ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದದ ಕೊಠಡಿಯಲ್ಲಿ ಚುನಾವಣೆ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ ನಿಮಿತ್ತ ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು ಎಂದರು.ಪಾರದರ್ಶಕ ಚುನಾವಣೆಗೆ ಎಲ್ಲಾ ಹಂತದಲ್ಲಿ ಇವಿಎಂ ಮತಯಂತ್ರಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಗೊಂದಲವಾಗದಂತೆ ಅಗತ್ಯ ಕ್ರಮ ವಹಿಸಲಾಗಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ರ್‍ಯಾಂಡಮೈಜೇಶನ್ ಮಾಡಿ, ಎಲ್ಲ ಪ್ರಕ್ರಿಯೆಗಳನ್ನು ಅವರ ಗಮನಕ್ಕೆ ತರಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ: 06-ರಾಯಚೂರು (ಪ.ಪಂ) ಲೋಕಸಭಾ ಕ್ಷೇತ್ರದಲ್ಲಿ 2203 ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದ. ತಾಪಮಾನ ಹೆಚ್ಚು ಇರುವುದರಿಂದ ಮತಗಟ್ಟೆಗಳಲ್ಲಿ ಆಶಾ ಕಾರ್ಯಕರ್ತರು ಅರೆ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ಶೆಡ್, ವಿಶ್ರಾಂತಿ ಕೊಠಡಿ ಮತ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ ಎಂದರು.
ದೂರುಗಳ ವಿಲೇವಾರಿ:ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಗೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಹಾಗೂ ವಿವಿಧ ವಿಷಯಗಳಿಗಾಗಿ ದೂರುಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದೆ. 1950, ಸಿ-ವಿಜಿಲ್ ಹಾಗೂ ಇತರೆ ಮಾಧ್ಯಮದ ಮೂಲಕ ಅವಕಾಶ ಕಲ್ಪಿಸಲಾಗಿರುತ್ತದೆ. ಇಂದಿನವರಿಗೂ 1950 ಮೂಲಕ 621 (ರಾಯಚೂರು ಜಿಲ್ಲೆಯಿಂದ 321 ಹಾಗೂ ಯಾದಗಿರಿಯಿಂದ 300) ದೂರು ಸ್ವೀಕೃತಿಯಾಗಿದ್ದು ಹಾಗೂ ಸಿ-ವಿಜಿಲ್ ಮೂಲಕ 109 ದೂರುಗಳನ್ನು ಸ್ವೀಕೃತಿಯಾಗಿದೆ. ಎಲ್ಲಾ ದೂರುಗಳ ಕುರಿತು ಅಗತ್ಯ ಕ್ರಮಕೈಗೊಂಡು ವಿಲೇಗೊಳಿಸಲಾಗಿರುತ್ತದೆ ಎಂದು ತಿಳಿಸಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ವಿವರ: ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ದಿನಾಂಕದಿಂದ ಇಲ್ಲಿಯವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದ ಒಟ್ಟು 96 ಪ್ರಥಮ ವಿಚಾರಣಾ ವರದಿ ಪ್ರಕರಣಗಳು ದಾಖಲಾಗಿರುತ್ತದೆ. ಜಿಲ್ಲೆಯಲ್ಲಿ ಉಲ್ಲಂಘನೆಗಳ ಮೇಲೆ ಸೂಕ್ತ ನಿಗಾ ಇಡಲು ವಿವಿಧ ತಂಡಗಳನ್ನು, ಚೆಕ್‌ಪೋಸ್ಟ್‌ಗಳನ್ನು ಹಾಗೂ ಸರ್ವೆಲೆನ್ಸ್ ತಂಡಗಳನ್ನು ರಚನೆ ಮಾಡಲಾಗಿದೆ. ಎಲ್ಲಾ ತಂಡಗಳು ತಮ್ಮ ಕರ್ತವ್ಯದಲ್ಲಿರುತ್ತಾರೆ. ವಿವಧ ತಂಡಗಳಿಂದ ಇಲ್ಲಿಯವರಿಗೂ 17,57,400 ರು. ಜಪ್ತಿ ಮಾಡಲಾಗಿದೆ. ಅದೇ ರೀತಿಯಾಗಿ 15,577.857 ಲೀ. ಒಟ್ಟು ಮೊತ್ತ 52,85,083.19 ರು. ಗಳಷ್ಟು ಮದ್ಯ ಜಪ್ತಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಇದ್ದರು.