- ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಧನಂಜಯ ಹೇಳಿಕೆ
- - -ಕನ್ನಡಪ್ರಭ ವಾರ್ತೆ ಹೊನ್ನಾಳಿ
ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾಸಗಿ ಕಾಲೇಜುಗಳನ್ನೂ ಮೀರಿಸುವಂತಹ ಉತ್ತಮ ಶೈಕ್ಷಣಿಕ, ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿಗೆ ದಾಖಲಾಗುತ್ತಿದ್ದಾರೆ. ಇವರನ್ನು ಅತ್ಯಂತ ಸಂಭ್ರಮದಿಂದ ಇಡೀ ಕಾಲೇಜು ಸ್ವಾಗತಿಸುತ್ತದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಧನಂಜಯ ಹೇಳಿದರು.ಪಟ್ಟಣದ ಕಾಲೇಜಿನ ಸಭಾಂಗದಲ್ಲಿ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಅಯ್ಕೆ ಮಾಡಿಕೊಂಡು ಪದವಿ ತರಗತಿಗಳಿಗೆ ಪ್ರವೇಶಾತಿ ಪಡೆದ ಎಲ್ಲ ವಿದ್ಯಾರ್ಥಿ ಸಮೂಹಕ್ಕೆ ಸ್ವಾಗತ ಕೋರಿದರು.
ಮೂಲ ಸೌಲಭ್ಯಗಳಾದ ಸುಸಜ್ಜಿತ ಕಟ್ಟಡ, ಲ್ಯಾಬ್, ಡಿಜಿಟಲೀಕರಣಗೊಂಡ ಲೈಬ್ರರಿ, ಉತ್ತಮ ಹಾಗೂ ಪ್ರತಿಭಾವಂತ ಹಿರಿಯ ಬೋಧಕ ವರ್ಗ, ವಿದ್ಯಾರ್ಥಿಸ್ನೇಹಿ ಕಾಲೇಜು ಆಡಳಿತ ಕಚೇರಿ ಈ ಕಾಲೇಜಿನಲ್ಲಿ ಇರುವುದು ವಿಶೇಷ. ಈ ಕಾಲೇಜಿನಲ್ಲಿ ತರಗತಿಗಳು ನಿರಂತರ ನಡೆಯುತ್ತಿವೆ. ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿದೆ. ಗೈರುಹಾಜರಾಗುವ ವಿದ್ಯಾರ್ಥಿಗಳ ಮಾಹಿತಿಗಳನ್ನು ಪೋಷಕರ ಗಮನಕ್ಕೆ ತಂದು ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡಲಾವುದು ಎಂದು ಹೇಳಿದರು.ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಯೇ ಹೆಚ್ಚಾಗಿದ್ದು, ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ. ಪೋಷಕರೂ ಈ ವಿಷಯದಲ್ಲಿ ಕಾಲೇಜಿನ ಆಡಳಿತದೊಂದಿಗೆ ಸಹಕರಿಸಬೇಕಾಗಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಕಾಲೇಜಿನಲ್ಲಿ ಆಯೋಜಿಸಲಾಗುತ್ತದೆ. ಕಾಲೇಜಿನಲ್ಲಿರುವ ವಿವಿಧ ಸಮಿತಿಗಳು, ಕ್ಲಬ್‌ಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಎಚ್.ವಿ. ಗೀತಾ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವ ತಿಳಿಸಿದರು. ಗ್ರಂಥಾಧಿಕಾರಿ ಡಾ.ನಾಗರಾಜ ನಾಯ್ಕ ಸ್ವಾಗತಿಸಿದರು. ಉಪನ್ಯಾಸಕ ಆಶೋಕ್ ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಇದ್ದರು.- - -
(ಕೋಟ್) ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ವಿವಿಧ ವೇದಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ತಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು.- ಡಾ. ಬಿ.ಜಿ. ಧನಂಜಯ, ಪ್ರಾಚಾರ್ಯ
- - --26ಎಚ್.ಎಲ್.ಐ1.ಜೆಪಿಜಿ:
ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಪ್ರಾಚಾರ್ಯ ಡಾ. ಬಿ.ಜಿ.ಧನಂಜಯ ಉದ್ಘಾಟಿಸಿದರು.