ವಾಕ್‌, ಶ್ರವಣ ಸಂಸ್ಥೆಯಲ್ಲಿ ಮಹಿಳಾ ಹಾಸ್ಟೆಲ್‌ ಹೊಸ ಬ್ಲಾಕ್‌ ಆರಂಭ

KannadaprabhaNewsNetwork |  
Published : Jun 28, 2025, 12:18 AM IST
1 | Kannada Prabha

ಸಾರಾಂಶ

ರಾಷ್ಟ್ರೀಯ ಸಂಸ್ಥೆಯಾಗಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗೆ ದೇಶದ ಎಲ್ಲಾ ಭಾಗಗಳಿಂದ ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಾರೆ.

ಕನ್ನಡಪ್ರಭ ವಾರ್ತೆ ಮೈಸೂರುಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಮಹಿಳಾ ಹಾಸ್ಟೆಲ್‌ನ ಹೊಸ ಬ್ಲಾಕನ್ನು ಶುಕ್ರವಾರ ಉದ್ಘಾಟಿಸಲಾಯಿತು.ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶಕಿ ನೂರಿನ್ ಬಕ್ಸ್ ಅವರು ಇಂದು ಆಯಿಷ್‌(AIISH ) ನ ಮಹಿಳಾ ಹಾಸ್ಟೆಲ್‌ನ ಹೊಸ ಬ್ಲಾಕ್ ಉದ್ಘಾಟಿಸಿದರು. ಈ ವೇಳೆ ಸಂಸ್ಥೆ ನಿರ್ದೇಶಕಿ ಪ್ರೊ.ಎಂ. ಪುಷ್ಪಾವತಿ ಇದ್ದರು.ರಾಷ್ಟ್ರೀಯ ಸಂಸ್ಥೆಯಾಗಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗೆ ದೇಶದ ಎಲ್ಲಾ ಭಾಗಗಳಿಂದ ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆಯುತ್ತಾರೆ. ಈ ಪೈಕಿ ಶೇ. 80ರಷ್ಟು ವಿದ್ಯಾರ್ಥಿಗಳು ಹೆಣ್ಣು ಮಕ್ಕಳಾಗಿದ್ದಾರೆ. ಮಹಿಳಾ ಹಾಸ್ಟೆಲ್‌ನ ಮೊದಲ ಬ್ಲಾಕ್ ಅನ್ನು 1968 ರಲ್ಲಿ ನಿರ್ಮಿಸಲಾಯಿತು ಮತ್ತು ವಿದ್ಯಾರ್ಥಿಗಳ ಸಂಖ್ಯೆಯಲ್ಲಿನ ಹೆಚ್ಚಳದ ಹಿನ್ನೆಲೆಯಲ್ಲಿ 1991 ಮತ್ತು 2005 ರಲ್ಲಿ ಹೊಸ ಬ್ಲಾಕ್‌ಗಳನ್ನು ಸೇರಿಸಲಾಯಿತು.ಕಳೆದ ಕೆಲವು ವರ್ಷಗಳಿಂದ ಸಂಸ್ಥೆಯಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸೀಟುಗಳ ಸಂಖ್ಯೆಯಲ್ಲಿ ಹೆಚ್ಚಳದೊಂದಿಗೆ, ಅಸ್ತಿತ್ವದಲ್ಲಿರುವ ಮಹಿಳಾ ಹಾಸ್ಟೆಲ್‌ಕೊಠಡಿಗಳ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಹೊಸ ಬ್ಲಾಕ್ ನಿರ್ಮಿಸಲಾಗಿದೆ. ಮೂರು ಮಹಡಿಗಳಲ್ಲಿ ಹರಡಿರುವ 12 ಟ್ರಿಪಲ್ ಕೊಠಡಿಗಳನ್ನು ಹೊಂದಿದ್ದು, ಇದು 36 ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ