ಸಮರ್ಪಕ ಯೂರಿಯಾ ಪೂರೈಕೆಗೆ ಆಗ್ರಹಿಸಿ ಎಐಕೆಕೆಎಂಎಸ್ ಪ್ರತಿಭಟನೆ

KannadaprabhaNewsNetwork |  
Published : Aug 01, 2025, 12:30 AM IST
ರೈತರಿಗೆ ಸಮರ್ಪಕ ಯೂರಿಯಾ ಪೂರೈಸುವಂತೆ ಒತ್ತಾಯಿಸಿ ಎಐಕೆಕೆಎಂಎಸ್ ರೈತ ಸಂಘಟನೆಯ ಸದಸ್ಯರು ಬಳ್ಳಾರಿ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರೈತರಿಗೆ ಸಮರ್ಪಕ ಯೂರಿಯಾ ಪೂರೈಕೆಗೆ ಆಗ್ರಹಿಸಿ ಎಐಕೆಕೆಎಂಎಸ್ ರೈತ ಸಂಘಟನೆಯ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಯೂರಿಯಾ ಬಿಕ್ಕಟ್ಟಿಗೆ ಸರ್ಕಾರ ಹಾಗೂ ರಸಗೊಬ್ಬರ ತಯಾರಿಕಾ ಕಂಪನಿಗಳ ದುರಾಸೆ ಕಾರಣ

ಕನ್ನಡಪ್ರಭ ವಾರ್ತೆ ಬಳ್ಳಾರಿ

ರೈತರಿಗೆ ಸಮರ್ಪಕ ಯೂರಿಯಾ ಪೂರೈಕೆಗೆ ಆಗ್ರಹಿಸಿ ಎಐಕೆಕೆಎಂಎಸ್ ರೈತ ಸಂಘಟನೆಯ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಪ್ರತಿ ವರ್ಷವೂ ಸಹ ಮುಂಗಾರಿನ ಸಮಯದಲ್ಲಿ ಯೂರಿಯಾ ಗೊಬ್ಬರದ ಸಮಸ್ಯೆ ತಲೆದೂರುತ್ತಿದೆ. ರಾಜ್ಯದ ರೈತರು ಭತ್ತ, ಜೋಳ, ದ್ವಿದಳ ಧಾನ್ಯ, ಮೆಕ್ಕೆಜೋಳ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಎಲ್ಲಾ ಬೆಳೆ ಬೆಳೆಯಲು ಯೂರಿಯಾ ಸೇರಿದಂತೆ ಇತರ ಗೊಬ್ಬರದ ಅವಶ್ಯಕತೆ ಇದೆ. ಈಗ ರೈತರಿಗೆ ಈ ಗೊಬ್ಬರ ಪೂರೈಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಆದರೆ ಇಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಸಗೊಬ್ಬರ ಪೂರೈಸುವುದನ್ನು ಬಿಟ್ಟು, ಒಬ್ಬರ ಮೇಲೆ ಇನ್ನೊಬ್ಬರು ಕೇಸರೆರಚಾಡುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಗೋವಿಂದ್ ಹಾಗೂ ರಾಜ್ಯ ಸಮಿತಿ ಸದಸ್ಯ ಈ.ಹನುಮಂತಪ್ಪ ಮಾತನಾಡಿ, ಯೂರಿಯಾ ಬಿಕ್ಕಟ್ಟಿಗೆ ಸರ್ಕಾರ ಹಾಗೂ ರಸಗೊಬ್ಬರ ತಯಾರಿಕಾ ಕಂಪನಿಗಳ ದುರಾಸೆಯೂ ಕಾರಣವಾಗಿದೆ. ₹258 ದರದ ಯೂರಿಯಾವನ್ನು ₹400ದಿಂದ 500 ವರೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಕೃತಕ ಅಭಾವ ಸೃಷ್ಟಿಯ ಹುನ್ನಾರ ನಡೆದಿದ್ದು, ರಾಜ್ಯ ಸರ್ಕಾರ ಯೂರಿಯಾ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗದಂತೆ ತಡೆಯಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಜಿಲ್ಲಾ ಸಮಿತಿ ಸದಸ್ಯರಾದ ಈರಣ್ಣ, ಹೊನ್ನೂರಪ್ಪ, ಖಾಸಿಂ ಸಾಬ್, ಬಸವರಾಜ್, ಮಲ್ಲಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಡಳಿತ ಮೂಲಕ ಕೇಂದ್ರ ರಸಗೊಬ್ಬರಗಳ ಸಚಿವರು ಹಾಗೂ ರಾಜ್ಯದ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

PREV

Recommended Stories

ವಿಕ್ಟೋರಿಯಾ ಆಸ್ಪತ್ರೆಗೆ ಸಿದ್ದರಾಮಯ್ಯ ದಿಢೀರ್ ಭೇಟಿ
ಇಂದು ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ : ಇಲ್ಲೆಲ್ಲಾ ವಾಹನಗಳಿಗೆ ನಿಷೇಧ