ಜನವರಿಯಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆ:ಎಸ್.ಜಿ. ನಂಜಯ್ಯನಮಠ

KannadaprabhaNewsNetwork |  
Published : Aug 22, 2026, 02:45 AM IST
ಜನೇವರಿಯಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿದೆ: ಎಸ್.ಜಿ.ನಂಜಯ್ಯಮಠ | Kannada Prabha

ಸಾರಾಂಶ

ವಿಜಯಪುರ ತಾಲೂಕಿನ ಬುರಣಾಪುರದಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲಿಸಿದ್ದೇನೆ. ಪರಿಸರ ಇಲಾಖೆಯ ಅನುಮತಿ ಇಲ್ಲದ್ದರಿಂದ ಹಾಗೂ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಕಾರಣ ವಿಮಾನ ನಿಲ್ದಾಣ ಎರಡು ವರ್ಷ ವಿಳಂಬವಾಗಿದೆ. ಸಚಿವ ಎಂ.ಬಿ. ಪಾಟೀಲರ ಪ್ರಯತ್ನದಿಂದ ಮೂರು ವಾರಗಳ ಹಿಂದೆ ತಡೆಯಾಜ್ಞೆ ತೆರವು ಆಗಿದ್ದು, ಕೇಂದ್ರ ಪರಿಸರ ಇಲಾಖೆಗೆ ಅನುಮತಿ ಕೋರಿದ್ದೇವೆ. ಸಂಸತ್ ಅಧಿವೇಶನದಿಂದಾಗಿ ತಡವಾಗಿರಬಹುದು, ಶೀಘ್ರದಲ್ಲೇ ಅನುಮತಿ ಸಿಗಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿಕೆದರು.

ಕನ್ನಡಪ್ರಭ ವಾರ್ತೆ ವಿಜಯಪುರ

ತಾಲೂಕಿನ ಬುರಣಾಪುರದಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲಿಸಿದ್ದೇನೆ. ಪರಿಸರ ಇಲಾಖೆಯ ಅನುಮತಿ ಇಲ್ಲದ್ದರಿಂದ ಹಾಗೂ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಕಾರಣ ವಿಮಾನ ನಿಲ್ದಾಣ ಎರಡು ವರ್ಷ ವಿಳಂಬವಾಗಿದೆ. ನಂತರದಲ್ಲಿ ಸಚಿವ ಎಂ.ಬಿ. ಪಾಟೀಲರು ಸಾಕಷ್ಟು ಪ್ರಯತ್ನಿಸಿದ್ದರಿಂದ ಇದೀಗ ಮೂರು ವಾರಗಳ ಹಿಂದೆ ತಡೆಯಾಜ್ಞೆ ತೆರವು ಆಗಿದೆ. ಬಳಿಕ ಕೇಂದ್ರ ಪರಿಸರ ಇಲಾಖೆಗೆ ಅನುಮತಿ ಕೋರಿದ್ದೇವೆ. ಸಂಸತ್ ಅಧಿವೇಶನದಿಂದಾಗಿ ತಡವಾಗಿರಬಹುದು, ಶೀಘ್ರದಲ್ಲೇ ಅನುಮತಿ ಸಿಗಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿಕೆದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿ ರಾತ್ರಿ ವಿಮಾನ ಹಾರಾಟಕ್ಕೆ ವ್ಯವಸ್ಥೆ ಮಾಡುವ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇನ್ನೊಂದು ವಾರದಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣವಾಗಲಿದೆ. ನೈಟ್ ಲ್ಯಾಂಡಿಂಗ್ ಗಾಗಿ ಭೂಸ್ವಾಧೀನ ಕಾರ್ಯ ಸ್ವಲ್ಪ ಮಟ್ಟಿಗೆ ಬಾಕಿಯಿದ್ದು, ಜನವರಿ ತಿಂಗಳೊಳಗಾಗಿ ವಿಮಾನ ಹಾರಿಸುವ ಪ್ರಯತ್ನ ನಡೆದಿದೆ. ತಾಂತ್ರಿಕ ವಿಭಾಗ ಹಾಗೂ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಂತಿಮ‌ ಅನುಮೋದನೆ ಸಿಕ್ಕಿದ ಮೇಲೆ ವಿಮಾನ ಹಾರಾಟ ಆರಂಭವಾಗಲಿದೆ. ಇಲಾಖೆ ಅಧಿಕಾರಿಗಳು, ಅಥಾರಿಟಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಶ್ರಮದಿಂದ ಹೊಸ ವರ್ಷದಲ್ಲಿ ವಿಮಾನಯಾನ ಆರಂಭವಾಗಲಿದೆ. ವಿಮಾನ ನಿಲ್ದಾಣ ನಿರ್ಮಾಣ ಹಾಗೂ ವಿಮಾನಗಳ ಹಾರಾಟದಲ್ಲಿ ಹೆಚ್ಚಿನ ಪ್ರಮಾಣದ ಶ್ರೇಯಸ್ಸು ಉಸ್ತುವಾರಿ ಸಚಿವ ಎಂ.ಬಿ‌. ಪಾಟೀಲರಿಗೆ ಸಲ್ಲಬೇಕಿದೆ ಎಂದು ಅಭಿಪ್ರಾಯಪಟ್ಟರು.

ಈ ವಿಮಾನ ನಿಲ್ದಾಣವನ್ನು ಏರ್‌ಬಸ್‌-320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ₹618.75 ಕೋಟಿ ಮೊತ್ತಕ್ಕೆ ಮಂಜೂರಾಗಿದ್ದು, ಕಾಮಗಾರಿಗಾಗಿ ಅನುದಾನವನ್ನು ಕರ್ನಾಟಕ ಸರ್ಕಾರದ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ಭರಿಸಲಾಗುತ್ತಿದೆ. ಈ ಕಾಮಗಾರಿಯ ಮೇಲ್ವಿಚಾರಣೆಗಾಗಿ ಬೆಂಗಳೂರಿನ ಕೆಎಸ್ಐಐಡಿಸಿ ಸಂಸ್ಥೆಯನ್ನು ನೋಡಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಒಟ್ಟು ₹618.75 ಕೋಟಿ ಕಾಮಗಾರಿಯನ್ನು ವಿವಿಧ ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

ಪ್ಯಾಕೇಜ್‌ 1ರ ಕಾಮಗಾರಿಯಲ್ಲಿ ರನ್ ವೇ, ಟ್ಯಾಕ್ಸಿ ವೇ, ಏಪ್ರಾನ್, ಐಸೋಲೇಷನ್ ಬೇ, ಕೂಡು ರಸ್ತೆ, ಒಳ ರಸ್ತೆಗಳು, ಪೆರಿಫೆರಲ್ ರಸ್ತೆಗಳು ಹಾಗೂ ಇತರೆ ಮೇಮೆಂಟ್ ಕಾಮಗಾರಿ ಅಭಿವೃದ್ಧಿಪಡಿಸಲಾಗಿದೆ. ಪ್ಯಾಕೇಜ್‌ 2ರಲ್ಲಿ ಕಾಮಗಾರಿಯಲ್ಲಿ ಪ್ರಯಾಣಿಕರ ಟರ್ಮಿನಲ್ ಕಟ್ಟಡ, ಎಟಿಸಿ ಟವರ್‌ ಕಟ್ಟಡ, ಸಿ.ಎಫ್.ಆರ್‌. ಕಟ್ಟಡ, ಇ.ಎಸ್.ಎಸ್. ಕಟ್ಟಡ, ಆರ್ಮರಿ ಮತ್ತು ಡಾಗ್ ಕೆನೆಲ್ ಕಟ್ಟಡ, ಕ್ಯಾಂಟೀನ್ ಕಟ್ಟಡ, 10 ವಾಚ್ ಟವರ್‌ಗಳು, ಫೈರ್ ಪಿಟ್, ಕೂಲಿಂಗ್ ಪಿಟ್, ಕೆಳಮಟ್ಟದ ಮತ್ತು ಮೇಲ್ಮಟ್ಟದ ನೀರು ಸಂಗ್ರಹಾಲಯ, ಎಸ್.ಟಿ.ಪಿ., ಪಂಪ್ ಹೌಸ್, ಕಾಂಪೌಂಡ್‌ ಗೋಡೆ, ಸೋಲಾರ್ ಪ್ಯಾನೆಲ್, ಏವಿಯೋನಿಕ್ಸ್ ಮತ್ತು ಭದ್ರತಾ ಉಪಕರಣಗಳು, ವಿಮಾನ ನಿಲ್ದಾಣಕ್ಕೆ 24/7 2000 ಕಿಲೋ ವ್ಯಾಟ್ ವಿದ್ಯುತ್ ಸಂಪರ್ಕ ಕಾಮಗಾರಿ, ವಿಮಾನ ನಿಲ್ದಾಣಕ್ಕೆ 24/7 ನೀರು ಸರಬರಾಜು ಕಾಮಗಾರಿ ಹಾಗೂ ಇತರೆ ಕಾಮಗಾರಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಅವಶ್ಯವಿರುವ 2 ಅಗ್ನಿಶಾಮಕ ವಾಹನಗಳು, ಬಿ.ಡಿ.ಡಿ.ಎಸ್. ಉಪಕರಣಗಳು, ಡಿ.ವಿ.ಒ.ಆರ್. ಉಪಕರಣ ಖರೀದಿಸಲಾಗಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ವಿಮಾನಗಳ ರಾತ್ರಿ ಕಾರ್ಯಾಚರಣೆ ಕೈಗೊಳ್ಳಲು ಅವಶ್ಯವಿರುವ (ಭೂಸ್ವಾಧೀನ ಒಳಗೊಂಡಂತೆ) ₹65 ಕೋಟಿಗಳ ಮೊತ್ತ ಹಾಗೂ ರಾಷ್ಟ್ರೀಯ ಹೆದ್ದಾರಿ-50 (ವಿಜಯಪುರ-ಕಲಬುರಗಿ ರಸ್ತೆ)ಯಿಂದ ವಿಮಾನ ನಿಲ್ದಾಣಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಅವಶ್ಯವಿರುವ (ಭೂಸ್ವಾಧೀನ ಒಳಗೊಂಡಂತೆ) ₹52 ಕೋಟಿ ಮೊತ್ತದ ಅನುದಾನ ಸರ್ಕಾರದಿಂದ 2025 ಅಕ್ಟೋಬರ್‌ 3ರಂದು ಆಡಳಿತಾತ್ಮಕ ಅನುಮೋದನೆ ದೊರಕಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಕಾಶಪ್ಪಾ, ಟೈಂ ಇದ್ರೆ ನಮ್ಮೂರಿಗೆ ಬಂದು ಹೋಗ್ತೀಯೇನಪ್ಪಾ..
ಡಿಸಿ ಕಚೇರಿಗೆ ನುಗ್ಗಲು ಬಿಜೆಪಿ ವಿಫಲ ಯತ್ನ