ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಇಲ್ಲಿನ ಲೋಹಿಯಾ ನಗರದಲ್ಲಿ ಶನಿವಾರ ಸಂಜೆ ಆಕಾಶನ ಶವ ಪತ್ತೆಯಾಗಿತ್ತು. ಕುಟುಂಬದವರ ಗಮನಕ್ಕೆ ಬರುತ್ತಿದ್ದಂತೆ ಶವವನ್ನು ಕಿಮ್ಸ್‌ಗೆ ಸಾಗಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಆಕಾಶನ ತಂದೆ ಶೇಖರಯ್ಯ ಮಠಪತಿ ಅವರಿಂದ, ಆಕಾಶನ ಪತ್ನಿ ಕಾವ್ಯ, ಅತ್ತೆ ಶ್ರೀದೇವಿ, ಮಾವ ಮೋಹನ ನಾಯಕ್ ಹಾಗೂ ಅಳಿಯ ಭರತ ನಾಯಕ್ ಸೇರಿದಂತೆ 12 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
8 ಜನರ ಬಂಧನ:ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹು-ಧಾ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರಲ್ಲಿ ಅರ್ಜುನ ಮಳಗಿ, ಸಂಜು ಕೊಪ್ಪದ, ರಾಹುಲ್ ಕಾಂಬ್ಳೆ, ವಿನಾಯಕ ತಾಳಿಕೋಟೆ, ಮನೋಜ, ಚಮಕ್ ಅಲಿಯಾಸ್ ಮೌನೇಶ, ಮಹೇಶ ಹಾಗೂ ಕಾರ್ತಿಕನನ್ನು ಬಂಧಿಸಲಾಗಿದೆ. ಇನ್ನುಳಿದ ಆಕಾಶನ ಪತ್ನಿ, ಅತ್ತೆ, ಮಾವ ಹಾಗೂ ಅಳಿಯನ ಬಂಧನಕ್ಕೆ ಬಲೆ ಬೀಸಲಾಗಿದೆ.
ಕಾಲಿಗೆ ಬಿದ್ದ ಆಟೋರಿಕ್ಷಾ ಚಾಲಕ:
ಈ ವೇಳೆ ಎಸಿಪಿ ವಿನೋದ ಮುಕ್ತೇದಾರ ಮಾತನಾಡಿ, ಮೃತ ಆಕಾಶ ನಮಗೂ ಮಗನಿದ್ದಂತೆ ಅವನಿಗೆ ಅನ್ಯಾಯವಾಗಿದೆ. ಈ ಸಾವಿಗೆ ಸೂಕ್ತ ನ್ಯಾಯ ಕೊಡಿಸುವ ಭರವಸೆ ನೀಡಿದ ಬಳಿಕ ಆಟೋ ಚಾಲಕರು ಪ್ರತಿಭಟನೆ ಕೈಬಿಟ್ಟರು. ಈ ವೇಳೆ ಶಿವಪ್ರಕಾಶ ನಾಯಕ ಸೇರಿದಂತೆ ಆಟೋರಿಕ್ಷಾ ಚಾಲಕರಾದ ರಾಜೇಶ ಬಿಜವಾಡ, ನಾಗರಾಜ ಕಟ್ಟಿಮನಿ, ಅಂಬಾಸಾ ಬದ್ದಿ, ಮಂಜು ಬಳ್ಳಾರಿ, ಸಂತೋಷ ಜಾಧವ, ಕಿರಣ ಬುಗಡಿ, ನಾಗರಾಜ ಗಬ್ಬೂರ ಸೇರಿದಂತೆ ನೂರಾರು ಆಟೋ ಚಾಲಕರಿದ್ದರು.
ಇಲ್ಲಿನ ಕಿಮ್ಸ್‌ನಲ್ಲಿ ಭಾನುವಾರ ಮರಣೋತ್ತರ ಪರೀಕ್ಷೆ ನಂತರ ಕಿಮ್ಸ್‌ನಿಂದ ಲೋಹಿಯಾನಗರಕ್ಕೆ ಆಕಾಶ ಮಠಪತಿ ಮೃತ ದೇಹವನ್ನು ಮೆರವಣಿಗೆ ಮೂಲಕ ರವಾನೆ ಮಾಡಲಾಯಿತು. ಮೆರವಣಿಗೆಯಲ್ಲಿ ನೂರಾರು ಆಟೋಗಳು ಪಾಲ್ಗೊಂಡಿದ್ದವು. ಆಕಾಶನ ಪ್ರಾರ್ಥಿವ ಶರೀರ ಮನೆಗೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ನಂತರ ಆನಂದ ನಗರದಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.