ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲು 100 ಮೀಟರ್‌ಗೆ ಓರ್ವ ಮೇಲ್ವಿಚಾರಕ, 1 ಕಿ.ಮೀಗೆ ಒಬ್ಬ ತಾಲೂಕು ಮಟ್ಟದ ಅಧಿಕಾರಿಗಳನ್ನು ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ಹಾಗೂ 2 ಕಿ.ಮೀಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಗಳೆಂದು, 10 ಕಿ.ಮೀಗೆ ಕೆ.ಎ.ಎಸ್ ಅಧಿಕಾರಿಗಳನ್ನು ಕಮಾಡೆಂಟ್ ಎಂದು ನೇಮಿಸಲಾಗಿದೆ ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಸಂವಿಧಾನದಡಿ ಎಲ್ಲರೂ ಸಮಾನರು ಆಗಿರುವುದರಿಂದ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಒಂದು ಹಬ್ಬದಂತೆ ಆಚರಿಸಬೇಕು. ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ ಮಾನವ ಸರಪಳಿ ಆಲಮಟ್ಟಿ, ಸೀತಿಮನಿ, ಭಗವತಿ, ಹೊನ್ನಾಕಟ್ಟಿ ಕ್ರಾಸ್, ಕೂಡಲಸಂಗಮ ಕ್ರಾಸ್‌ನಿಂದ ಲೋಕಾಪೂರದವರೆ ಇರುವುದರಿಂದ ಬಾಗಲಕೋಟೆ ಮತ್ತು ಲೋಕಾಪೂರ ಸ್ಥಳೀಯ ಸಂಸ್ಥೆ ಹೊರತುಪಡಿಸಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯವರಿಗೆ ಭಾಗವಹಿಸಲು ತಿಳಿಸಲಾಗಿದೆ. ಈ ಕಾರ್ಯದಲ್ಲಿ ಭಾಗವಹಿಸುವ ಜನರಿಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಲು ತಿಳಿಸಲಾಗಿದೆ ಎಂದರು.ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ, ಬಾಗಲಕೋಟೆ ಜಿಲ್ಲಾ ಪೊಲೀಸ್ ವತಿಯಿಂದ ಈ ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಪರ ಜಿಲ್ಲಾ ವರಿಷ್ಠಾಧಿಕಾರಿ, ಡಿ.ಎಸ್.ಪಿ, ಸಿಪಿಐ, ಪಿಎಸ್.ಐ ಒಳಗೊಂಡದಂತೆ 400 ಜನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ 1 ಕಿ.ಮೀ ಒಬ್ಬ ಪೊಲೀಸ್, ಪ್ರತಿ 5 ಕಿ.ಮೀಗೆ ಪಿಎಸ್ಐ ನಿಯೋಜನೆಗೊಳಿಸಲಾಗಿದೆ. ಮಾನವ ಸರಪಳಿಯಲ್ಲಿ 1 ಲಕ್ಷಕ್ಕೂ ಹೆಚ್ಚಿನ ಜನ ಸೇರುವುದರಿಂದ ಸಂಚಾರಕ್ಕೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ ಎಂದರು.