
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ದಶಕಗಳ ಕಾಲ ವೀರರಾಣಿ ಕಿತ್ತೂರ ಚನ್ನಮ್ಮ ಪ್ರತಿಮೆ ಸ್ಥಾಪನೆಯಾಗಬೇಕು ಎಂಬ ಬೇಡಿಕೆಯಿತ್ತು. ಶಂಕರಗೌಡ ಪಾಟೀಲ ಸವನಹಳ್ಳಿ ಸೇರಿದಂತೆ ಅನೇಕ ಸಮಾಜ ಮುಖಂಡರು ಈ ಬಗ್ಗೆ ಮನವಿ ನೀಡುತ್ತಲೇ ಇದ್ದರು. ಕೇಂದ್ರ ಬಸ್ ನಿಲ್ದಾಣದ ಎದುರು ವೃತ್ತ ನಿರ್ಮಾಣ ಸಾಧ್ಯವಾಗದ ಕಾರಣ ಕೇಂದ್ರ ಬಸ್ ನಿಲ್ದಾಣದ ಎದುರು ಭವ್ಯವಾದ ಅಶ್ವಾರೂಢ ರಾಣಿ ಚನ್ಮಮ್ಮ ಪ್ರತಿಮೆ ಸ್ಥಾಪಿಸಲಾಗಿದೆ. ಕೇಂದ್ರ ಬಸ್ ನಿಲ್ದಾಣಕ್ಕೂ ಸಹ ರಾಣಿ ಚನ್ನಮ್ಮರ ಹೆಸರು ಇರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ನಾಮಫಲಕವನ್ನು ಸಹ ಮುಖ್ಯಮಂತ್ರಿಗಳು ಅನಾವರಣಗೊಳಿಸಲಿದ್ದಾರೆ. ಇಂಧನ, ಸಮಾಜ ಕಲ್ಯಾಣ, ನೀರಾವರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಸಹ ಮುಖ್ಯಮಂತ್ರಿಗಳು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದರು.
ವಿಮಾನ ನಿಲ್ದಾಣ ಕಾರ್ಯ ಸಹ ಸಂಪೂರ್ಣಗೊಂಡಿದೆ. ಅದಕ್ಕೆ ವಿಶ್ವಗುರು ಬಸವೇಶ್ವರರ ಹೆಸರು, ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಹೆಸರು ಹಾಗೂ ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹಾಗೂ ಅಕ್ಕಮಹಾದೇವಿ ಹೆಸರನ್ನು ಮಹಿಳಾ ವಿವಿಗೆ ಇರಿಸಲಾಗಿದ್ದು, ಇಬ್ರಾಹಿಂ ಆದಿಲ್‌ಷಾಹಿ ಹೆಸರು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿಯೂ ಕಾರ್ಯ ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.ಚನ್ನಮ್ಮ ಇಡೀ ದೇಶದ ಆಸ್ತಿ, ಕೂಡಲಸಂಗಮ ಪಂಚಮಸಾಲಿ ಜಗದ್ಗುರುಗಳು, ಹರಿಹರ ಪೀಠದ ಜಗದ್ಗುರುಗಳು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಯಾವ ಭಿನ್ನಾಭಿಪ್ರಾಯವಾಗಲಿ, ಅಪಸ್ವರವಾಗಲಿ ಇಲ್ಲವೇ ಇಲ್ಲ. ನಗರ ಶಾಸಕ ಯತ್ನಾಳ ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ. ಕೇಂದ್ರ ಬಸ್ ನಿಲ್ದಾಣದಲ್ಲಿ ಸಂಗೊಳ್ಳಿ ರಾಯಣ್ಣ ಭವ್ಯ ಮೂರ್ತಿ ಪ್ರತಿಷ್ಠಾಪನೆಯನ್ನು ಮಾಡುವ ನಿಟ್ಟಿನಲ್ಲಿ ಸಮಾಜ ಬಾಂಧವರು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕರಾದ ಪ್ರೊ.ರಾಜು ಆಲಗೂರ, ಡಾ.ಮಕ್ಬೂಲ್ ಬಾಗವಾನ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್, ಮೊಹ್ಮದ್ ರಫೀಕ್ ಟಪಾಲ್, ಅಬ್ದುಲ್ ರಜಾಕ್ ಹೊರ್ತಿ, ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ, ಬಿ.ಎಸ್.ಪಾಟೀಲ ಯಾಳಗಿ, ವೈಜನಾಥ ಕರ್ಪೂರಮಠ, ಸಜ್ಜಾದೆಪೀರಾ ಮುಶ್ರೀಫ್, ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಆಜಾದ್ ಪಟೇಲ್, ಫಯಾಜ್ ಕಲಾದಗಿ, ವಿದ್ಯಾರಾಣಿ ತುಂಗಳ, ಶ್ರೀದೇವಿ ಉತ್ಲಾಸರ ಇದ್ದರು.ವೆಲೋಡ್ರೋಂ ಲೋಕಾರ್ಪಣೆ ಸಹ ದಿ.9 ರಂದು ಮಾಡಲಿದ್ದು, ಅಲ್ಲಿ ವೇದಿಕೆ ಕಾರ್ಯಕ್ರಮ ಇಲ್ಲ, ಸಾಂಕೇತಿಕವಾಗಿ ಅಲ್ಲಿ ಮುಖ್ಯಮಂತ್ರಿಗಳು ಈ ವೆಲೋಡ್ರೋಂ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಸುಧಾಕರ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ ಸೇರಿದಂತೆ ಅನೇಕ ಸಚಿವರು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.ಡಾ.ಎಂ.ಬಿ.ಪಾಟೀಲ, ಸಚಿವ ದಾಖಲೆ ಬರೆದ ಸಿದ್ದುಗೆ ವಿಶೇಷ ಸನ್ಮಾನ
ಗ್ರಾಮೀಣ ಭಾಗದಿಂದ ಬಂದು ಇಂದು ಎಲ್ಲ ವರ್ಗಗಳ ಜನತೆಯ ಪ್ರೀತಿ-ವಿಶ್ವಾಸ ಗಳಿಸುವ ಮೂಲಕ ಈಗ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ಹೊಸ ದಾಖಲೆ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಮಸ್ತ ವಿಜಯಪುರ ಜಿಲ್ಲೆಯ ಜನತೆಯ ಪರವಾಗಿ ಹೃದಯಸ್ಪರ್ಶಿಯಾಗಿ ಅಭಿನಂದಿಸುವ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಎಂ.ಬಿ.ಪಾಟೀಲ ಪ್ರಕಟಿಸಿದರು. ದೇಶ ರಕ್ಷಣೆ ವಿಷಯ ಬಂದಾಗ ಇಂದಿರಾ ಗಾಂಧಿ ಅವರನ್ನು ಬಂಗಾರದಿಂದ ತೂಗಿದ ಜಿಲ್ಲೆ ನಮ್ಮದು. ಹೀಗಾಗಿ ಈ ಭಾಗಕ್ಕೆ ಕೊಡುಗೆ ನೀಡಿದ ಸಿದ್ದರಾಮಯ್ಯ ಅವರನ್ನು ಸಹ ಅಭೂತಪೂರ್ವವಾಗಿ ಸನ್ಮಾನಿಸಲಾಗುವುದು. ಅದು ಯಾವ ರೀತಿ ಎನ್ನುವುದು ಸಮಾರಂಭದಲ್ಲಿಯೇ ಗೊತ್ತಾಗಲಿದೆ ಎಂದರು.ಸೈಕ್ಲಿಂಗ್ ಅಕಾಡೆಮಿ ಸ್ಥಾಪನೆವಿಜಯಪುರ ಜಿಲ್ಲೆ ಸೈಕ್ಲಿಂಗ್ ಕಾಶಿ ಎಂದೇ ಹೆಸರಾಗಿದೆ. ಹೀಗಾಗಿ ಈ ಚಟುವಟಿಕೆಗಳಿಗೆ ಇನ್ನಷ್ಟೂ ಬಲ ನೀಡುವ ದೃಷ್ಟಿಯಿಂದ ಸೈಕ್ಲಿಂಗ್ ಅಕಾಡೆಮಿ ಸ್ಥಾಪಿಸಲು ಮಹತ್ವದ ಚರ್ಚೆ ನಡೆದಿದೆ. ವಿವಿಧ ಕಾರ್ಪೊರೇಟ್ ಕಂಪನಿಗಳ ಸಹಯೋಗದೊಂದಿಗೆ ಈ ಅಕಾಡೆಮಿ ಸ್ಥಾಪಿಸಿ ಸೈಕ್ಲಿಂಗ್‌ಗೆ ಅಮೋಘ ಸೇವೆ ಸಲ್ಲಿಸಿದವರ ಹೆಸರು ಇರಿಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದರು.