12ನೇ ಶತಮಾನದ ಶರಣ ಚಿಂತಕಿ ಅಕ್ಕಮಹಾದೇವಿ

KannadaprabhaNewsNetwork |  
Published : Apr 14, 2025, 01:28 AM IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಶಿವಶರಣೆ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಅಕ್ಕ ಮಹಾದೇವಿಯವರು ರಾಜಪ್ರಭುತ್ವ ಮತ್ತು ಪುರುಷ ಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಹಕ್ಕುಗಳ ಪರವಾಗಿ ಧ್ವನಿಯೆತ್ತಿದ ಮೊದಲ ಸ್ತ್ರಿವಾದಿ ಹಾಗೂ ಪ್ರಗತಿಪರ ಚಿಂತಕಿ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಅಕ್ಕ ಮಹಾದೇವಿಯವರು ರಾಜಪ್ರಭುತ್ವ ಮತ್ತು ಪುರುಷ ಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಹಕ್ಕುಗಳ ಪರವಾಗಿ ಧ್ವನಿಯೆತ್ತಿದ ಮೊದಲ ಸ್ತ್ರಿವಾದಿ ಹಾಗೂ ಪ್ರಗತಿಪರ ಚಿಂತಕಿ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಶಿವಶರಣೆ ಅಕ್ಕಮಹಾದೇವಿ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಕ್ಕಮಹಾದೇವಿಯವರು ೧೨ನೇ ಶತಮಾನದ ಶರಣ ಚಿಂತಕಿಯಾಗಿ, ರಾಜಪ್ರಭುತ್ವ ಹಾಗೂ ಪುರುಷ ಪ್ರಧಾನ ವ್ಯವಸ್ಥೆಯನ್ನು ತಿರಸ್ಕರಿಸಿ, ಮಹಿಳಾ ಪರವಾಗಿ ಧ್ವನಿ ಎತ್ತಿದ ಪ್ರಥಮ ಸ್ತ್ರೀವಾದಿ ಹಾಗೂ ಪ್ರಗತಿಪರ ಚಿಂತಕಿ ಎನಿಸಿಕೊಂಡವರು. ತಮ್ಮ ವಚನಗಳ ಮೂಲಕ ಮಹಿಳೆಯ ಆತ್ಮಸ್ವಾತಂತ್ರ್ಯ, ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳಿಗೆ ಪ್ರಾಮುಖ್ಯತೆ ನೀಡಿದವರು ಎಂದು ತಿಳಿಸಿದರು.

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಕ್ಕಮಹಾದೇವಿಯವರು ಹಲವು ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಪ್ರಮುಖ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ಅವರು ಸ್ತ್ರೀ-ಪುರುಷ ಭೇದವೆನ್ನುವ ಜಾತ್ಯತೀತ ಮನೋಭಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು ಮತ್ತು ಅಂತಹ ಭೇದಭಾವನೆಗಳನ್ನು ಹೊಡೆದು ಹಾಕಲು ಶ್ರಮಿಸಿದರು. ಅವರ ವಚನಗಳು ಮಹಿಳೆಯರ ಆತ್ಮಬಲ, ಸ್ವಾತಂತ್ರ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿವೆ. ಅಂತಹ ಮಹಾನ್ ವ್ಯಕ್ತಿತ್ವದ ಆದರ್ಶವನ್ನು ಎಲ್ಲ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯ ಆವರಣದಲ್ಲಿನ ಅಕ್ಕಮಹಾದೇವಿ ಮೂರ್ತಿಗೆ ಕುಲಪತಿ ಪ್ರೊ.ಶಾಂತಾದೇವಿ.ಟಿ ರುದ್ರಾಕ್ಷಿ ಮಾಲೆ ಹಾಕಿ ಮತ್ತು ಉದ್ಯಾನವನದಲ್ಲಿ ಕದಳಿಯ ಸಸಿಗಳನ್ನು ನೆಡುವ ಮೂಲಕ ಗೌರವ ಸಲ್ಲಿಸಿದರು.ಅತಿಥಿ ಉಪನ್ಯಾಸಕಿ ಡಾ.ಸುಧಾರಾಣಿ ಮಣೂರ ಹಾಗೂ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಪ್ರೊ.ಎಂ.ಪಿ ಬಳಿಗಾರ ಪ್ರಾರ್ಥಿಸಿದರು. ನಾರಾಯಣ ಪವಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಜಯಕುಮಾರ್ ಹಿರೇಮಠ ವಂದಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ