ಕನ್ನಡಪ್ರಭ ವಾರ್ತೆ ಬೆಳಗಾವಿ
ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ, ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರು ಮತ್ತು ಜಗದ್ಗುರು ಶಂಕರಾಚಾರ್ಯರು ಹಿಂದೆ ಒಟ್ಟಾಗಿ ಕೆಲಸ ಮಾಡಿದ್ದರೇನೋ ಎನ್ನುವ ಭಾವನೆ ನಮಗೆ ಬರುತ್ತಿದೆ. ಜಾತಿ ಮೀರಿ ಎರಡೂ ಮಠಗಳು ಕೆಲಸ ಮಾಡುತ್ತಿವೆ. ಮಠಗಳ ಮಧ್ಯೆ ಸಾಮರಸ್ಯ ಮೂಡಬೇಕು ಎನ್ನುವುದು ನಮ್ಮ ಭಾವನೆ. ಸ್ವರ್ಣವಲ್ಲೀ ಮಠ ಪೂರ್ಣ ಸುಖ ನೀಡುವ ಮಠವಾಗಿದೆ ಎಂದರು.
ಸೋಂದಾ ಸ್ವರ್ಣವಲ್ಲೀ ಶ್ರೀಗಳು ಭಗವದ್ಗೀತೆಯ ಅಭಿಯಾನವನ್ನು ಕರ್ನಾಟಕದ ತುಂಬ ಮಾಡುವ ಮೂಲಕ ಮನೆ ಮಾತಾಗಿದ್ದಾರೆ. ಶ್ರೀಗಳು ನಮ್ಮ ಸನಾತನ ಧರ್ಮದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.2007 ರಿಂದಲೂ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ ಎಂದರು.
ಭಗವದ್ಗೀತೆ ಅಭಿಯಾನಕ್ಕೆ ವೀರಶೈವ ಮಠಗಳಿಂದ ಉತ್ತಮ ಸಹಕಾರ ಸಿಗುತ್ತಿದೆ. ಅದರಲ್ಲೂ ಹುಕ್ಕೇರಿ ಮಠದಿಂದ ಪರಮೋಚ್ಛ ಸಹಕಾರ ಇದೆ. ಇಲ್ಲಿ ಒಂದು ಮಠದಿಂದ ಇನ್ನೊಂದು ಮಠದ ಸ್ವಾಮಿಗಳನ್ನು ಸತ್ಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಾಮಾಜಿಕ, ಧಾರ್ಮಿಕ ಕಾರ್ಯದಲ್ಲಿ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಬೆಲ್ಲದಂತೆ ತಾನಾಗಿಯೇ ಉಕ್ಕೇರುವ ಸಿಹಿ ಹುಕ್ಕೇರಿ ಶ್ರೀಗಳು. ಅವರು ನೀಡಿರುವ ಗೀತಾಭಿಯಾನಾರ್ಣವ ಪ್ರಶಸ್ತಿ ಶಂಕರಾಚಾರ್ಯರಿಗೆ ಸಲ್ಲಬೇಕು ಎಂದು ತಿಳಿಸಿದರು.
ಹಿಂದು ಧರ್ಮದಲ್ಲಿರುವ ಎಲ್ಲ ಸಂಪ್ರದಾಯ ಮಠ, ಮಾನ್ಯಗಳು ಒಂದಾಗಿ ಸನಾತನ ಸಂಸ್ಕೃತಿ ಎತ್ತಿ ಹಿಡಿದಾಗ ಮಾತ್ರ ಭಾರತಕ್ಕೆ ಭವಿಷ್ಯ ಇದೆ. ಈ ನಿಟ್ಟಿನಲ್ಲಿ ನಮ್ಮದ್ದು ವೀರಶೈವ ಮಠ, ರೇಣುಕಾಚಾರ್ಯರ ಪರಂಪರೆಯ ಮಠ, ಸ್ವರ್ಣವಲ್ಲಿ ಜಗದ್ಗುರುಗಳದ್ದು ಶಂಕರಾಚಾರ್ಯರ ಪಂರಪರೆಯ ಮಠವಾಗಿದೆ. ಇತಿಹಾಸದಲ್ಲಿ ಜಗದ್ಗುರು ರೇಣುಕಾಚಾರ್ಯರು ಮತ್ತು ಶಂಕರಾಚಾರ್ಯರು ಒಂದಾಗಿದ್ದರು ಎನ್ನುವ ಮಾತು ಇದೆ.
----------ಭಗವದ್ಗೀತೆಯನ್ನು ಜನರ ಬಾಯಿಂದ ಹೇಳಿಸಬೇಕು. ಅವರಿಗೆ ತಿಳಿಸಬೇಕು ಎನ್ನುವುದೇ ಭಗವದ್ಗೀತೆ ಅಭಿಯಾನದ ಉದ್ದೇಶವಾಗಿದೆ. ಡಿ. 23 ರಂದು ಬೆಳಗಾವಿಯಲ್ಲಿ ನಡೆಯಲಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.