ಅಕ್ಕಮಹಾದೇವಿ ವಿಶ್ವವಿದ್ಯಾಲಯ ಇತರ ವಿಶ್ವವಿದ್ಯಾಲಯಗಳಿಗೆ ಮಾದರಿ

KannadaprabhaNewsNetwork |  
Published : Nov 26, 2026, 04:15 AM IST
ಖೋ-ಖೋ ಕಾರ್ಯಾಗಾರ ಆಯೋಜನೆಯಲ್ಲಿ ಅಕ್ಕಮಹಾದೇವಿ ವಿವಿ ಮಾದರಿ: ಡಾ.ನಾಗರಾಜ.ವೈ | Kannada Prabha

ಸಾರಾಂಶ

ವಿದ್ಯಾರ್ಥಿನಿಯರಲ್ಲಿ ಕ್ರೀಡೆಗಳ ಕುರಿತ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಕಾರ್ಯಾಗಾರಗಳನ್ನು ಆಯೋಜಿಸುತ್ತಿರುವುದು ಇತರ ವಿಶ್ವವಿದ್ಯಾಲಯಗಳಿಗೆ ಮಾದರಿಯಾಗಿದೆ ಎಂದು ತಮಿಳುನಾಡಿನ ತಿರುವೂರಿನ ಕೇಂದ್ರಿಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಾಗರಾಜ.ವೈ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿದ್ಯಾರ್ಥಿನಿಯರಲ್ಲಿ ಕ್ರೀಡೆಗಳ ಕುರಿತ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಕಾರ್ಯಾಗಾರಗಳನ್ನು ಆಯೋಜಿಸುತ್ತಿರುವುದು ಇತರ ವಿಶ್ವವಿದ್ಯಾಲಯಗಳಿಗೆ ಮಾದರಿಯಾಗಿದೆ ಎಂದು ತಮಿಳುನಾಡಿನ ತಿರುವೂರಿನ ಕೇಂದ್ರಿಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ನಾಗರಾಜ.ವೈ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಖೋ-ಖೋ ಕ್ರೀಡೆಯ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಕ್ರೀಡೆಗಳ ಕುರಿತು ಇಂತಹ ಕಾರ್ಯಾಗಾರಗಳನ್ನು ಆಯೋಜಿಸುವುದು ವಿರಳವಾಗಿದೆ. ಆದರೆ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರಿಗೆ ಹೊಸ ಜ್ಞಾನ ಮತ್ತು ಕೌಶಲ್ಯಗಳನ್ನು ಪರಿಚಯಿಸುತ್ತಿದೆ. ತಮಿಳುನಾಡಿನಲ್ಲಿ ದೈಹಿಕ ಶಿಕ್ಷಣ ಕ್ಷೇತ್ರ ಎಷ್ಟು ಪ್ರಗತಿ ಸಾಧಿಸಿದೆಯೋ, ಅಷ್ಟೇ ಶ್ರೇಷ್ಠವಾಗಿ ಈ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗವೂ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಸಂಪನ್ಮೂಲ ವ್ಯಕ್ತಿ, ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಚಂದ್ರಶೇಖರ ಮಾತನಾಡಿ, ಖೋ-ಖೋ ಕ್ರೀಡೆಯ ಇತಿಹಾಸ, ಬೆಳವಣಿಗೆ, ಪ್ರಸ್ತುತ ಕ್ರೀಡೆಯಲ್ಲಿ ಆಗಿರುವ ಬದಲಾವಣೆಗಳು, ನಿಯಮಗಳು ಹಾಗೂ ಅಂಕಣದ ಮಹತ್ವದ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಹನುಮಂತಯ್ಯ ಪೂಜಾರಿ ಮಾತನಾಡಿ, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿನಿಯರ ಜ್ಞಾನವನ್ನು ವೃದ್ಧಿಸುವುದರ ಜೊತೆಗೆ ಉನ್ನತ ಗುರಿಗಳನ್ನು ಸಾಧಿಸಲು ಸಹಕಾರಿಯಾಗುತ್ತವೆ. ಇದರಿಂದ ವಿಶ್ವವಿದ್ಯಾಲಯದ ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ಮಾತನಾಡಿ, ಇಂತಹ ಕಾರ್ಯಾಗಾರಗಳಲ್ಲಿ ದೊರೆಯುವ ಜ್ಞಾನವು ವಿದ್ಯಾರ್ಥಿನಿಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಶಿಕ್ಷಣ ವಿಭಾಗದ ಡೀನ್ ಡಾ.ವೆಂಕೋಬ ನಾರಾಯಣಪ್ಪ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗವು ನಿರಂತರವಾಗಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಹೊಸ ಕ್ರೀಡೆಗಳ ಕುರಿತು ಕಾರ್ಯಾಗಾರ ಮತ್ತು ಸಮ್ಮೇಳನಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿನಿಯರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುತ್ತಿದೆ ಎಂದರು.ಕಾರ್ಯಾಗಾರದಲ್ಲಿ ವಿಶ್ವವಿದ್ಯಾಲಯದ ಸಂಯೋಜಿತ ಮಹಿಳಾ ಮಹಾವಿದ್ಯಾಲಯಗಳ ನಿರ್ದೇಶಕರು, ಬಂಜಾರ ಬಿ.ಪಿ.ಇಡಿ ಕಾಲೇಜಿನ ವಿದ್ಯಾರ್ಥಿನಿಯರು, ವಿಭಾಗದ ಪ್ರಾಧ್ಯಾಪಕ ಡಾ.ಸಕ್ಪಾಲ್ ಹೂವಣ್ಣ, ಪ್ರೊ.ಶ್ರೀನಿವಾಸ, ಡಾ.ಕಿರಣ.ಜಿ.ಎನ್ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು ಸೇರಿದಂತೆ ಮತ್ತಿತರಿದ್ದರು.

25bij01

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪದವಿ ಕಾಲೇಜು ಸ್ಥಾಪನೆಗೆ ₹೪ ಕೋಟಿ ಸಿಎಸ್‌ಆರ್ ನೆರವು
ನೂತನ ಪ್ರಾಚಾರ್ಯ ಡಾ.ಅಮೋಘಸಿದ್ಧ ಹಂಜಗಿಗೆ ಸನ್ಮಾನ