ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ತಮ್ಮ ನಿವಾಸ ಶಿವಪಾರ್ವತಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 4,500ಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, ಸುಮಾರು 31 ವರ್ಷಗಳ ನಂತರ ದಾವಣಗೆರೆಯಲ್ಲಿ ನಡೆಯುವ ಪತ್ರಕರ್ತರ ಹಬ್ಬ-ಜಾತ್ರೆಗಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ ಎಂದರು.
ಸಂಘದ ರಾಜ್ಯ, ಜಿಲ್ಲಾ ಘಟಕ ಹಾಗೂ ದಾವಣಗೆರೆ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ. ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ತಾಲೂಕು ಕೇಂದ್ರವಾಗಿದ್ದ ದಾವಣಗೆರೆಯಲ್ಲಿ 1992ರಲ್ಲಿ ಆರ್.ಎಚ್.ಹನುಮಂತಪ್ಪ ಛತ್ರದಲ್ಲಿ ಸಮ್ಮೇಳನವಾಗಿತ್ತು. ನೂತನ ಜಿಲ್ಲೆಯಾದ 25 ವರ್ಷ ನಂತರ ಇದೇ ಮೊದಲ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ, ಅಭಿಮಾನದ ಸಂಗತಿ ಎಂದು ಹೇಳಿದರು.ಪತ್ರಕರ್ತರ ಬೃಹತ್ ಮೆರವಣಿಗೆ:
ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟನೆ:
ಮಧ್ಯಾಹ್ನ 2ಕ್ಕೆ ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮಗಳ ಭವಿಷ್ಯ’, ಸಂಜೆ 4ಕ್ಕೆ `ಸ್ಥಳೀಯ ಪತ್ರಿಕೆಗಳು:ಹಿಂದೆ-ಇಂದು-ಮುಂದು’ವಿಷಯ ಕುರಿತಂತೆ ಗೋಷ್ಠಿ ಇದೆ. ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ, ಹಿರಿಯ ಪತ್ರಕರ್ತ ಈಶ್ವರ ದೈದೋಟ ಸೇರಿ ಹಿರಿಯ ಪತ್ರಕರ್ತರು ಭಾಗವಹಿಸುವರು. ಅದೇ ದಿನ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಹೇಳಿದರು.
ಫೆ.4ರ ಬೆಳಿಗ್ಗೆ 9.45ಕ್ಕೆ ಪ್ರತಿನಿಧಿಗಳ ಸಮಾವೇಶ ಜರುಗಲಿದೆ. ಬೆಳಿಗ್ಗೆ 10.30ಕ್ಕೆ `ಮಾಧ್ಯಮ ಮತ್ತು ಸರ್ಕಾರ’, ಬೆಳಿಗ್ಗೆ 11.30ಕ್ಕೆ `ಸಾಮಾಜಿಕ ಮಾಧ್ಯಮ - ವೃತ್ತಿ ವಿಶ್ವಾಸಾರ್ಹತೆ’ ವಿಷಯಗಳ ಕುರಿತ ಗೋಷ್ಠಿಗಳ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ನಾಡಿನ ಹಿರಿಯ ಪತ್ರಕರ್ತ ಎಸ್.ಕೆ.ಶೇಷಚಂದ್ರಿಕಾ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ ಸಮಾರೋಪದ ನುಡಿಗಳನ್ನಾಡುವರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ಸಂತೋಷ ಲಾಡ್, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ ಖಂಡ್ರೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲೆಯ ಶಾಸಕರು ವಿಶೇಷ ಆಹ್ವಾನಿತರಾಗಿದ್ದಾರೆ ಎಂದು ವಿವರಿಸಿದರು.
.................
ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ಪತ್ರಕರ್ತರಿಗೆ ಸನ್ಮಾನಿಸಿ, ಗೌರವಿಸಲಾಗುವುದು. ರಾಜ್ಯ ಪತ್ರಕರ್ತರ ಸಮ್ಮೇಳನದ ಸಂದರ್ಭದಲ್ಲಿ ಪ್ರತಿ ವರ್ಷ ನಾಡಿನ ಹಿರಿಯ ಪತ್ರಕರ್ತರಿಗೆ ಕೊಡಮಾಡುವ ಕೆಯುಡಬ್ಲ್ಯೂಜೆ ರಾಜ್ಯ ಪ್ರಶಸ್ತಿಯನ್ನು ದಾವಣಗೆರೆ ಜಿಲ್ಲೆಯ 6 ಜನರಿಗೆ ನೀಡಲು ತೀರ್ಮಾನಿಸಲಾಗಿದೆ. ಸಮಾವೇಶಕ್ಕೆ ಬಂದ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಯಾವುದೇ ಸಣ್ಣಪುಟ್ಟ ಸಮಸ್ಯೆಯೂ ಆಗದಂತೆ ಎಲ್ಲಾ ಸಮಿತಿಗಳು ಕಳೆದೊಂದು ತಿಂಗಳಿಂದಲೂ ಸಿದ್ಧತೆಯಲ್ಲಿ ತೊಡಗಿವೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮನವಿ ಮಾಡಿದರು.