ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಸಾಲಿಗ್ರಾಮದ ರಾ ಫಿಟ್ನೆಸ್ ಸಂಸ್ಥೆ ವತಿಯಿಂದ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಮಟ್ಟದ ಬೆಂಚ್ ಪ್ರೆಸ್ (ಪವರ್ ಲಿಫ್ಟಿಂಗ್) ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ದ್ವಿತೀಯ ವರ್ಷದ ಬಿ.ಸಿ.ಎ. ವಿದ್ಯಾರ್ಥಿ ಹರ್ಷ ಹೆಗ್ಡೆ ಅವರು ಸಬ್ ಜೂನಿಯರ್ 74 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.ಅಲ್ಲದೆ ಅವರು ಗೋವಾದ ಮಡಗಾಂವ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್ ಸಬ್ ಜೂನಿಯರ್ ವಿಭಾಗದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಈ ವಿದ್ಯಾರ್ಥಿಯ ಅಭೂತಪೂರ್ವ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ನಿರ್ದೇಶಕರು ಮತ್ತು ಉಪನ್ಯಾಸಕ ವರ್ಗದವರು ಶುಭ ಹಾರೈಸಿದ್ದಾರೆ.--------------------
ಕರಾಟೆ: ಮಧುರ ರಾಜ್ಯಮಟ್ಟಕ್ಕೆ ಆಯ್ಕೆಬೈಂದೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳದ ಎಸ್.ಎನ್.ವಿ. ಪದವಿಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ 52 ಕೆ.ಜಿ. ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಸುರೇಶ್ ಎಂ. ತಾಂಡೇಲ ಮತ್ತು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ದಂಪತಿ ಪುತ್ರಿ.
--------------ಈಜು ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿಗೆ ಚಿನ್ನ
ಕಾರ್ಕಳ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಯಶ್ವಿ ಬಿ.ಎಚ್. ಪದಕ ಸಾಧನೆ ಮಾಡಿದ್ದಾರೆ.ಅವರು ೫೦ ಮೀ. ಬೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ, ೧೦೦ ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ರಜತ ಪದಕ, ರಿಲೇನಲ್ಲಿ ರಜತ ಪದಕ, ೧೦೦ ಮೀ. ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಇವರು ಕಾರ್ಕಳದ ಹರೀಶ್ ಕುಮಾರ್ ಹಾಗೂ ಪೂರ್ಣಿಮಾ ದಂಪತಿ ಪುತ್ರಿ.ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.