ಸಂವಿಧಾನದಿಂದ ಎಲ್ಲ ಜನಾಂಗದವರಿಗೂ ಅಧಿಕಾರ: ಭಗವಂತ ಖೂಬಾ

KannadaprabhaNewsNetwork |  
Published : Apr 15, 2024, 01:20 AM IST
ಚಿತ್ರ 14ಬಿಡಿಆರ್53 | Kannada Prabha

ಸಾರಾಂಶ

ಬೀದರ್‌ನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ ಅವರ 133 ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀದರ್

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಅರ್.ಅಂಬೇಡ್ಕರ್‌ ಬರೆದ ಸಂವಿಧಾನದಿಂದ ದೇಶದಲ್ಲಿ ಎಲ್ಲಾ ಜನಾಂಗದವರಿಗೆ ಅಧಿಕಾರ ಸಿಗುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ 133 ಜಯಂತಿ ಆಚರಿಸಲಾಯಿತು. ಈ ವೇಳೆ ಅವರು ಮಾತನಾಡಿದರು.

ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲರು ಡಾ.ಬಿ.ಆರ್.ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಪೂಜೆ ಸಲ್ಲಿಸಿ ಮಾತನಾಡಿ, ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನ ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಹೇಳಿದರು.

ಬೀದರ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಾ.ಶೈಲೇಂದ್ರ ಬೆಲ್ದಾಳೆ, ಎಂಎಲ್ಸಿ ರಘುನಾಥರಾವ ಮಲ್ಕಾಪೂರೆ ಮಾತನಾಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಪರಿಶಿಷ್ಟ ಘಟಕದ ಕಾರ್ಯದರ್ಶಿ ಜೈಕುಮಾರ ಕಾಂಗೆ, ಬೀದರ ಲೋಕ ಸಭಾ ಕ್ಷೇತ್ರದ ಪ್ರಭಾರಿ ಅರಹಂತ ಸಾವಳೆ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ರಾಜಶೇಖರ ನಾಗಮೂರ್ತಿ, ಕಲಬುರಗಿ ವಿಭಾಗದ ಸಹ ಸಂಘಟನಾ ಪ್ರಭಾರಿ ಈಶ್ವರಸಿಂಗ್ ಠಾಕೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಯರನಳ್ಳಿ, ಕಿರಣ ಪಾಟೀಲ, ಮಾಧವರಾವ ಹುಸೂರೆ, ಮಾಜಿ ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಗಜೇಂದ್ರ ಕನಕಟಕರ್, ಕಾರ್ಯಾಲಯ ಕಾರ್ಯದರ್ಶಿ ರಾಜಕುಮಾರ ಪಾಟೀಲ ನೆಮತಾಬಾದ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಲುಂಬಾಣಿ ಗೌತಮ, ಯೋಗೇಶ್ವರಿ, ಸೋನ್ ಕಾಂಬಳೆ, ಮಹಾನಂದಾ ಪಾಟೀಲ, ಸರಸ್ವತಿ ಹೇಮಶೆಟ್ಟಿ, ಶೋಭಾ ತೆಲಂಗ್, ರೂಪವತಿ ಜಾಧವ, ಬಸವರಾಜ ಆರ್ಯ, ಶಶಿ ಹೊಸಳ್ಳಿ, ರಾಜೇಂದ್ರ ಪೂಜಾರಿ, ಗಣೇಶ ಭೋಸ್ಲೆ, ಸುಭಾಷ ಮಡಿವಾಳ, ನವೀನ ಚಿಟ್ಟಾ, ಗುರುನಾಥ ಜಾಂತಿಕರ್, ರಾಜರೆಡ್ಡಿ ಶಹಾಬಾದೆ, ರಾಮಶೆಟ್ಟಿ ಪನ್ನಾಳೆ, ಅಶೋಕ ಹೋಕಾರೆ, ಅರವಿಂದ ಮುತ್ಯಾ, ವೀರಣ್ಣಾ ಕಾರಬಾರಿ, ಪ್ರಭಾಕರ ನಾಗರಾಳೆ, ಬಾಬುರಾವ ಕಾರಬಾರಿ, ಅನೀಲ ಭೂಸಾರೆ, ಶಿವರಾಜ ಗಂದಗೆ, ಶ್ರೀನಿವಾಸ ಚೌಧರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌
ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!