ಅಕ್ಕೂರು ಕೃಷಿ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ

KannadaprabhaNewsNetwork | Published : Apr 7, 2025 12:34 AM

ಸಾರಾಂಶ

ಚನ್ನಪಟ್ಟಣ: ತೀವ್ರ ಕುತೂಹಲ ಕೆರಳಿಸಿದ್ದ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಬಲಿತರ ಪಾಲಾಗಿದೆ.

ಚನ್ನಪಟ್ಟಣ: ತೀವ್ರ ಕುತೂಹಲ ಕೆರಳಿಸಿದ್ದ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಬಲಿತರ ಪಾಲಾಗಿದೆ.

ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಆಡಳಿತ ಮಂಡಳಿಯ 11 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 9 ಮಂದಿ ನಿರ್ದೇಶಕರು ಹಾಗೂ ಕಾಂಗ್ರೆಸ್‌ನ ಇಬ್ಬರು ಚುನಾಯಿತರಾಗಿದ್ದಾರೆ.

ಸಂಘದ ಸಾಲಗಾರರ ಸಾಮಾನ್ಯ ಕ್ಷೇತ್ರದ 5 ನಿರ್ದೇಶಕ ಸ್ಥಾನಗಳಿಗೆ 11 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಜೆಡಿಎಸ್‌ನ ಎಚ್.ಸಿ.ಜಯಮುತ್ತು, ಎ.ವಿ.ಗಿರೀಶ್, ಎಚ್.ಎಸ್.ದೇವರಾಜು, ಶಿವಸ್ವಾಮಿ, ಹಾಗೂ ಕಾಂಗ್ರೆಸ್ ಬೆಂಬಲಿತ ಎ.ಎಸ್.ನಾಗರಾಜು ಆಯ್ಕೆಯಾಗಿದ್ದಾರೆ.

ಸಾಲಗಾರರ ಮಹಿಳಾ ಮೀಸಲು ಕ್ಷೇತ್ರದ ಎರಡು ಸ್ಥಾನಗಳಿಗೆ ನಾಲ್ಕು ಮಂದಿ ಸ್ಪರ್ಧಿಸಿದ್ದು, ಜೆಡಿಎಸ್ ಬೆಂಬಲಿತ ರತ್ನಮ್ಮ ಹಾಗೂ ಸವಿತಾ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಬಿಸಿಎಂ(ಎ) ಕ್ಷೇತ್ರ 1 ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ಜೆಡಿಎಸ್ ಬೆಂಬಲಿತ ರಾಜು ಜಯಗಳಿಸಿದ್ದಾರೆ.

ಸಾಲಗಾರರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ 1 ನಿರ್ದೇಶಕ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ಜೆಡಿಎಸ್ ಬೆಂಬಲಿತ ಜವರಾಯಿ ಜಯಗಳಿಸಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದ 1 ಸ್ಥಾನಕ್ಕೆ ಮೂವರು ಸ್ಪರ್ಧಿಸಿದ್ದು ರಾಧಾ ಗೆಲುವು ಸಾಧಿಸಿದ್ದಾರೆ. ಬಿಸಿಎಂ(ಬಿ) ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿತ್ತು.

ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. ನೂತನ ನಿರ್ದೇಶಕರಿಗೆ ಹೂವಿನ ಹಾರ ಹಾಕಿ ಶುಭಕೋರಿದರು.

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆಯಾದ ಹಿನ್ನೆಲೆಯಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪೊಟೋ೬ಸಿಪಿಟಿ೧: ಅಕ್ಕೂರು ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಿರ್ದೇಶಕರನ್ನು ಅಭಿನಂದಿಸಲಾಯಿತು.

Share this article