ಸರ್ಕಾರಿ ಸೇವೆ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ

KannadaprabhaNewsNetwork |  
Published : Nov 29, 2026, 01:15 AM IST
ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಸಬ ಹೋಬಳಿ ಪ್ರಜಾ ಸೇವಾ ಅಭಿಯಾನ  ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಪತ್ರ  ಹಾಗೂ ಕಂದಾಯ ಇಲಾಖೆಯಿಂದ  ಹಕ್ಕು ಪತ್ರಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಸಬ ಹೋಬಳಿ ಪ್ರಜಾ ಸೇವಾ ಅಭಿಯಾನ ಎಸ್.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿ ಸ್ಥಳದಲ್ಲೇ ಕೆಲ ಅರ್ಜಿಗಳಿಗೆ ಉತ್ತರ ಒದಗಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಸಬ ಹೋಬಳಿ ಪ್ರಜಾ ಸೇವಾ ಅಭಿಯಾನ ಎಸ್.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿ ಸ್ಥಳದಲ್ಲೇ ಕೆಲ ಅರ್ಜಿಗಳಿಗೆ ಉತ್ತರ ಒದಗಿಸಿದರು.ಕಾರ್ಯಕ್ರಮ ಆರಂಭದಲ್ಲೇ ಜನರ ಸಮಸ್ಯೆಗಳನ್ನು ಆಲಿಸಿ ಸಂಬಂಧಪಟ್ಟ ಸರ್ಕಾರಿ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಪರಿಹಾರ ಒದಗಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಸರ್ಕಾರಿ ಸೇವೆ ಹಾಗೂ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಪ್ರಜಾ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮನೆ ಬಾಗಿಲಿಗೆ ಅಧಿಕಾರಿ ವರ್ಗ ಬಂದು ಸೇವೆ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಮೂರು ಹಂತದಲ್ಲಿ ಸೇವೆ ಜನರಿಗೆ ಸಿಗಲಿದೆ ಎಂದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರತಿ.ಬಿ, ಗ್ರೇಡ್ 2 ತಹಸೀಲ್ದಾರ್ ಶಶಿಕಲಾ, ತಾಪಂ ಸಹಾಯಕ ನಿರ್ದೇಶಕ ರಂಗನಾಥ್.ಜೆ.ಬಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್, ಸಿಪಿಐ ರಾಘವೇಂದ್ರ, ರಾಜ್ಯ ತೆಂಗು ಮತ್ತು ನಾರಿನ ಸಹಕಾರಿ ಮಹಾಮಂಡಳಿ ನಿರ್ದೇಶಕ ಎಚ್.ಕೆ.ಸಣ್ಣರಂಗಯ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಹೋಬಳಿ ಮಟ್ಟದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ಇಂತಹ ಜನಪರ ಕಾರ್ಯಕ್ರಮಗಳ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅವಕಾಶವನ್ನು ಬಳಸಿಕೊಳ್ಳುವ ಚಾಕಚಕ್ಯತೆ ವಿದ್ಯಾರ್ಥಿಗಳಲ್ಲಿರಬೇಕು: ಕ್ಯಾ. ಚೌಟ
ಆನೆ ದಾಳಿ ಸಮಸ್ಯೆ: ರಾಮಲಿಂಗ ರೆಡ್ಡಿ ಜೊತೆ ಕೋಟ ಚರ್ಚೆ