ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

KannadaprabhaNewsNetwork |  
Published : May 16, 2025, 01:55 AM IST
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ : ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ | Kannada Prabha

ಸಾರಾಂಶ

ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು.

ಸೇತುವೆ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ ಬೇಡ, ಆದರೆ ಜನರಿಗೆ ಅನುಕೂಲವಾಗುವ ರೀತಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕು. ಸೇತುವೆಗೆ ಸಂಬಂಧಿಸಿ ಶಾಸಕರ ಗಮನಕ್ಕೆ ತಾರದೆ ಹಕ್ಕುಚ್ಯುತಿ ಮಾಡಿರುವ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.ಸೇತುವೆಯ ಬಾಕಿಯಾಗಿರುವ ಎರಡು ಪಿಲ್ಲರ್‌ಗಳಿಗೆ ಸಂಬಂಧಿಸಿ ಕಡತ ಕೆಆರ್‌ಡಿಸಿಎಲ್‌ಗೆ ಹೋಗಿರುವುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ರಘು ಅವರು ಪ್ರಸ್ತಾಪಿಸಿದಾಗ ಶಾಸಕರು ದೂರವಾಣಿ ಮೂಲಕ ಚೀಫ್ ಎಂಜಿನಿಯರ್ ವಸಂತ ನಾಯ್ಕ್ ಅವರನ್ನು ಸಂಪರ್ಕಿಸಿ, ಶೀಘ್ರ ಅನುಮೋದನೆ ನೀಡುವಂತೆ ಸೂಚಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಈ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದರೆ ಆಗಲೇ ಸಂಬಂಧಪಟ್ಟ ಸಚಿವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತಿದ್ದೆ ಎಂದರು.ವಿವಿಧ ಸಮಸ್ಯೆಗಳ ಕುರಿತು ರೈತ ಸಂಘದ ಮುಂದಾಳು ಸರಪಾಡಿ ಅಶೋಕ ಶೆಟ್ಟಿ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಸರಪಾಡಿ ಗ್ರಾ.ಪಂ. ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು, ಸ್ಥಳೀಯ ಮುಂದಾಳು ಶಶಿಕಾಂತ ಶೆಟ್ಟಿ ಆರುಮುಡಿ, ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಸಾಂತಪ್ಪ ಪೂಜಾರಿ ಹಟ್ಟದಡ್ಕ, ಮಣಿನಾಲ್ಕೂರು ಸಿಎ ಬ್ಯಾಂಕ್ ನಿರ್ದೇಶಕ ಪೂವಪ್ಪ ಪೂಜಾರಿ ಕಡಮಾಜೆ ಪ್ರಸ್ತಾಪಿಸಿದರು.

ಜಿ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ, ಕಡೇಶ್ವಾಲ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿದ್ಯಾಧರ ರೈ ಪೆರ್ಲಾಪು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸಾಂತಪ್ಪ ಪೂಜಾರಿ, ಅಮರನಾಥ ಶೆಟ್ಟಿ ಕುರ್ಯಾಳ, ಕುಸುಮಾಕರ ಶೆಟ್ಟಿ ಕುರ್ಯಾಳ, ರಾಜೇಂದ್ರ ಪೂಜಾರಿ ಕಡಮಾಜೆ, ರವೀಂದ್ರ ಶೆಟ್ಟಿ ಕೈಯಾಳ, ಆನಂದ ಶೆಟ್ಟಿ ಬಾಚಕೆರೆ ಮೊದಲಾದವರಿದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ