ಕೆ ಯಾರು ಹೊಣೆ? ಎಲ್ಲದಕ್ಕೂ ಮಿಗಿಲಾಗಿ ಎನ್ ಟಿಎ ಪ್ರದರ್ಶಿಸುತ್ತಿರುವ ಬೇಜವಾಬ್ದಾರಿ, ಅಸಮರ್ಥತೆ ಮತ್ತು ಪಾರದರ್ಶಕತೆಯ ಕೊರತೆಯು ಮಿಲಿಯಾಂತರ ಅಭ್ಯರ್ಥಿಗಳ ಭವಿಷ್ಯವನ್ನು ಅತಂತ್ರಕ್ಕೆ ದುಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವ್ಯಾಪಾರೀಕರಣ, ಅನಾರೋಗ್ಯ ಪೀಡಿತ ಸ್ಪರ್ಧೆ ಮತ್ತು ವ್ಯಾಪಕ ಭ್ರಷ್ಟಾಚಾರವು ಜಾರಿಯಲ್ಲಿರುವಾಗ, ಒಂದು ಕೇಂದ್ರೀಕೃತ ಪರೀಕ್ಷೆಯು ಭ್ರಷ್ಟಾಚಾರದ ಏಕಸ್ವಾಮ್ಯಾಧಿಕಾರವನ್ನುಂಟು ಮಾಡಬಲ್ಲದೆ ಹೊರತು, ಈ ಯಾವ ಸಮಸ್ಯೆಯನ್ನೂ ಪರಿಹರಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಿಕ್ಷಕರು ಮತ್ತು ಸೌಲಭ್ಯಗಳನ್ನು ಒದಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು ಹಾಗೂ ಪ್ರಬಲ ಕೋಚಿಂಗ್ ಸಂಸ್ಥೆಗಳ ಮೇಲೆ ನಿಬಂಧನೆ ವಿಧಿಸಬೇಕು. ಪ್ರಕರಣವು ತಾರ್ಕಿಕ ಅಂತ್ಯ ತಲುಪುವವರೆಗೂ ನೀಟ್ ಕೌನ್ಸೆಲಿಂಗ್ ಅನ್ನು ತಡೆ ಹಿಡಿಯಬೇಕು. ನೆಟ್ ಮರುಪರೀಕ್ಷೆಯ ದಿನಾಂಕವನ್ನು ಕೂಡಲೇ ಪ್ರಕಟಿಸಿ, ನೇರವಾಗಿ ಯುಜಿಸಿಯೇ ಪರೀಕ್ಷೆಯನ್ನು ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!