ನಾಳೆ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಗೆ ಸಕಲ ಸಿದ್ಧತೆ

KannadaprabhaNewsNetwork |  
Published : Sep 04, 2026, 01:45 AM IST
 ನರಸಿಂಹರಾಜಪುರ ತಾಲೂಕಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸುವಂತೆ  ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ತಿಮ್ಮರಾಜು ಅ‍ವರು ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರಸೆಪ್ಟಂಬರ್ 5 ರ ಶನಿವಾರ ಎಲ್.ಎಫ್.ಚರ್ಚ್ ಹಾಲ್ ನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ನಡೆಯಲಿದ್ದು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ತಿಮ್ಮರಾಜು ತಿಳಿಸಿದರು.

; ಎಲ್.ಎಫ್.ಚರ್ಚ್ ಹಾಲ್ ನಲ್ಲಿ ಸಮಾರಂಭ - 24 ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಸೆಪ್ಟಂಬರ್ 5 ರ ಶನಿವಾರ ಎಲ್.ಎಫ್.ಚರ್ಚ್ ಹಾಲ್ ನಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ನಡೆಯಲಿದ್ದು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ತಿಮ್ಮರಾಜು ತಿಳಿಸಿದರು.

ಗುರುವಾರ ಪತ್ರಿಕಾ ಹೇಳಿಕೆ ನೀಡಿ ಸೆಪ್ಟಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಬಿಇಒ ಕಚೇರಿಯಿಂದ ಎಲ್.ಎಫ್.ಹಾಲ್ ನ ವರೆಗೂ ಶಿಕ್ಷಕರು ನಡೆಸಲಿರುವ ಮೆರವಣಿಗೆಗೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಮಾರಂಭ ಉದ್ಘಾಟಿಸಲಿದ್ದಾರೆ. ಲೋಕ ಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ 12 ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಿದ್ದಾರೆ. ಜಿಲ್ಲೆಯ 8 ತಾಲೂಕಿನ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಿರಿಯ ಪ್ರಾಥ ಮಿಕ ಶಾಲೆಗಳ ವಿಭಾಗದಲ್ಲಿ ತಾಲೂಕಿಗೆ 3 ಶಿಕ್ಷಕರು ಸೇರಿದಂತೆ ಒಟ್ಟು 24 ಅತ್ಯುತ್ತಮ ಶಿಕ್ಷಕರನ್ನು ರಾಜ್ಯ ಸಭೆ ಸಂಸದ ಜೈರಾಮ್ ರಮೇಶ್ ಹಾಗೂ ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್ ಸನ್ಮಾನಿಸಲಿದ್ದಾರೆ.

ಸಭೆಯಲ್ಲಿ ಜಿಲ್ಲೆಯ ವಿವಿಧ ವಿಧಾನ ಸಭಾ ಕ್ಷೇತ್ರಗಳ ಶಾಸಕರು, ವಿವಿಧ ನಿಗಮಗಳ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿ.ಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು ಭಾಗವಹಿಸಲಿದ್ದಾರೆ ಎಂದರು.

ಹೊಸನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಪತಿ ಹಳಗುಂದ ಉಪನ್ಯಾಸ ನೀಡಲಿದ್ದಾರೆ. ಈಗಾಗಲೇ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಯಶಸ್ಸಿಗೆ ಶಾಸಕ ಟಿ.ಡಿ.ರಾಜೇಗೌಡ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿ ರಚಿಸಲಾಗಿದೆ. ತಾಲೂಕಿನ ಸರ್ಕಾರಿ ಶಾಲೆ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು. ಅಲ್ಲದೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

-- ಬಾಕ್ಸ್ --

ಶಿಕ್ಷಕರ ದಿನಾಚರಣೆ: ಶಾಸಕರಿಗೆ ಆಹ್ವಾನ

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಲು ಶಾಸಕ ಟಿ.ಡಿ.ರಾಜೇಗೌಡರಿಗೆ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ತಿಮ್ಮರಾಜು ಹಾಗೂ ಇತರ ಮುಖಂಡರು ಬಾಸಾಪುರದ ಶಾಸಕರ ನಿವಾಸಕ್ಕೆ ತೆರಳಿ ಆಹ್ವಾನ ಪತ್ರಿಕೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಣಕಾಸು ಸಮಿತಿ ಪದಾಧಿಕಾರಿಗಳಾದ ಗೇರ್ ಬೈಲು ನಟರಾಜ, ಕೆ.ಎಂ.ಸುಂದರೇಶ್, ಇ.ಸಿ.ಜೋಯಿ, ಸುನೀಲ್ ಕುಮಾರ್, ಜುಬೇದ, ಬಿನು, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ತಾ.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಪ್ಪ, ತಾಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಶಿಕ್ಷಣ ಸಂಯೋಜಕ ರಂಗಪ್ಪ, ಶಿಕ್ಷಕರ ಸಂಘದ ಪದಾಧಿಕಾರಿ ತಿಮ್ಮೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೊಡ್ಡಮತಿಘಟ್ಟದಲ್ಲಿ ಜೈವಿಕ ಕೀಟನಾಶಕಗಳ ಬಳಕೆ ಕುರಿತು ಜಾಗೃತಿ
ಕಿಂಗ್‌ಪಿನ್‌’ ಕನ್ನಾಳೆ ಆಪ್ತರ ಮನೆಗೆ ಸಿಐಡಿ ಲಗ್ಗೆ