ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ವೇಳೆ ಮಾತನಾಡಿದ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಮಾಜಿ ಕುಲಪತಿ ಪ್ರೊ.ಎ. ಮುರಿಗೆಪ್ಪ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ನೆಪ ಮುಂದಿಟ್ಟು ಸರ್ಕಾರಿ ಶಾಲೆಗಳನ್ನು ಮುಚ್ಚದೆ ಮೂಲಭೂತ ಸೌಕರ್ಯ ಕೊರತೆ ಪರಿಹರಿಸಿ ದಾಖಲಾತಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಕಡಿಮೆ ಸಂಖ್ಯೆಯ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವ ತಂತ್ರ. ಇದರಿಂದ ಬಡವರಿಗೆ ತೊಂದರೆಯಾಗಲಿದೆ. ವಿದ್ಯಾರ್ಥಿಗಳು ಎಷ್ಟೇ ಇದ್ದರೂ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು. ಬದಲಾಗಿ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಶಿಕ್ಷಕರ ಹಾಗೂ ಮೂಲಭೂತ ಸೌಕರ್ಯ ಕೊರತೆ ಪರಿಹರಿಸಿ ದಾಖಲಾತಿ ಹೆಚ್ಚಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದರು.ಎಐಡಿಎಸ್ಒನ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, ಹಲವೆಡೆ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಬರದಂತೆ ಶಿಕ್ಷಕರ ಮೂಲಕ ತಡೆಯಲಾಗಿದೆ. ಅನೇಕ ಶಾಲೆ-ಕಾಲೇಜುಗಳಲ್ಲಿ ದಿಢೀರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮಕ್ಕಳನ್ನು ಕಳುಹಿಸದಂತೆ ಪಾಲಕರನ್ನು ಭಯ ಪಡಿಸಲಾಗಿದೆ ಎಂದು ಆರೋಪಿಸಿದರು.
ಎಐಡಿಎಸ್ಒ ಕೇಂದ್ರ ಕೌನ್ಸಿಲ್ ಕಾರ್ಯದರ್ಶಿ ಶಿಬಾಶಿಶ್ ಪ್ರಹರಾಜ್, ಎಐಡಿಎಸ್ಓ ತಮಿಳುನಾಡು ರಾಜ್ಯಾಧ್ಯಕ್ಷ ಸೆಬಾಸ್ಟಿಯನ್ ಇದ್ದರು.