ಕನ್ನಡಪ್ರಭವಾರ್ತೆ ಜಮಖಂಡಿ
ನಗರದ ಬಸವ ಭವನದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವುದು ಪ್ರಜಾಸೇವೆ ಆಂದೋಲನದ ಮುಖ್ಯ ಉದ್ದೇಶವಾಗಿದ್ದು, ಸ್ಥಳೀಯ ಶಾಸಕರ ನೇತೃತ್ವದಲ್ಲಿ ಎಲ್ಲ ಗ್ರಾಮ, ಹೋಬಳಿ ತಾಲುಕು ಕೇಂದ್ರಗಳಲ್ಲಿ ಆಂದೋಲನ ನಡೆಯಲಿದೆ. ಜಿಲ್ಲೆಯಲ್ಲಿ 4000 ಅರ್ಜಿಗಳು ಸಲ್ಲಿಕೆಯಾಗಿದ್ದವು. ಆ ಪೈಕಿ 3000ಕ್ಕೂ ಅಧಿಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 786 ಅರ್ಜಿಗಳು ಮಾತ್ರ ಬಾಕಿ ಇವೆ. ರಾಜ್ಯದ ಜನರ ಹಿತಕ್ಕೆ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸಣ್ಣರೈತರಿಗೆ ಗೇಣಿ ಯೋಜನೆ, ಯುವಶಕ್ತಿಗೆ ಗ್ರಾಮಾನುಭವ ತರಬೇತಿ ಯೋಜನೆ, ಭಾರತ ಜೋಡೋ ಮುಂತಾದ ಯೋಜನೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದರು.
ಪ್ರಜಾಸೇವಾ ಆಂದೋಲನ ಸದುಪಯೋಗ ಪಡೆದು ಕೊಳ್ಳಬೇಕು. ಇಲ್ಲಿ ಸಲ್ಲಿಕೆಯಾದ ಎಲ್ಲ ಅರ್ಜಿಗಳ ಪರಿಶೀಲನೆ ಹಾಗೂ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಶಾಸಕ ಜಗದೀಶ ಗುಡಗುಂಟಿ, ಮಾತನಾಡಿ, ಸರ್ಕಾರ ಜನಹಿತ ದೃಷ್ಟಿಯಿಂದ ಜಾರಿಗೆ ತಂದಿರುವ ಪ್ರಜಾಸೇವಾ ಆಂದೋಲನದ ಸದುಪಯೋಗ ಪಡಿಸಿಕೊಳ್ಳಬೇಕೆಂದರು.ಅಧ್ಯಕ್ಷತೆ ವಹಿಸಿದ್ದ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ಪ್ರಜಾಸೇವಾ ಆಂದೋಲನದಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಹಿಂದೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಶಾಸಕರ ಮನೆ ಮುಂದೆ ಕಾಯಬೇಕಾಗುತ್ತಿತ್ತು. ಇದೀಗ ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.