21 ಹಾಗೂ 22 ರಂದು ಬೆಳ್ಳೂರಿನಲ್ಲಿ ಅಕ್ಷರ ಜಾತ್ರೆ:

KannadaprabhaNewsNetwork |  
Published : Feb 19, 2026, 01:45 AM IST
ನರಸಿಂಹರಾಜಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ಹಾಗೂ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. | Kannada Prabha

ಸಾರಾಂಶ

ನರಸಿಂಹರಾಜಪುರಫೆ.21 ರ ಶನಿವಾರ ಹಾಗೂ 22 ರ ಭಾನುವಾರ ಬೆಳ್ಳೂರಿನ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆಯುವ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಕ್ಷರ ಜಾತ್ರೆಗೆ ಎಲ್ಲಾ ಸಾಹಿತ್ಯ ಆಸಕ್ತರು ಆಗಮಿಸುವಂತೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ತಿಳಿಸಿದರು.

- ಬೆಮ್ಮನೆ ದಯಾನಂದ್ ಸರ್ವಾಧ್ಯಕ್ಷ । 9 ಪುಸ್ತಕ ಬಿಡುಗಡೆ । ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಫೆ.21 ರ ಶನಿವಾರ ಹಾಗೂ 22 ರ ಭಾನುವಾರ ಬೆಳ್ಳೂರಿನ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನಡೆಯುವ 10 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಕ್ಷರ ಜಾತ್ರೆಗೆ ಎಲ್ಲಾ ಸಾಹಿತ್ಯ ಆಸಕ್ತರು ಆಗಮಿಸುವಂತೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ತಿಳಿಸಿದರು.

ಬುಧವಾರ ತಾಲೂಕು ಕಸಾಪದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಫೆ.21ರ ಶನಿವಾರ ಬೆಳಿಗ್ಗೆ 9 ಗಂಟೆಗೆ ತಾಲೂಕು ದಂಡಾಧಿಕಾರಿ ಡಾ.ನೂರಲ್ ಹುದಾ ರಾಷ್ಟ್ರ ದ್ವಜ, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಪರಿಷತ್ತಿನ ಧ್ವಜ ಹಾಗೂ ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ನಾಡ ದ್ವಜಾರೋಹಣ ಮಾಡಲಿದ್ದಾರೆ. ಮಧ್ಯಾಹ್ನ ಸಮ್ಮೇಳಾ ಧ್ಯಕ್ಷರ ಮೆರವಣಿಗೆಯನ್ನು ಅಮ್ಮ ಪೌಂಡೇಷನ್ ಅಧ್ಯಕ್ಷ ಸುಧಾಕರ ಶೆಟ್ಟಿ ಉದ್ಘಾಟಿಸುವರು.

ಸಂಜೆ 4ಕ್ಕೆ ಕನ್ನಡ ಗಮಕ ಪ್ರವಚನಕಾರ ಮುನಿರಾಜ್ ರೆಂಜಾಳ ಕಾರ್ಯಕ್ರಮವನ್ನು, ಶಾಸಕ ಟಿ.ಡಿ.ರಾಜೇಗೌಡ ಪುಸ್ತಕ ಮಳಿಗೆ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸುವರು. 9 ಲೇಖಕರ ಪುಸ್ತಕಗಳನ್ನು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. 9 ನೇ ಸಾಹಿತ್ಯ ಸಮ್ಮೇಳಾಧ್ಯಕ್ಷ ಅನಂತ ಪದ್ಮನಾಭ ಸರ್ವಾಧ್ಯಕ್ಷ ಬೆಮ್ಮನೆ ದಯಾನಂದ್ ಅವರಿಗೆ ಧ್ವಜ ಹಸ್ತಾಂತರಿಸಲಿದ್ದಾರೆ. ಸಂಜೆ 6ಕ್ಕೆ ಜಾನಪದ ಗೋಷ್ಠಿಯಲ್ಲಿ ವಿದ್ವಾಂಸ ಡಾ.ಬಸವರಾಜ್ ನಲ್ಲಿಸರ, ಹಾಸನ ಕಸಾಪ ಜಿಲ್ಲಾಧ್ಯಕ್ಷ ಡಾ.ಮಲ್ಲೇಶ ಗೌಡ, ಜಾನಪದ ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಮುಖ್ಯ ಪಾಲ್ಗೊಳ್ಳುವರು.

ಫೆ. 22 ರಂದು ಬೆಳಿಗ್ಗೆ 9.30ಕ್ಕೆ ನಿವೃತ್ತ ಯೋಧ ಎಚ್.ಡಿ. ಸುರೇಶ್, ಸಾಮಾಜಿಕ ಚಿಂತಕರಾದ ಎ.ಎಸ್.ನಯನಾ ಪ್ರಧಾನ ಉಪನ್ಯಾಸವಿದೆ. ಬೆಳಿಗ್ಗೆ 11.30ಕ್ಕೆ ಕೃಷಿಗೋಷ್ಠಿಯಲ್ಲಿ ದಾನಿ ಗದ್ದೇಮನೆ ವಿಶ್ವನಾಥ, ಕಾಡಾ ಮಾಜಿ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಕೊನೋಡಿ ಗಣೇಶ್ ಉಪನ್ಯಾಸ ನೀಡಲಿದ್ದಾರೆ. 1.30ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ , ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ, ಭದ್ರಾವತಿ ಪ್ರಾಚಾರ್ಯ ಡಾ.ಹರಿಣಾಕ್ಷಿ, ಕಲ್ಕಟ್ಟೆ ಪುಸ್ತಕದ ಮನೆ ರೇಖಾ ನಾಗರಾಜರಾವ್ ಉಪನ್ಯಾಸವಿದೆ.

ಸಂಜೆ ಲೇಖಕ ಗೋಪಾಲ್ ಎಸ್. ಯಡಗೆರೆ ಅವರಿಗೆ ಮಾಜಿ ಸಚಿವ ಡಿ.ಎನ್.ಜೀವರಾಜ್ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ 10 ಜನ ಕನ್ನಡ ಭಾಷಾ ಸಾಧಕರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಲಿದ್ದಾರೆ. ದಿ.ಮಂಜುನಾಥ ಶೆಟ್ಟಿ ಕಣೇಬೈಲು ಪ್ರೇರಣಾ ಪ್ರಶಸ್ತಿಯನ್ನು 4 ವಿದ್ಯಾರ್ಥಿಗಳಿಗೆ ನೀಡಲಾಗು ವುದು. ಹೊಸನಗರ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಪತಿ ಹಳಗುಂದ ಸಮಾರೋಪ ನುಡಿಆಡಲಿದ್ದಾರೆ ಎಂದು ವಿವರಿಸಿದರು.

ಸುದ್ದಿ ಗೋಷ್ಠಿಯಲ್ಲಿ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್‌ ಸಾಹಿತ್ಯ ಸಮ್ಮೇಳನದ ಸಂಪ ನ್ಮೂಲ ಸಮಿತಿ ಅಧ್ಯಕ್ಷ ಎನ್.ಪಿ.ರಮೇಶ್, ಗೌರವಾಧ್ಯಕ್ಷ ಎಚ್.ಇ.ದಿವಾಕರ, ಪ್ರಧಾನ ಕಾರ್ಯದರ್ಶಿ ಎಚ್.ಇ.ಮಹೇಶ್, ಕಾರ್ಯದರ್ಶಿ ಸುನೀಲ್ ಕುಮಾರ್, ಕಸಾಪ ಮಹಿಳಾ ಘಟಕ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ?
ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ!