Albendazole-400 mg tablet for children under 19 years of age
-ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಮಾಹಿತಿ । ಯಾದಗಿರಿಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ
----
ಕನ್ನಡಪ್ರಭ ವಾರ್ತೆ ಯಾದಗಿರಿ
ದೇಶದಾದ್ಯಂತ ಫೆಬ್ರವರಿ 10ರಂದು “ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ” ಎನ್‌ಡಿಡಿ ಫೆಬ್ರವರಿ 10ರಿಂದ ಫೆ.16ರವರೆಗೆ ಕಾರ್ಯಕ್ರಮ ನಡೆಯುತ್ತಿದ್ದು, 1ರಿಂದ 19ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‌ಬೆಂಡಜೋಲ್-400ಎಂ.ಜಿ. ಮಾತ್ರೆಗಳನ್ನು ನೀಡಲಾಗುತ್ತದೆ, ಕಾರ್ಯಕ್ರಮ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಸಲಹೆ ನೀಡಿದರು.
ನಗರದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಸ್ಟೇ಼ಷನ್ ಬಜಾರ್ ಶಾಲೆಯಲ್ಲಿ ಫೆ.10ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಹೆಚ್ ವಿಭಾಗದ ಸಹಯೋಗದಲ್ಲಿ ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ ಬಿರಾದಾರ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ 1ರಿಂದ 5 ವರ್ಷ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. 6 ರಿಂದ 19 ವರ್ಷದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಕಾಲೇಜು, ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6 ರಿಂದ 19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ ಮಾತ್ರೆ ಹಾಗೂ 2 ರಿಂದ 19 ವರ್ಷದ ಮಕ್ಕಳಿಗೆ ಒಂದು ಆಲ್‌ಬೆಂಡಜೋಲ್ ಮಾತ್ರೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಮಲ್ಲಪ್ಪ.ಕೆ. ಅವರು ಮಾತನಾಡಿ, ಈ ಕಾರ್ಯಕ್ರಮ (ಎನ್‌ಡಿಡಿ) ನಮ್ಮ ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳ ಗುರಿ 5,13,173 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 1,51,542, ಅಂಗನವಾಡಿಯಿAದ ಹೊರಗುಳಿದ ಮಕ್ಕಳು 7577, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 3,61,631 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 18,678 ಹಾಗೂ ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಕ್ಕಳು 1956 ಇರುತ್ತಾರೆ, ಇತರೆ ಇಲಾಖೆಗಳು ಸಹಕರಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾ ಅಧಿಕಾರಿಗಳಾದ ಡಾ.ಸಂಜೀವಕುಮಾರ ರಾಯಚೂರಕರ್, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ.ಸಾಜೀದ, ತಾಲ್ಲೂಕ ಆರೋಗ್ಯ ಅಧಿಕಾರಿಗಳಾದ ಡಾ.ಹಣಮಂತರೆಡ್ಡಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಗನ್ನಾಥ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮನೋಹರ್ ಪಾಟೀಲ್, ಜಿಲ್ಲಾ ಎಮ್&ಡಿ ವ್ಯವಸ್ಥಾಪಕರಾದ ಶಂಕರನಾAದ ತಾಳಿಕೋಟಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಸುದರ್ಶನ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ವಿನುತಾ, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಇತರೆ ಇಲಾಖೆ ಅಧಿಕಾರಿಗಳು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತಾಲ್ಲೂಕ ಆರೋಗ್ಯ ಶಿಕ್ಷಣಾಧಿಕಾರಿಗಳಾದ ತುಳಸಿರಾಮ ನಿರೂಪಿಸಿದರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಲಕ್ಷ್ಮೀ ಮುಂಡಾಸ ಸ್ವಾಗತಿಸಿದರು, ಜಿಲ್ಲಾ ಆರ್.ಕೆ.ಎಸ್.ಕೆ ಸಂಯೋಜಕಾರದ ರಾಣೋಜಿ ಪ್ರಭುಲಿಂಗ ವಂದಿಸಿದರು
-ಫೋಟೊ
10ವೈಡಿಆರ್6 :
ಯಾದಗಿರಿ ನಗರದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಸ್ಟೇ಼ಷನ್ ಬಜಾರ್ ಶಾಲೆಯಲ್ಲಿ ಫೆ.10ರಂದು ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಹೆಚ್ ವಿಭಾಗದ ಸಹಯೋಗದಲ್ಲಿ ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮವನ್ನು ಜಿಪಂ ಸಿಇಒ ಲವೀಶ್ ಒರಡಿಯಾ ಮಗುವಿಗೆ ಮಾತ್ರೆ ನುಂಗಿಸುವ ಮೂಲಕ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.