ಜಿಲ್ಲೆಯಲ್ಲಿ ಸುಸೂತ್ರ ಮತದಾನಕ್ಕೆ ಸಕಲ ಸಿದ್ಧತೆ : ಶುಭಾಕಲ್ಯಾಣ್

KannadaprabhaNewsNetwork |  
Published : Apr 26, 2024, 12:48 AM ISTUpdated : Apr 26, 2024, 12:49 AM IST
ಶುಭಾಕಲ್ಯಾಣ್ | Kannada Prabha

ಸಾರಾಂಶ

ಲೋಕಸಭಾ ಕ್ಷೇತ್ರ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭಾಕಲ್ಯಾಣ್ ತಿಳಿಸಿದ್ದಾರೆ

ಕನ್ನಡಪ್ರಭ ವಾರ್ತೆ ತುಮಕೂರುಲೋಕಸಭಾ ಕ್ಷೇತ್ರ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭಾಕಲ್ಯಾಣ್ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರ ಹಾಗೂ ಶಿರಾ, ಪಾವಗಡ, ಕುಣಿಗಲ್ ವಿಧಾನಸಭಾ ಕ್ಷೇತ್ರದ 11,35,973 ಪುರುಷ, 11,55,194 ಮಹಿಳೆ ಹಾಗೂ 93 ಇತರೆ ಸೇರಿದಂತೆ ಒಟ್ಟು 22,91,260 ಮತದಾರರಿದ್ದಾರೆ. 2618 ಮತಗಟ್ಟೆ ಸ್ಥಾಪನೆ:ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ, ಮಧುಗಿರಿ ವಿಧಾನಸಭಾ ಕ್ಷೇತ್ರ ಸೇರಿದಂತೆ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1846, ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೊಳಪಡುವ ಜಿಲ್ಲೆಯ ಶಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 507 ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೊಳಪಡುವ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ 265 ಮತಗಟ್ಟೆ ಸೇರಿ ಒಟ್ಟು 2618 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 546 ಕ್ರಿಟಿಕಲ್ ಮತಗಟ್ಟೆ ಸೇರಿ ಒಟ್ಟು 1312 ಮತಗಟ್ಟೆಗಳು ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ಒಳಪಡಲಿದೆ. 10,427 ಮತಗಟ್ಟೆ ಅಧಿಕಾರಿಗಳ ನೇಮಕ:ಚುನಾವಣೆಯನ್ನು ಲೋಪದೋಷವಿಲ್ಲದಂತೆ ನಡೆಸುವ ನಿಟ್ಟಿನಲ್ಲಿ 2,618 ಮತಗಟ್ಟೆಗಳಿಗೆ 10,472 ಮತಗಟ್ಟೆ ಅಧಿಕಾರಿಗಳು, 2,618 ಗ್ರೂಪ್ ಡಿ ನೌಕರರು ಹಾಗೂ 610 ಸೂಕ್ಷ್ಮವೀಕ್ಷಕರನ್ನು ನೇಮಕ ಮಾಡಲಾಗಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ಕರೆದೊಯ್ಯಲು 382 ಬಸ್, 74 ಮಿನಿ ಬಸ್,113 ಜೀಪ್ ಸೇರಿದಂತೆ ಒಟ್ಟು 569 ವಾಹನಗಳ ವ್ಯವಸ್ಥೆ ಮಾಡಲಾಗಿದೆ.ಜಿಲ್ಲೆಯಲ್ಲಿ ಸ್ಥಾಪಿಸಿರುವ 2618 ಮತಗಟ್ಟೆಗಳಿಗೆ ಮತದಾರರು ಮತದಾನ ಮಾಡಲು 3962 ಕಂಟ್ರೋಲ್ ಯೂನಿಟ್, 5,354 ಬ್ಯಾಲೆಟ್ ಯೂನಿಟ್ ಹಾಗೂ 3,568 ವಿವಿ ಪ್ಯಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ.

ಮಸ್ಟರಿಂಗ್, ಡಿ-ಮಸ್ಟರಿಂಗ್ ಕೇಂದ್ರ ಸ್ಥಾಪನೆ: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು, ತಿಪಟೂರು ಸರ್ಕಾರಿ ಬಾಲಕರ ಪ.ಪೂ.ಕಾಲೇಜು, ತುರುವೇಕೆರೆ ಸರ್ಕಾರಿ ಪ.ಪೂ.ಕಾಲೇಜು, ತುಮಕೂರು ಸರ್ಕಾರಿ ಪ.ಪೂ.ಕಾಲೇಜು, ತುಮಕೂರು ವಿಜಯನಗರದ ಸರ್ವೋದಯ ಪ್ರೌಢಶಾಲೆ, ಗುಬ್ಬಿ ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊರಟಗೆರೆ ಸರ್ಕಾರಿ ಪ.ಪೂ.ಕಾಲೇಜು, ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಣಿಗಲ್ ಸರ್ಕಾರಿ ಮಹಾತ್ಮಗಾಂಧಿ ಪ.ಪೂ.ಕಾಲೇಜು, ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡದ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್, ಡಿ-ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಬಹಿರಂಗ ಪ್ರಚಾರ ಕೈಗೊಂಡಲ್ಲಿ ಕಾನೂನು ಕ್ರಮ: ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಬಹಿರಂಗ ಪ್ರಚಾರಕ್ಕೆ ನಿಗದಿಪಡಿಸಿರುವ ಗಡುವು ಮುಕ್ತಾಯವಾಗಿರುವುದರಿಂದ ಯಾವುದೇ ಪಕ್ಷ, ಉಮೇದುವಾರರು, ಇತರರು ಬಹಿರಂಗ ಪ್ರಚಾರ ನಡೆಸಬಾರದು. ನಿಯಮ ಮೀರಿ ಬಹಿರಂಗ ಪ್ರಚಾರ ಕೈಗೊಂಡಲ್ಲಿ ಅಂತಹವರು ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 126ರಡಿ 2 ವರ್ಷಗಳ ಸಜಾ ಅಥವಾ ದಂಡ ಅಥವಾ ಎರಡರಿಂದಲೂ ಶಿಕ್ಷೆಗೆ ಗುರಿಯಾಗುತ್ತಾರೆ. ಆದರೆ ಚುನಾವಣಾ ಅಭ್ಯರ್ಥಿಗಳಿಗೆ ಮತದಾನದ ಮುಕ್ತಾಯಕ್ಕೆ ನಿಗದಿಯಾಗಿರುವ ಕಡೆಯ 48 ಗಂಟೆಗಳಲ್ಲಿ ಮನೆ-ಮನೆಗೆ ನಾಲ್ಕು ಜನ ಬೆಂಬಲಿಗರೊಂದಿಗೆ ಭೇಟಿ ನೀಡಿ ಮತ ಯಾಚಿಸಲು ಅವಕಾಶವಿರುತ್ತದೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ