- ತರೀಕೆರೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಅಭಿನಂದನಾ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆನನ್ನ ಎಲ್ಲ ಸಮಯವನ್ನು ಸಮಾಜ ಮತ್ತು ಪಕ್ಷದ ಏಳಿಗೆಗೆ ಮೀಸಲಿಡುತ್ತೇನೆ ಎಂದು ಭಾರತೀಯ ಜನತಾ ಪಾರ್ಟಿಯ ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಗುರುವಾರ ಭಾರತೀಯ ಜನತಾ ಪಾರ್ಟಿ ತರೀಕೆರೆ ಮಂಡಲದಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ನೂತನ ಸದಸ್ಯ ರಾದ ಸಿ.ಟಿ.ರವಿ, ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೇಗೌಡರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ನಿಮ್ಮ ಶ್ರಮ ಅರ್ಥ ಮಾಡಿಕೊಂಡು, ಜನರ ಸಮಸ್ಯೆ ಪರಿಹರಿಸುವ ಕೆಲಸ ಮಾಡುತ್ತೇನೆ. ನಿರೀಕ್ಷೆ ಮೀರಿ ನನಗೆ ಮತ ನೀಡಿದ್ದೀರಿ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಮೇಲ್ಮನೆ ಚಿಂತಕರ ಚಾವಡಿ. ಮೇಲ್ಮನೆಯಲ್ಲಿ ಹೆಚ್ಚು ವಿಷಯಗಳು ಚರ್ಚೆಯಾಗುತ್ತವೆ. ಮಾತಿನ ಮನೆಯಾದ ಮೇಲ್ಮನೆಗೆ ಸಿ.ಟಿ. ರವಿ ಆಯ್ಕೆಯಾಗಿದ್ದಾರೆ. ಶಿಕ್ಷಣ ಹೇಗಿರಬೇಕು, ಶಿಕ್ಷಣ ನೀತಿ ಹೇಗಿರ ಬೇಕು ಇತ್ಯಾದಿ ಎಲ್ಲ ವಿಷಯಗಳ ಮೇಲೆ ದೀರ್ಘವಾಗಿ ಚರ್ಚೆಯಾಗುತ್ತದೆ. ಸಿ.ಟಿ.ರವಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಎಂದರು.ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಮಾತನಾಡಿ ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರ ಗೆಲುವಿನಿಂದ ದೊಡ್ಡ ಶಕ್ತಿ ಬಂದಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ.ಕಾರ್ಯಕರ್ತರು ಬಹಳ ವ್ಯವಸ್ಥಿತವಾಗಿ ಎಲ್ಲಾ ಚುನಾವಣೆಯನ್ನು ನಡೆಸಿಕೊಟ್ಟಿದ್ದಾರೆ ಎಂದು ಪಕ್ಷದ ಕಾರ್ಯ ರ್ತರಿಗೆ ಕೃತಜ್ಞತೆಗಳು ಎಂದು ತಿಳಿಸಿದ ಅವರು ವಿಧಾನ ಪರಿಷತ್ತಿನಲ್ಲಿ ಸಿ.ಟಿ.ರವಿ , ಕೋಟಾ ಶ್ರೀನಿವಾಸ ಪೂಜಾರಿ ಅವರ ಸ್ಥಾನ ತುಂಬುತ್ತಾರೆ. ಕ್ಷೇತ್ರದಲ್ಲಿ ಮುಖ್ಯ ರಸ್ತೆ ಅಭಿವೃದ್ಧಿ ಯಾಗಬೇಕು. ಅಜ್ಜಂಪುರ ರೈಲ್ವೆ ನಿಲ್ದಾಣದಲ್ಲಿ ಅನೇಕ ರೈಲುಗಳು ನಿಲುಗಡೆಯಾಗಬೇಕು ಎಂದು ಹೇಳಿದರು.
ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಬೇರೆ ಬೇರೆ ಸಮಸ್ಯೆಗಳಿವೆ. ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ಕೊಡಬೇಕು. ಬರಗಾಲವಿದೆ. ಬೋರ್ ವೆಲ್ ಗಳು ಬತ್ತಿಹೋಗಿವೆ ಅಜ್ಜಂಪುರ ರೈಲ್ವೆ ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳು ನಿಲುಗಡೆಯಾಗಬೇಕು. ಅಜ್ಜಂಪುರ ರೈಲ್ವೆ ಗೇಟ್ ಬಳಿ ಫ್ಲೈಓವರ್ ನಿರ್ಮಾಣ ವಾಗಬೇಕು ಎಂದು ಹೇಳಿದರು.ನೈರುತ್ಯ ಪದವೀಧರ ಕ್ಷೇತ್ರದಿಂದ ಚುನಾಯಿತರಾದ ಡಾ.ಧನಂಜಯ ಸರ್ಚಿ ಮಾತನಾಡಿ ತಮ್ಮ ಗೆಲುವಿಗೆ ಪಕ್ಷದ ಕಾರ್ಯಕರ್ತರು ಕಾರಣ. ದೇಶವನ್ನು ವಿಕಸಿತ ಮಾರ್ಗಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ನೂತನ ಸದಸ್ಯರಾದ ಸಿ.ಟಿ.ರವಿ, ಡಾ.ಧನಂಜಯ ಸರ್ಚಿ ಅವರನ್ನು ಸನ್ಮಾನಿಸಲಾಯಿತು.ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರ ದೇವರಾಜ ಶೆಟ್ಟಿ ಮಾತನಾಡಿದರು. ಪುರಸಭಾ ಸದಸ್ಯ ಟಿ.ಎಂ. ಭೋಜರಾಜ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್.ರಮೇಶ್, ಕೆ.ಆರ್.ಆನಂದಪ್ಪ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್. ಧೃವಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಚೈತ್ರಶ್ರೀ, ಜಿಪಂ ಮಾಜಿ ಉಪಾಧ್ಯಕ್ಷ ಜೆಡಿಎಸ್ ತಾಲೂಕು ಅಧ್ಯಕ್ಷ ಎಂ. ನರೇಂದ್ರ, ಶಂಭೈನೂರು ಆನಂದಪ್ಪ, ಕೃಷ್ಣಮೂರ್ತಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ರಾಜಶೇಖರ್, ಸೋಮಶೇಖರ್, ಶಿವಾನಂದ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ವಸಂತಕುಮಾರ್ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.-- ಬಾಕ್ಸ್--
ಕಾಂಗ್ರೆಸ್ ನಲ್ಲೆ ಏಳಲಿದೆ ಬಂಡಾಯ: ಸಿ.ಟಿ.ರವಿದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿದ್ದಾರೆ. ಇದಕ್ಕೆ ಕಾರಣರಾದ ಕೃತಜ್ಞತೆಗಳು ಎಂದು ವಿಧಾನ ಪರಿಷತ್ ನೂತನ ಸದಸ್ಯ ಸಿ.ಟಿ.ರವಿ ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ದುರಾಸೆಯಿಂದ ರೂಪಿಸಿದ್ದು, ಗ್ಯಾರಂಟಿ ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದೊಳಗೇ ಬಂಡಾಯ ಏಳುತ್ತದೆ ಟೀಕಿಸಿದರು.ನಾವೆಲ್ಲಾ ಒಗ್ಗೂಡಬೇಕು. ಬಿಡಿ ಬಿಡಿಯಾಗಬಾರದು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ಮಾಡಿದರು. ಉತ್ತಮ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉತ್ತಮವಾಗಲು ಸಾಧ್ಯವಾಗುತ್ತದೆ. ಆಸ್ಪತ್ರೆಗಳು ಸದೃಢ ವಾಗಿರಬೇಕು. ಜನರ ಆರೋಗ್ಯ ಉತ್ತಮವಾಗಿರುತ್ತದೆ. ರಾಜ್ಯದಲ್ಲಿ ಈ ಸರ್ಕಾರ ಬಂದ ಮೇಲೆ ಹತ್ಯೆ-ಆತ್ಮಹತ್ಯೆ ಹೆಚ್ಚಾಗಿದೆ. ಹಂಡ್ರಡ್ ಪರ್ಸೆಂಟ್ ಲೂಟಿಯಾಗುತ್ತಿದೆ ಎಂದು ಆರೋಪಿಸಿದ ಅವರು ಜನರ ನಂಬಿಕೆಗೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.13ಕೆಟಿಆರ್.ಕೆ.5ಃತರೀಕೆರೆಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಭಾರತೀಯ ಜನತಾ ಪಾರ್ಟಿ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಮಾಜಿ ಶಾಸಕ ಡಿ.ಎಸ್. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಡಾ.ಧನಂಜಯ ಸರ್ಜಿ ಮತ್ತಿತರರು ಇದ್ದರು.