ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿ ಮಾತನಾಡಿ, ಮಂಡ್ಯ ಜಿಲ್ಲೆ ಪ್ರಾಕೃತಿಕವಾಗಿ, ರಾಜಕೀಯವಾಗಿ ಸಾಕಷ್ಟು ಹೆಸರುವಾಸಿ. ಜಿಲ್ಲೆಯಲ್ಲಿ ಕೃಷಿಯೇ ಜೀವಾಳ. ಈ ಭಾಗದ ರೈತರ ಕಲ್ಯಾಣಕ್ಕೆ ಕಂಕಣಬದ್ಧನಾಗಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿದ್ದು ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿಕೊಡಬೇಕೆಂಬ ಕನಸು ಹೊಂದಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಬಡವರ ದೀನದಲಿತರ ಪರ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ, ಆರೋಗ್ಯ ಸೇವೆ ಸೇರಿದಂತೆ ರಾಷ್ಟ್ರದ ಜನತೆಯ ಕಲ್ಯಾಣ ಬಯಸಿ 25 ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಮತದಾರರು ಪ್ರಜ್ಞಾವಂತರಿದ್ದಾರೆ. ಕಾಂಗ್ರೆಸ್ ನ ಜನಪರ ಕಾರ್ಯಕ್ರಮಗಳಿಗೆ ಮನ್ನಣೆ ನೀಡಲಿದ್ದು ನನ್ನನ್ನು ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮದ್ದೂರು ತಾಲೂಕಲ್ಲಿ ರೋಡ್ ಶೋ
ಮದ್ದೂರು ಶಾಸಕ ಉದಯ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಶಿವಲಿಂಗೇಗೌಡ ಕೆಪಿಸಿಸಿ ವಕ್ತಾರ ತೈಲೂರು ಸತ್ಯಾನಂದ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.