ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸುವ ಗುರಿ: ಡಿಸಿ ಗಂಗೂಬಾಯಿ

KannadaprabhaNewsNetwork |  
Published : Mar 27, 2024, 01:00 AM IST
ಕಾರವಾರದ ಜಿಪಂನಲ್ಲಿ ನಡೆದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಕಾಲ್ನಡಿಗೆ ಜಾಥಾ, ಸಹಿ ಅಭಿಯಾನಕ್ಕೆ ಡಿಸಿ ಗಂಗೂಬಾಯಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ

ಕಾರವಾರ: ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದ ಮತದಾನ ಆಗುವಂತೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಇಲ್ಲಿನ ಜಿಪಂ ಆವರಣದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಎನ್ಆರ್‌ಎಲ್‌ಎಂ ಮಹಿಳಾ ಸ್ವ ಸಹಾಯ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಕಾಲ್ನಡಿಗೆ ಜಾಥಾ, ಸಹಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,

ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಕಳೆದ ವಿಧಾನಸಭಾ ಚುನಾವಣೆ ಮತದಾನ ಪ್ರಮಾಣಕ್ಕಿಂತ ಹೆಚ್ಚಿನ ಮತದಾನ ನಡೆಯಬೇಕೆಂದು ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಪ್ರಜ್ಞಾವಂತ ಮತದಾರರಿದ್ದು, ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಮಹಿಳೆಯರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯ ಮೂಲಕ ಆರ್ಥಿಕವಾಗಿ ಸಬಲರಾಗುವುದರ ಜತೆಗೆ ಸಾಮಾಜಿಕ ಜವಾಬ್ದಾರಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ, ಮತದಾನದ ಮಹತ್ವದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ಜಾಗೃತಿ ಜಾಥಾ ಮತ್ತು ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಮೂಲಕ ಜಿಲ್ಲೆಯ ಮತದಾನದ ಪ್ರಮಾಣ ಹೆಚ್ಚಳವಾಗಲಿ ಎಂದರು.

ಜಿಪಂ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ ಮಾತನಾಡಿ, ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಅಂಗವಾಗಿ ಎನ್‌ಆರ್‌ಎಲ್‌ಎಂ ಸ್ವ ಸಹಾಯ ಸಂಘದ ಗುಂಪಿನ ಮಹಿಳೆಯರ ಮೂಲಕ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಮಹಿಳಾ ಮತದಾರರಿಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದ್ದು, ಜಿಲ್ಲೆಯ ಎಲ್ಲ ಮತದಾರರು ಮೇ 7ರಂದು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ತಿಂಡಿ ತಿನಿಸು ಪ್ರದರ್ಶನ ಹಾಗೂ ಮಾರಾಟ ಮೇಳ, ಮಹಿಳೆಯರಿಂದ ಮತದಾನ ಜಾಗೃತಿ ಮೂಡಿಸುವ ರಂಗೋಲಿ ರಚನೆ, ಮತದಾರರ ಪ್ರತಿಜ್ಞಾ ವಿಧಿ ಬೋಧನೆ, ಸಹಿ ಸಂಗ್ರಹ ಅಭಿಯಾನ ಮತ್ತು ಜಾಥಾ ಕಾರ್ಯಕ್ರಮ ನಡೆಯಿತು.

ಕಾರವಾರ ಉಪ ವಿಭಾಗಾಧಿಕಾರಿ, ಕಾರವಾರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕನಿಷ್ಕ, ಯಲ್ಲಾಪುರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅಜ್ಜಪ್ಪ ಸೊಲಗದ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ