ಜಿ. ಶಂಕರ್ ಕಾಲೇಜಿಗೆ ಇನ್ನೆರಡು ಹಾಸ್ಟೆಲ್: ತಂಗಡಗಿ

KannadaprabhaNewsNetwork |  
Published : Sep 28, 2026, 02:30 AM IST
25ತಂಗಡಗಿ | Kannada Prabha

ಸಾರಾಂಶ

ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದರು.

ಉಡುಪಿ: ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದರು.ನಂತರ ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡಿದ ಅವರು, ಕಾಲೇಜಿನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇನ್ನೂ ಎರಡು ಮಹಿಳಾ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಕರಾವಳಿಯ ಮೂರು ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಯಾಬಿನೆಟ್ ರು. 32,000 ಕೋಟಿ ಅನುದಾನ ಮಂಜೂರು ಮಾಡಿದ್ದು, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಪ್ರಾಧ್ಯಾಪಕರಾದ ಪ್ರೊ. ಪಿ.ಬಿ. ಪ್ರಸನ್ನ, ವಿದ್ಯಾ ಡಿ., ಡಾ. ಮಣಿಭೂಷಣ್ ಡಿಸೋಜ, ಜಯಲಿಂಗ ಮೂರ್ತಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಜಿಬಿವಿ ಶಾಲೆ ಶೈಕ್ಷಣಿಕ, ಸ್ವಚ್ಛತಾ ವ್ಯವಸ್ಥೆಗೆ ಅಧಿಕಾರಿಗಳ ಮೆಚ್ಚುಗೆ
ನಾಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮನೆಗೆ ಮುತ್ತಿಗೆ