ಆತ್ಮಜ್ಞಾನವನ್ನು ಬೋಧಿಸುವ ಐತರೇಯ ಉಪನಿಷತ್: ಅನೀಶ ಮುಳಿಯಾಲ

KannadaprabhaNewsNetwork |  
Published : Jul 10, 2024, 12:31 AM IST
 ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ಜುಲೈ ೬ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆದ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ಅವರು ‘ಐತರೇಯ ಉಪನಿಷತ್’ ಇದರ ಕುರಿತು ಉಪನ್ಯಾಸ ನೀಡಿದರು.  | Kannada Prabha

ಸಾರಾಂಶ

ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಮಂಗಳವಾರ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಐತರೇಯ ಉಪನಿಷತ್’ ಕುರಿತು ಉಪನ್ಯಾಸ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಐತರೇಯ ಉಪನಿಷತ್ ಮೂರು ಅಧ್ಯಾಯಗಳಿರುವ ಸಣ್ಣ ಉಪನಿಷತ್ ಆದರೂ ಆತ್ಮಜ್ಞಾನವನ್ನು ಬೋಧಿಸುವ ಮಹತ್ವದ ಉಪನಿಷತ್ತಾಗಿದೆ ಎಂದು ಸಂಸ್ಕೃತ ವಿದ್ವಾಂಸ ಅನೀಶ ಮುಳಿಯಾಲ ಹೇಳಿದರು.

ಅವರು ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಮಂಗಳವಾರ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ನಡೆದ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಐತರೇಯ ಉಪನಿಷತ್’ ಕುರಿತು ಉಪನ್ಯಾಸ ನೀಡಿದರು.

ಸಮುದ್ರದ ಅಲೆಗಳಂತೆ ಪಂಚೇಂದ್ರಿಯಗಳ ಬಯಕೆಗಳಿಗೆ ಕೊನೆಯೆಂಬುದಿಲ್ಲ. ಯೋಗ್ಯ ಗುರುವಿನ ಮಾರ್ಗದರ್ಶನ ದೊರಕಿದಲ್ಲಿ ಪೂರ್ಣಜ್ಞಾನವೆಂಬ ಹಡಗನ್ನೇರಿ ಸಂಸಾರವೆಂಬ ಸಾಗರದಿಂದ ಪಾರಾಗಿ ದಡಸೇರಿ ಮೋಕ್ಷ ಪದವನ್ನು ಪಡೆಯಬಹುದಾಗಿದೆ. ಅಂತಃಕರಣ ರೂಪದಲ್ಲಿ ಪರಮಾತ್ಮ ನಮ್ಮೊಳಗಿದ್ದು, ಆತನ ಉಪಾಸನೆಯಿಂದ ಆತ್ಮಜ್ಞಾನವನ್ನು ಹೊಂದಿ ಮುಕ್ತರಾಗುವ ಮಾರ್ಗವನ್ನು ಉಪನಿಷತ್ತು ನಮಗೆ ತೋರಿಸುತ್ತದೆ ಎಂದರು.

ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್, ಕಾರ್ಕಳ ತಾಲೂಕು ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಕಮಲಾಕ್ಷ ಕಾಮತ್, ಉಪಾಧ್ಯಕ್ಷ ಮೋಹನದಾಸ ಪೈ ಉಪಸ್ಥಿತರಿದ್ದರು.ಕಾರ್ಯಕ್ರಮದ ಪೂರ್ಣ ಪ್ರಾಯೋಜಕತ್ವವನ್ನು ಕಾರ್ಕಳ ತಾಲೂಕು ಹಿರಿಯ ನಾಗರಿಕರ ಸಂಘವು ವಹಿಸಿಕೊಂಡಿದ್ದು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಗೀತಾ ಜಿ. ಮಲ್ಯ ಪ್ರಾರ್ಥಿಸಿದರು. ಜಗದೀಶ ಗೋಖಲೆ ಅತಿಥಿಗಳನ್ನು ಪರಿಚಯಿಸಿದರು. ಶೈಲಜಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿದರು. ಪ್ರದೀಪ್ ನಾಯಕ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!