ಎಂ.ಆರ್‌.ಪೂವಮ್ಮರನ್ನು ಅಭಿನಂದಿಸಿದ ಅಕ್ಷಿತ್‌ ಸುವರ್ಣ

KannadaprabhaNewsNetwork |  
Published : Oct 05, 2026, 02:45 AM IST
ಎಂ.ಆರ್‌.ಪೂವಮ್ಮರನ್ನು ಅಭಿನಂದಿಸಿದ ಅಕ್ಷಿತ್‌ ಸುವರ್ಣ ಸ್ವಾಗತಿಸಿ, ಅಭಿನಂದಿಸಿದರು | Kannada Prabha

ಸಾರಾಂಶ

ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟು ಎಂ.ಆರ್.ಪೂವಮ್ಮ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ಸ್ವಾಗತಿಸಿ, ಅಭಿನಂದಿಸಿದರು.

ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟು ಎಂ.ಆರ್.ಪೂವಮ್ಮ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ಸ್ವಾಗತಿಸಿ, ಅಭಿನಂದಿಸಿದರು.ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಎಂ.ಆರ್.ಪೂವಮ್ಮ ಅವರ ಕ್ರೀಡಾ ಸಾಧನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಅವರಿಗೆ ಶುಭ ಹಾರೈಸಿದ್ದಾರೆ ಎಂದು ಅಕ್ಷಿತ್ ಸುವರ್ಣ ತಿಳಿಸಿದರು.

ಎಂ.ಆರ್.ಪೂವಮ್ಮ ಅವರ ಕ್ರೀಡಾ ಸಾಧನೆಗೆ ರಾಜ್ಯ ಸರ್ಕಾರ ಸೂಕ್ತ ಗೌರವಧನ ನೀಡಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡಿರುವ ಎಂ.ಆರ್. ಪೂವಮ್ಮ ಅವರಂತಹ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸೂಕ್ತ ಗೌರವಧನ ಹಾಗೂ ಅಗತ್ಯ ಪ್ರೋತ್ಸಾಹ ನೀಡಬೇಕು. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿ ಎಂದು ಅಕ್ಷಿತ್ ಸುವರ್ಣ ತಿಳಿಸಿದರು.

ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪದಾಧಿಕಾರಿಗಳಾದ ಆದರ್ಶ ಪೂಜಾರಿ, ನಿಶಾಂತ್, ಸುಶಾಂತ್, ವಿನಿತ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ ಆಕ್ಷೇಪಣೆಯಲ್ಲಿ ನಕಲಿ ಮರಣ ಪ್ರಮಾಣಪತ್ರ ಸಲ್ಲಿಕೆ
ಯುವಕರಲ್ಲಿ ನಾಯಕತ್ವ ಬೆಳೆಸಲು ಯುವ ಸಂಘ ಯೋಜನೆ