ಕನ್ನಡಪ್ರಭ ವಾರ್ತೆಚಿತ್ರದುರ್ಗ
ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಹಿಂದೂ ಮಹಾ ಗಣಪತಿಯ ಸಭಾಮಂಟಪದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಭಾಯಾತ್ರೆಗೆ ಪೂರ್ವಾಭಾವಿಯಾಗಿ ನಗರದಲ್ಲಿ ಬೃಹತ್ ಬೈಕ್ ರ್‍ಯಾಲಿಯನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಅಲ್ಲದೆ, ದುರ್ಗಾ ಹೋಮ, ನವಗ್ರಹ ಹೋಮ, ಗಣಪತಿ ಹೋಮ ಹಾಗೂ ಮೃತ್ಯುಂಜಯ ಹೋಮಗಳು ವಿಸ್ತೃತವಾಗಿ ನೆರವೇರಿವೆ ಶೋಭಾಯಾತ್ರೆಯ ನಿಮಿತ್ತ ಇಡೀ ಚಿತ್ರದುರ್ಗ ನಗರದ ಪ್ರಮುಖ ವೃತ್ತಗಳಾದ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಕನಕ ವೃತ್ತ ಹಾಗೂ ಒನಕೆ ಓಬವ್ವ ವೃತ್ತಗಳಲ್ಲಿ ಕೇಸರಿ ಅಲಂಕಾರ ಮತ್ತು ದೀಪಾಲಂಕಾರ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದರು.
ಶೋಭಾಯಾತ್ರೆಯು ಬೆಳಗ್ಗೆ 10 ಗಂಟೆಗೆ ಗಣಪತಿ ಪೆಂಡಾಲ್ ಎದುರಿನ ವೇದಿಕೆಯಲ್ಲಿ ಪ್ರಾರಂಭವಾಗಲಿದೆ. ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶ್ವ ಹಿಂದೂ ಪರಿಷತ್‍ನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಗೋಪಾಲ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.ಚಿತ್ರದುರ್ಗದ ವಿವಿಧ ಮಠಾಧೀಶರು ಮತ್ತು ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮೆರವಣಿಗೆಯಲ್ಲಿ ತಮಟೆ, ನಾಸಿಕ್ ಢೋಲ್ ಸೇರಿದಂತೆ ಸುಮಾರು 6 ರಿಂದ 8 ಕಲಾತಂಡಗಳು ಪಾಲ್ಗೊಳ್ಳಲಿವೆ.
ಅ.3 ರಂದು ಶೋಭಾಯಾತ್ರೆ ನಡೆಯಲಿದ್ದು ಇದರಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದು ಜಾನಪದ ಕಲಾ ತಂಡಗಳು ಸೇರಿದಂತೆ ನಾಸ್ತಿಕ್‍ನ ಡೋಲು, ವಿವಿಧ ರೀತಿಯ ಸ್ಥಳಿಯ ಕಲಾವಿದರು ಭಾಗವಹಿಸಲಿದ್ದಾರೆ, ಸಮಿತಿಯು ಎಂದಿಗೂ ಡಿಜೆ ಬಳಸುವುದಿಲ್ಲವೆಂದು ಸ್ಪಷ್ಟಪಡಿಸಿದ ಅವರು, ಸಾಂಪ್ರದಾಯಿಕ ಹಾಗೂ ನಿಯಮಾವಳಿಗಳಿಗೆ ಅನುಗುಣವಾಗಿ ಸ್ಪೀಕರ್‌ಗಳನ್ನು ಬಳಸಲಾಗುವುದು ಶುಕ್ರವಾರ ರಜೆ ಇರುವುದರಿಂದ ಈ ಬಾರಿ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 6 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಹಳ್ಳಿಗಳಿಂದ ಟ್ರ್ಯಾಕ್ಟರ್‌ಗಳು ಹಾಗೂ ವಿವಿಧ ವಾಹನಗಳಲ್ಲಿ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಆಗಮಿಸುವ ಎಲ್ಲಾ ಭಕ್ತರಿಗೂ ಸುಸಜ್ಜಿತವಾಗಿ ಅನ್ನಪ್ರಸಾದ ವಿತರಣೆ ಮಾಡಲು ಆಯೋಜಕರ ಜೊತೆ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಉಪಾಧ್ಯಕ್ಷ ಅಶೋಕ್ ಕುಮಾರ್, ಸಲಹಾ ಸಮಿತಿ ಸದಸ್ಯರಾದ ಶರಣ್ ಕುಮಾರ್, ಜಿ.ಎಂ.ಸುರೇಶ್, ಸಂದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.