ಅಖಂಡ ಭಾರತ ಸಂಕಲ್ಪ, ಪಂಜಿನ ಮೆರವಣಿಗೆ

KannadaprabhaNewsNetwork |  
Published : Aug 09, 2026, 02:45 AM IST
ಚಿತ್ರ :  8ಎಂಡಿಕೆ5 :  ಅಖಂಡ ಭಾರತ ಸಂಕಲ್ಪ ಅಂಗವಾಗಿ ಮಡಿಕೇರಿಯಲ್ಲಿ  ಪಂಜಿನ ಮೆರವಣಿಗೆ ನಡೆಯಿತು.  | Kannada Prabha

ಸಾರಾಂಶ

ಹಿಂದೂ ಜಾಗರಣ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನದ ಅಂಗವಾಗಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಶುಕ್ರವಾರ ರಾತ್ರಿ ಪಂಜಿನ ಮೆರವಣಿಗೆ ನಡೆಯಿತು.

ಮಡಿಕೇರಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನದ ಅಂಗವಾಗಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಶುಕ್ರವಾರ ರಾತ್ರಿ ಪಂಜಿನ ಮೆರವಣಿಗೆ ನಡೆಯಿತು.

ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ ಬಳಿಯಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಜ.ತಿಮ್ಮಯ್ಯ ವೃತ್ತಕ್ಕಾಗಿ ಹಾದು ಮುಖ್ಯ ಬೀದಿಗಾಗಿ ಸ್ಕ್ವಾಡ್ರನ್ ಲೀಡರ್ ದೇವಯ್ಯ ವೃತ್ತ, ಇಂದಿರಾಗಾಂಧಿ ವೃತ್ತಕ್ಕಾಗಿ ಕಾಲೇಜು ರಸ್ತೆಯಲ್ಲಿ ಸಾಗಿ ಕಾವೇರಿ ಹಾಲ್‌ನಲ್ಲಿ ಸಮಾಪ್ತಿಗೊಂಡಿತು.

ಕಾವೇರಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಆರ್ ಎಸ್ ಎಸ್ ಪ್ರಚಾರ ಪ್ರಮುಖ್ ಅರುಣ್ ಕುಮಾರ್, ಹಿಂದೂ ಜಾಗರಣ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯ ಅಜಿತ್ ಕುಕ್ಕೇರ, ಸಂಚಾಲಕ ಭೋಜೇಗೌಡ, ಸಹ ಸಂಯೋಜಕ ಶರತ್, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಸೋಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ಸುರಿಯುವ ಮಳೆಯ ನಡುವೆಯೂ ಮಹಿಳೆಯರಾದಿಯಾಗಿ ನೂರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು, ತ್ರಿವರ್ಣ ಧ್ವಜ ಹಿಡಿದು ಸಾಗಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ: ರಾಘವೇಶ್ವರ ಶ್ರೀ
ಅನಾಹುತ ಸಂಭವಿಸಿದಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್: ಸುನಿಲ್ ಕುಮಾರ್