ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯೇ ಶಿಕ್ಷಣದ ಗುರಿ: ಎನ್.ಆರ್. ಕುಲಕರ್ಣಿ

KannadaprabhaNewsNetwork |  
Published : Nov 17, 2025, 01:45 AM IST
ಶಿರಹಟ್ಟಿ ಪಟ್ಟಣದ ಎಫ್.ಎಂ. ಡಬಾಲಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪೋಷಕರ, ಉಪನ್ಯಾಸಕರ ವಿದ್ಯಾರ್ಥಿಗಳ ಹಾಗೂ ಆಡಳಿತ ಮಂಡಳಿಯ ಮಹಾಸಭೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಆರ್. ಕುಲಕರ್ಣಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳ ಕಲಿಕೆ ಆಸಕ್ತಿದಾಯಕವಾಗಿರಬೇಕು. ವಿದ್ಯಾರ್ಥಿಗಳು ಯಾವುದೇ ಭಯ, ಆತಂಕ, ಒತ್ತಡಕ್ಕೆ ಒಳಗಾಗದೆ ಸಮ ಚಿತ್ತದಿಂದ ಕಲಿಕೆಯ ಕಡೆ ಏಕಾಗ್ರಗೊಳ್ಳಬೇಕು.

ಶಿರಹಟ್ಟಿ: ಮಕ್ಕಳ ಭವಿಷ್ಯ ಮತ್ತು ಅವರ ಉತ್ತಮ ಶಿಕ್ಷಣಕ್ಕಾಗಿ ನಾವೆಲ್ಲರೂ ಶ್ರಮಿಸಬೇಕು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯೇ ಶಿಕ್ಷಣದ ಆದ್ಯತೆ. ಹಾಗಾಗಿ ಮನೆಯೇ ಮೊದಲ ಪಾಠಶಾಲೆ ಎಂಬಂತೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಆರ್. ಕುಲಕರ್ಣಿ ಹೇಳಿದರು.

ಪಟ್ಟಣದ ಎಫ್.ಎಂ. ಡಬಾಲಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ೨೦೨೫- ೨೬ನೇ ಸಾಲಿನ ಪೋಷಕರ, ಉಪನ್ಯಾಸಕರ, ವಿದ್ಯಾರ್ಥಿಗಳ ಹಾಗೂ ಆಡಳಿತ ಮಂಡಳಿಯ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಪೋಷಕರು ಹೊಟ್ಟೆ- ಬಟ್ಟೆ ಕಟ್ಟಿ ಮಕ್ಕಳನ್ನು ಓದಿಸಬೇಕು ಎಂಬ ಆಲೋಚನೆ ಹೊಂದಿರುತ್ತಾರೆ. ಅವರ ಮುಂದಿನ ಭವಿಷ್ಯ ರೂಪಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ಪ್ರೇರಣಾತ್ಮಕ ಉಪನ್ಯಾಸ ನೀಡಿದ ಸಂಸ್ಥೆಯ ಆಡಳಿತ ಅಧಿಕಾರಿ ಐ.ಬಿ. ಬೆನಕೊಪ್ಪ ಮಾತನಾಡಿ, ಮಕ್ಕಳ ಕಲಿಕೆ ಆಸಕ್ತಿದಾಯಕವಾಗಿರಬೇಕು. ವಿದ್ಯಾರ್ಥಿಗಳು ಯಾವುದೇ ಭಯ, ಆತಂಕ, ಒತ್ತಡಕ್ಕೆ ಒಳಗಾಗದೆ ಸಮ ಚಿತ್ತದಿಂದ ಕಲಿಕೆಯ ಕಡೆ ಏಕಾಗ್ರಗೊಳ್ಳಬೇಕು. ಕಲಿಕೆ ಎಲ್ಲ ಚಟುವಟಿಕೆಯಲ್ಲಿ ತಮ್ಮನ್ನು ತಾವು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಾ ಸದೃಢ ವ್ಯಕ್ತಿತ್ವ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಸದಾ ಜಾಗೃತವಾಗಿರಬೇಕು. ಆ ಹಿನ್ನೆಲೆಯಲ್ಲಿ ಉಪನ್ಯಾಸಕರು ಪೋಷಕರು ವಿದ್ಯಾರ್ಥಿಗಳು ಜತೆ ಸಮಾಜದ ಪಾತ್ರ ಹಿರಿದಾದುದು ಎಂದರು.

ಕಾಲೇಜಿನ ಪ್ರಾಚಾರ್ಯ ಎಂ.ಸಿ. ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಎಸ್.ವೈ. ಪಾಟೀಲ್, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ, ಪುಷ್ಪಾ ಹೂಗಾರ್, ಕಲ್ಲೂರ್ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಎನ್. ಹನುಮರಡ್ಡಿ ಸಂವಿಧಾನದ ಪೀಠಿಕೆ ಓದಿಸಿದರು. ಶಿಕ್ಷಣ ಶಾಸ್ತ್ರ ಉಪನ್ಯಾಸಕರಾದ ಸುಧಾ ಹುಚ್ಚಣ್ಣವರ ಮಹಾಸಭೆಯ ಔಚಿತ್ಯ ಕುರಿತು ಮಾತನಾಡಿದರು.

ಉಪನ್ಯಾಸಕರಾದ ಪಿ.ಎನ್. ಕುಲಕರ್ಣಿ, ಎಂ.ಎಂ. ನದಾಫ್, ವೈ.ಎಸ್. ಪಂಗಣ್ಣವರ್, ಎಫ್.ಎ. ಬಾಬುಕಾನವರ್, ಪಿ.ವಿ. ಹೊಸೂರ್, ಮುಖ್ಯೋಪಾಧ್ಯಾಯ ಆರ್.ಎಫ್. ಬಡಕುರ್ಕಿ, ನೌಶಾದ್ ಶಿಗ್ಲಿ ಇದ್ದರು. ಬಸವರಾಜ್ ಶಿರುಂದ ವಂದಿಸಿದರು. ವಿದ್ಯಾರ್ಥಿನಿಯರಾದ ಕವಿತಾ ಇಟಗಿ, ತೇಜಸ್ವಿನಿ ಬಂಕಾಪುರ, ಶಾಂತಾ ಕುಳಗೇರಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವೇ ಸುಗ್ಗಿ ಸಂಕ್ರಾಂತಿ
ಕೆರೂರು ಗ್ರಾಮಸ್ಥರಿಂದ ರಸ್ತೆ ಅತಿಕ್ರಮಣ ತೆರವಿಗೆ ಗಡುವ ನಿಗದಿ