ಕನ್ನಡಿಗರೆಲ್ಲರೂ ಭಾಷಾಭಿಮಾನ ಬೆಳೆಸಿಕೊಳ್ಳಬೇಕು: ಎಚ್.ಟಿ.ಮಂಜು

KannadaprabhaNewsNetwork |  
Published : Nov 02, 2026, 02:45 AM IST
1ಕೆಎಂಎನ್ ಡಿ22,23 | Kannada Prabha

ಸಾರಾಂಶ

ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಹಾಗೂ ಅಭಿಮಾನದ ದಿನವಾಗಿದೆ. ಕನ್ನಡ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.

ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿ, ಕನ್ನಡ ಭಾಷೆಗೆ ತನ್ನದೆ ಆದ ಶ್ರೀಮಂತ ಇತಿಹಾಸ, ಪರಂಪರೆ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದೆ. ಕನ್ನಡಿಗರೆಲ್ಲರೂ ಭಾಷಾಭಿಮಾನ ಬೆಳೆಸಿಕೊಂಡು ಮುಂದಿನ ಪೀಳಿಗೆಗೂ ಕನ್ನಡದ ಮಹತ್ವವನ್ನು ತಿಳಿಸಬೇಕು. ನಮ್ಮ ದೈನಂದಿನ ಜೀವನದಲ್ಲಿ ಕನ್ನಡ ಭಾಷೆ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಶ್ರೇಯಸ್ ಮಾತನಾಡಿ, ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಹಾಗೂ ಅಭಿಮಾನದ ದಿನವಾಗಿದೆ. ಕನ್ನಡ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ತಾಲೂಕು ಆಡಳಿತದ ಪರವಾಗಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಅಭಿನಂದಿಸಲಾಯಿತು. ಶಾಸಕ ಎಚ್.ಟಿ.ಮಂಜು ವಿವಿಧ ಶಾಲೆಗಳಿಂದ ಆಗಮಿಸಿದ್ದ ಎನ್‌ಸಿಸಿ, ಸ್ಕೌಟ್ಸ್ ಸೇರಿದಂತೆ ಹಲವಾರು ಚಟುವಟಿಕೆಗಳ ವಿದ್ಯಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿದರು. ಕನ್ನಡ ನಾಡು ನುಡಿಯನ್ನು ನೆನಪಿಸುವ ಶಾಲಾ ವಿದ್ಯಾರ್ಥಿಗಳ ನೃತ್ಯಗಳು ಗಮನ ಸೆಳೆದವು. ಕ್ರೀಡಾಂಗಣದ ತುಂಬಾ ಸಾರ್ವಜನಿಕರು ಹಾಗೂ ಪೋಷಕರು ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ತಾಪಂ ಇಒ ಕೆ.ಸುಷ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಕಸಾಪ ನಿಕಟ ಪೂರ್ವ ಅಧ್ಯಕ್ಷ ಎಚ್.ಆರ್.ಪೂರ್ಣಚಂದ್ರ ತೇಜಸ್ವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಆನಂದ್ ಕುಮಾರ್, ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ತಾಲೂಕು ಅಧ್ಯಕ್ಷ ಶ್ರೀನಿವಾಸ್, ಪದವಿಧರರ ವೇದಿಕೆ ಚೇತನ್ ಚಿಕ್ಕೋನಹಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೆಂಕಟೇಶ್, ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರು ಸೇರಿ 7 ಏರ್ಪೋರ್ಟಲ್ಲಿ ವಿದೇಶಿ ಯಾತ್ರಿಗೂ ಡಿಜಿ ಯಾತ್ರಾ
ಕನ್ನಡತನವನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳಲು ಶಾಸಕ ಟಿ.ಡಿ. ರಾಜೇಗೌಡ ಕರೆ