ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಬಸ್ ನಿಲ್ದಾಣದ ಸಮೀಪದ ಮಾರಮ್ಮ ದೇವಸ್ಥಾನದ ಎದುರಿನ ಚಿರಂತ್ ಆರ್ಕೇಡ್‌ನಲ್ಲಿ ಸೊಸೈಟಿ ಉದ್ಘಾಟನೆಯಾಗಲಿದ್ದು, ಚಾ.ನಗರ ಶ್ರೀಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀಚೆನ್ನಬಸವ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಸಮಾರಂಭವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಉದ್ಘಾಟಿಸಲಿದ್ದು, ಮಾಜಿ ಶಾಸಕ ಎಸ್.ಬಾಲರಾಜ್ ಜ್ಯೋತಿ ಬೆಳಗಿಸಲಿದ್ದಾರೆ. ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿ ಜಿ.ಎಸ್.ಜಯದೇವ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದರು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ಎನ್.ಬಲರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪಾರದರ್ಶಕ ಆಡಳಿತ ಮತ್ತು ಸೇವಾ ಮನೋಭಾವಕ್ಕೆ ಆದ್ಯತೆ ನೀಡುತ್ತಾ, ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಸದಸ್ಯರ ಸಹಕಾರದೊಂದಿಗೆ ಸಂಸ್ಥೆಯನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ಗುರಿಯನ್ನು ಹೊಂದಲಾಗಿದೆ ಎಂದರು..