ಮದ್ಯವ್ಯಸನಿಗಳು ಸಮಾಜಕ್ಕೆ ಮಾರಕ

KannadaprabhaNewsNetwork |  
Published : Jun 28, 2025, 12:18 AM IST
27ಎಚ್ಎಸ್ಎನ್17 : ಬೇಲೂರು  ಪೊಲಿಸ್ ಇಲಾಖೆ ವತಿಯಿಂದ ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ಸಭೆ ಕರೆಯಲಾಗಿತ್ತು. | Kannada Prabha

ಸಾರಾಂಶ

ಮಾದಕ ವ್ಯಸನಿಗಳು ಇತ್ತೀಚೆಗೆ ಸಮಾಜಕ್ಕೆ ದೊಡ್ಡ ಪಿಡುಗಾಗಿದ್ದು, ಕ್ಷಣಿಕ ಸುಖಕ್ಕಾಗಿ ಯುವಜನಾಂಗ ಅತ್ಯಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಬಹುಮುಖ್ಯವಾಗಿ ಹೆಣ್ಣು ಮಕ್ಕಳು ಸೇರಿದಂತೆ ೧೮ ವರ್ಷದ ಯುವಜನಾಂಗ ಹೆಚ್ಚಿದ್ದಾರೆ. ಪ್ರತಿ ವರ್ಷ ಜೂನ್ ೨೬ರಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು ಶಾಲಾಕಾಲೇಜಿನಲ್ಲಿ ಇದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ಸಭೆ ಕರೆಯಲಾಗಿತ್ತು.ಪಟ್ಟಣದ ನೆಹರೂ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಂಗವಾಗಿ ಮಾತನಾಡಿದ ಪೊಲೀಸ್ ಇನ್ಸ್‌ಪೆಕ್ಟರ್ ರೇವಣ್ಣ, ಮಾದಕ ವ್ಯಸನಿಗಳು ಇತ್ತೀಚೆಗೆ ಸಮಾಜಕ್ಕೆ ದೊಡ್ಡ ಪಿಡುಗಾಗಿದ್ದು, ಕ್ಷಣಿಕ ಸುಖಕ್ಕಾಗಿ ಯುವಜನಾಂಗ ಅತ್ಯಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಬಹುಮುಖ್ಯವಾಗಿ ಹೆಣ್ಣು ಮಕ್ಕಳು ಸೇರಿದಂತೆ ೧೮ ವರ್ಷದ ಯುವಜನಾಂಗ ಹೆಚ್ಚಿದ್ದಾರೆ. ಪ್ರತಿ ವರ್ಷ ಜೂನ್ ೨೬ರಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು ಶಾಲಾಕಾಲೇಜಿನಲ್ಲಿ ಇದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು. ಮನುಕುಲದ ಭವಿಷ್ಯಕ್ಕಾಗಿ ಮಾದಕ ವ್ಯಸನ ಹಾಗು ದುಶ್ಚಟಗಳಿಂದ ಯುವ ಜನಾಂಗ ದೂರವಿಡಲು ಪ್ರಾಂಶುಪಾಲರ ಪಾತ್ರ ಬಹುಮುಖ್ಯವಾಗಿದ್ದು, ನಿಮ್ಮೆಲ್ಲರ ಸಹಕಾರ ದೊರೆತರೆ ಈ ದುಶ್ಚಟಗಳನ್ನು ತಡೆಯಲು ಸಹಕಾರಿಯಾಗುತ್ತದೆ. ೧೮ ವರ್ಷದ ಒಳಪಟ್ಟು ಯಾವುದೇ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಶಾಲಾ ಕಾಲೇಜಿಗೆ ತಂದರೆ ಅವರ ಬಗ್ಗೆ ಹೆಚ್ಚಿನ ಗಮನ ಹರಿಸುವುದರ ಜೊತೆಗೆ ಪೋಷಕರಿಗೆ ದ್ವಿ ಚಕ್ರ ವಾಹನ ನೀಡದಂತೆ ಮಾಹಿತಿ ಬೀಡಬೇಕು. ಎಲ್ಲಾ ಶಾಲಾ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಬೇಕು. ಇದರಲ್ಲಿ ಹೆಣ್ಣು, ಗಂಡು ಎಂಬ ಬೇಧವಿಲ್ಲದೆ ಯಾರೇ ತಪ್ಪು ಮಾಡಿದರೂ ಅವರು ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ‌. ಆದ್ದರಿಂದ ಅವರಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ನೋಡಿಕೊಳ್ಳುವಂತೆ ತಿಳಿಸಿದರು.ಈ ವೇಳೆ ಬೇಲೂರು ಪಿಎಸ್‌ಐ ಎಸ್ ಜಿ ಪಾಟೀಲ್, ಶಂಕರಪ್ಪ, ದೇವೇಂದ್ರ, ದೇವರಾಜ್ ಹಾಗು ಶಾಲಾ ಕಾಲೇಜು ಪ್ರಾಂಶುಪಾಲರು ಹಾಜರಿದ್ದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ